MI vs KKR, IPL 2023: ಐಪಿಎಲ್ನಲ್ಲಿಂದು ಎರಡು ಪಂದ್ಯ: ರೋಹಿತ್ ಪಡೆಗೆ ಕೆಕೆಆರ್ ಸವಾಲ್
GT vs RR, IPL 2023: ಐಪಿಎಲ್ನಲ್ಲಿಂದು ಎರಡು ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ ಆಗಲಿದೆ. ದ್ವಿತೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ಸವಾಲನ್ನು ಎದುರಿಸಲಿದೆ.
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಎರಡು ಪಂದ್ಯಗಳು ನಡೆಯಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ನಿತೀಶ್ ರಾಣ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ (MI vs KKR) ಮುಖಾಮುಖಿ ಆಗಲಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ ತಂಡ ಸಂಜು ಸ್ಯಾಮ್ಸನ್ ನಾಯಕನಾಗಿರುವ ರಾಜಸ್ಥಾನ್ ರಾಯಲ್ಸ್ (GT vs RR) ಸವಾಲನ್ನು ಎದುರಿಸಲಿದೆ. ಎರಡೂ ಪಂದ್ಯಗಳು ರೋಚಕತೆ ಸೃಷ್ಟಿಸಿದ್ದು ಐಪಿಎಲ್ನಲ್ಲಿಂದು ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.
ಮುಂಬೈ-ಡೆಲ್ಲಿ:
ಆಡಿದ ಮೂರು ಪಂದ್ಯಗಳಲ್ಲಿ ಸತತ ಎರಡು ಸೋಲುಂಡು ಕಳೆದ ಮ್ಯಾಚ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸುವ ಮೂಲಕ ಮುಂಬೈ ಗೆಲುವಿನ ಲಯಕ್ಕೆ ಮರಳಿದೆ. ನಾಯಕ ರೋಹಿತ್ ಶರ್ಮಾ ಫಾರ್ಮ್ಗೆ ಬಂದಿರುವುದು ತಂಡದ ದೊಡ್ಡ ಪ್ಲಸ್ ಪಾಯಿಂಟ್. ಇಶಾನ್ ಕಿಶನ್ ಕೂಡ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ತಿಲಕ್ ವರ್ಮಾ ಪ್ರತಿ ಪಂದ್ಯದಲ್ಲಿ ತಂಡಕ್ಕೆ ನರವಾಗುತ್ತಿದ್ದಾರೆ. ಆದರೆ, ಸೂರ್ಯಕುಮಾರ್ ಯಾದವ್ ಅವರ ಕಳಪೆ ಪ್ರದರ್ಶನ ಮುಂದುವರೆಯುತ್ತಲೇ ಇದೆ. ಟಿಮ್ ಡೇವಿಡ್, ಕ್ಯಾಮ್ರೋನ್ ಗ್ರೀನ್, ನೇಹಲ್ ವಡೇರಾ ಅಂತಿಮ ಹಂತದಲ್ಲಿ ರನ್ ಗಳಿಸಲು ಶುರುಮಾಡಿದ್ದಾರೆ. ಜೇಸನ್ ಬೆಹ್ರೆಂಡರ್ಫ್, ರಿಲೆ ಮೆರೆದಿತ್, ಪಿಯೂಷ್ ಚಾವ್ಲಾ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.
ಇತ್ತ ಕೆಕೆಆರ್ ಆಡಿದ ನಾಲ್ಕು ಪಂದ್ಯಗಳ ಪೈಕಿ ತಲಾ ಎರಡರಲ್ಲಿ ಸೋಲು-ಗೆಲುವು ಕಂಡು ಐದನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ಸೋಲು ಕಂಡರೂ ಬ್ಯಾಟಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದೆ. ನಾಯಕ ನಿತೀಶ್ ರಾಣ ಹಾಗೂ ರಿಂಕು ಸಿಂಗ್ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಎನ್. ಜಗದೀಸನ್, ವೆಂಕಟೇಶ್ ಅಯ್ಯರ್ ಕೂಡ ಫಾರ್ಮ್ನಲ್ಲಿದ್ದಾರೆ. ರೆಹ್ಮಾನುಲ್ಲ ಗುರ್ಬಜ್, ಶಾರ್ದೂಲ್ ಥಾಕೂರ್ ಬ್ಯಾಟಿಂಗ್ನಲ್ಲಿ ಬಲ ತುಂಬಿದರೆ ತಂಡದ ಮೊತ್ತ ಮತ್ತೊಮ್ಮೆ 200+ ಆಗುವುದು ಖಚಿತ. ಆಂಡ್ರೆ ರಸೆಲ್ ಇಂಜುರಿಗೆ ತುತ್ತಾಗಿದ್ದು ಇವರ ಲಭ್ಯತೆ ಬಗ್ಗೆ ಸಿಕ್ಕಿಲ್ಲ. ಸುನಿಲ್ ನರೈನ್, ವರುಣ್ ಚಕ್ರವರ್ತಿ, ಲೂಕಿ ಫರ್ಗುಸನ್, ಉಮೇಶ್ ಯಾದವ್, ಸುಯೇಶ್ ಶರ್ಮಾ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ.
IPL 2023: ಸೊನ್ನೆ ಸುತ್ತಿ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದ ದಿನೇಶ್ ಕಾರ್ತಿಕ್
ಗುಜರಾತ್- ರಾಜಸ್ಥಾನ್:
ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಜಿಟಿ ತಂಡದ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಜಯ ಸಾಧಿಸಿದೆ. ಉತ್ತಮ ರನ್ರೇಟ್ ಕೂಡ ಹೊಂದಿದೆ. ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟ್ನಿಂದ ರನ್ ಬರುತ್ತಿಲ್ಲ. ಆದರೂ ತಂಡದಲ್ಲಿರುವ ಇತರೆ ಬ್ಯಾಟರ್ಗಳು ಪಂದ್ಯವನ್ನು ಗೆಲ್ಲಿಸಿಕೊಡುತ್ತಿದ್ದಾರೆ. ವೃದ್ದಿಮಾನ್ ಸಾಹ ಹಾಗೂ ಶುಭ್ಮನ್ ಗಿಲ್ ಪ್ರತಿ ಪಂದ್ಯದಲ್ಲಿ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಸಾಯಿ ಸುದರ್ಶನ್ ಕೂಡ ನೆರವಾಗುತ್ತಿದ್ದಾರೆ. ಡೇವಿಡ್ ಮಿಲ್ಲರ್ ಹಾಗೂ ರಾಹುಲ್ ತೇವಾಟಿಯ ಫಿನಿಶರ್ಗಳಾಗಿ ಗುರುತಿಸಿಕೊಂಡಿದ್ದಾರೆ. ಶಮಿ, ಅಲ್ಜರಿ ಜೋಸೆಫ್, ಜೋಶ್ವಾ ಲಿಟಲ್, ರಶೀದ್ ಖಾನ್ ಹಾಗೂ ಮೋಹಿತ್ ಶರ್ಮಾ ಮಾರಕವಾಗಿ ಕಾಣಿಸಿಕೊಂಡಿದ್ದಾರೆ.
ರಾಜಸ್ಥಾನ್ ತಂಡ ಟೇಬಲ್ ಟಾಪ್ನಲ್ಲಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಒಂದರಲ್ಲಿ ಮಾತ್ರ ಸೋತಿದೆ. ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್, ಶಿಮ್ರೋನ್ ಹೆಟ್ಮೇರ್ ಪ್ರಮುಖ ಬ್ಯಾಟಿಂಗ್ ಅಸ್ತ್ರ. ಜೇಸನ್ ಹೋಲ್ಡರ್ ಮತ್ತು ಆರ್. ಅಶ್ವಿನ್ ಆಲ್ರೌಂಡ್ ಪ್ರದರ್ಶನ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸುತ್ತಿದೆ. ಯುಜ್ವೇಂದ್ರ ಚಹಲ್ ವಿಕೆಟ್ ಟೇಕಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರೆ, ಸಂದೀಪ್ ಶರ್ಮಾ, ಕುಲ್ದೀಪ್ ಸೇನ್, ಆ್ಯಡಂ ಝಂಪಾ ಸಾಥ್ ನೀಡುತ್ತಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ