AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ನಿಟ್ಟುಸಿರು ಬಿಟ್ಟ ಚೆನ್ನೈ ಫ್ಯಾನ್ಸ್; ತಂಡ ಸೇರಿಕೊಂಡ ಧೋನಿಯ ಉತ್ತರಾಧಿಕಾರಿ..!

IPL 2023: ಇಂಗ್ಲೆಂಡ್‌ ತಂಡದ ಟೆಸ್ಟ್ ನಾಯಕ ಮತ್ತು ಅನುಭವಿ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಚೆನ್ನೈ ಸೂಪರ್ ಕಿಂಗ್ಸ್ ಪಾಳಯವನ್ನು ಸೇರಿಕೊಂಡಿದ್ದಾರೆ.

IPL 2023: ನಿಟ್ಟುಸಿರು ಬಿಟ್ಟ ಚೆನ್ನೈ ಫ್ಯಾನ್ಸ್; ತಂಡ ಸೇರಿಕೊಂಡ ಧೋನಿಯ ಉತ್ತರಾಧಿಕಾರಿ..!
ಧೋನಿ
ಪೃಥ್ವಿಶಂಕರ
|

Updated on: Mar 24, 2023 | 3:23 PM

Share

ಚೆನ್ನೈ ಸೂಪರ್ ಕಿಂಗ್ಸ್ ತಂಡದ (Chennai Super Kings) ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಆಟಗಾರ ಇದೀಗ ತಂಡವನ್ನು ಸೇರಿಕೊಂಡಿದ್ದಾನೆ. ಇಂಜುರಿಯಿಂದ ಬಳಲುತ್ತಿದ್ದ ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್ (Ben Stokes), ಈ ಬಾರಿಯ ಐಪಿಎಲ್​ನಲ್ಲಿ (IPL 2023) ಆಡುವುದು ಅನುಮಾನ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಈ ಎಲ್ಲಾ ಊಹಾಪೋಹಗಳಿಗು ತೆರೆಬಿದ್ದಿದ್ದು, ಇಂಗ್ಲೆಂಡ್‌ ತಂಡದ ಟೆಸ್ಟ್ ನಾಯಕ ಮತ್ತು ಅನುಭವಿ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಮತ್ತು ಮೊಯಿನ್ ಅಲಿ ಚೆನ್ನೈ ಸೂಪರ್ ಕಿಂಗ್ಸ್ ಪಾಳಯವನ್ನು ಸೇರಿಕೊಂಡಿದ್ದಾರೆ. ಈ ಇಬ್ಬರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಚೆನ್ನೈ ಫ್ರಾಂಚೈಸ್ ಈ ಇಬ್ಬರೂ ಇಂಗ್ಲೆಂಡ್ ಆಲ್‌ರೌಂಡರ್‌ಗಳು ತಂಡವನ್ನು ಸೇರಿಕೊಂಡಿದ್ದಾರೆ ಎಂದು ಬರೆದುಕೊಂಡಿದೆ. ಐಪಿಎಲ್ ಆರಂಭಕ್ಕೂ ಮುನ್ನ ನಡೆದ ಮಿನಿ ಹರಾಜಿನಲ್ಲಿ ಬೆನ್ ಸ್ಟೋಕ್ಸ್‌ ಅವರನ್ನು ಧೋನಿ ತಂಡ 16.25 ಕೋಟಿಗೆ ಖರೀದಿಸಿತ್ತು. ಅಲ್ಲದೆ ಧೋನಿ ನಂತರ ತಂಡವನ್ನು ಸ್ಟೋಕ್ಸ್ ಮುನ್ನಡೆಸಲಿದ್ದಾರೆ ಎಂಬ ಮಾತುಗಳು ಕೂಡ ಈಗಾಗಲೇ ಕೇಳಿಬರುತ್ತಿವೆ.

6 ವರ್ಷಗಳ ನಂತರ ಧೋನಿ-ಸ್ಟೋಕ್ಸ್ ಒಟ್ಟಿಗೆ

ವಾಸ್ತವವಾಗಿ, ಧೋನಿ ಮತ್ತು ಬೆನ್ ಸ್ಟೋಕ್ಸ್ ಈ ಹಿಂದೆ ಐಪಿಎಲ್‌ನಲ್ಲಿ ಒಟ್ಟಿಗೆ ಆಡಿದ್ದಾರೆ. 2017ರ ಐಪಿಎಲ್​ನಲ್ಲಿ ಈ ಇಬ್ಬರೂ ಆಟಗಾರರು ರೈಸಿಂಗ್ ಪುಣೆ ಸೂಪರ್‌ಜೈಂಟ್‌ ಪರ ಆಡಿದ್ದರು. ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ಒಟ್ಟಿಗೆ ಆಡಿದ್ದ ಧೋನಿ-ಸ್ಟೋಕ್ಸ್, ಒಟ್ಟಿಗೆ 12 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಆ ಸೀಸನ್​ನಲ್ಲಿ 12 ಪಂದ್ಯಗಳನ್ನಾಡಿದ್ದ ಬೆನ್ ಸ್ಟೋಕ್ಸ್, ಒಂದು ಶತಕ ಮತ್ತು ಅರ್ಧಶತಕದ ಸಹಾಯದಿಂದ 316 ರನ್ ಬಾರಿಸಿದ್ದರು.

ಆ ಆವೃತ್ತಿಯಲ್ಲಿ ಪುಣೆ ತಂಡ ಕೂಡ ಫೈನಲ್ ತಲುಪಿತ್ತು. ಆದರೆ, ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಈ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 1 ರನ್​ಗಳಿಂದ ಸೋಲನುಭವಿಸಬೇಕಾಯಿತು. ಇನ್ನು ಚೆನ್ನೈ ಪರ ಸ್ಟೋಕ್ಸ್ ಹಾಗೂ ಧೋನಿ ಜೊತೆಯಾಗಿ ಆಡಲಿದ್ದು, ಈ ತಂಡ ಐದನೇ ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲಲಿ ಎಂದು ಈ ತಂಡದ ಅಭಿಮಾನಿಗಳು ಹಾರೈಸಿದ್ದಾರೆ.

The Hundred: ಮಾರಾಟವಾಗದೆ ಉಳಿದ ಬಾಬರ್, ರಿಜ್ವಾನ್, ಪೊಲಾರ್ಡ್, ರಸೆಲ್..!

ದೊಡ್ಡ ಮ್ಯಾಚ್ ವಿನ್ನರ್ ಸ್ಟೋಕ್ಸ್

ಬೆನ್ ಸ್ಟೋಕ್ಸ್ ಐಪಿಎಲ್‌ನಲ್ಲಿ ಕೇವಲ 43 ಪಂದ್ಯಗಳನ್ನು ಆಡಿದ್ದು, ಅವರ ಬ್ಯಾಟ್ 25.55 ಸರಾಸರಿಯಲ್ಲಿ 920 ರನ್ ಗಳಿಸಿದೆ. ಈ ಲೀಗ್‌ನಲ್ಲಿ ಸ್ಟೋಕ್ಸ್ ಎರಡು ಶತಕಗಳನ್ನು ಬಾರಿಸಿದ್ದು, ಬೌಲಿಂಗ್​ನಲ್ಲಿ 28 ವಿಕೆಟ್ ಕೂಡ ಕಬಳಿಸಿದ್ದಾರೆ. ಅಲ್ಲದೆ ಸ್ಟೋಕ್ಸ್​ಗೆ ಯಾವುದೇ ಸಮಯದಲ್ಲೂ ಪಂದ್ಯದ ಗತಿ ಬದಲಾಯಿಸುವ ಸಾಮಥ್ಯ್ರವಿದ್ದು, ಅವರ ಆಗಮನ ಚೆನ್ನೈ ತಂಡಕ್ಕೆ ಆನೆಬಲ ತಂದಿದೆ. ಇನ್ನು ಸ್ಟೋಕ್ಸ್ ಆಲ್​ರೌಂಡರ್ ಆಗಿರುವುದರಿಂದ ಅವಶ್ಯಕ ಸಮಯದಲ್ಲಿ ತಂಡಕ್ಕೆ ಬೌಲಿಂಗ್​ನಲ್ಲೂ ನೆರವಾಗಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ