AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Closing Ceremony: ನಾಳೆ ಐಪಿಎಲ್ 2023ಕ್ಕೆ ತೆರೆ: ಗ್ರ್ಯಾಂಡ್ ಆಗಿ ನಡೆಯಲಿದೆ ಸಮಾರೋಪ ಸಮಾರಂಭ

IPL 2023 Closing Ceremony: Date, Live Streaming: ಚೆನ್ನೈ -ಗುಜರಾತ್ ನಡುವಣ ಐಪಿಎಲ್ 2023 ಫೈನಲ್ ರೋಚಕ ಕಾದಾಟ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ 2023 ಸಮಾರೋಪ ಸಮಾರಂಭ ಏರ್ಪಡಿಸಲು ಮುಂದಾಗಿದೆ.

IPL 2023 Closing Ceremony: ನಾಳೆ ಐಪಿಎಲ್ 2023ಕ್ಕೆ ತೆರೆ: ಗ್ರ್ಯಾಂಡ್ ಆಗಿ ನಡೆಯಲಿದೆ ಸಮಾರೋಪ ಸಮಾರಂಭ
ipl 2023 closing ceremony
Vinay Bhat
|

Updated on:May 27, 2023 | 11:11 AM

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಇನ್ನು ಉಳಿದಿರುವುದು ಕೇವಲ ಒಂದು ಪಂದ್ಯ ಮಾತ್ರ. ಶುಕ್ರವಾರ ನಡೆದ ಕ್ವಾಲಿಫೈಯರ್-2 (Qualifier 2) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಗುಜರಾತ್ ಟೈಟಾನ್ಸ್ ಫೈನಲ್​ಗೆ ಪ್ರವೇಶ ಪಡೆದಿದೆ. ಈ ಮೂಲಕ ಮೇ 28 ಭಾನುವಾರದಂದು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ (CSK vs GT) ಐಪಿಎಲ್ 2023 ಫೈನಲ್​ನಲ್ಲಿ ಮುಖಾಮುಖಿ ಆಗಲಿದೆ. ಹಾಲಿ ಚಾಂಪಿಯನ್ ಮತ್ತು ಮಾಜಿ ಚಾಂಪಿಯನ್ನರ್ ಕಾದಾಟಕ್ಕೆ ಇಡೀ ವಿಶ್ವವೇ ಕಾದುಕುಳಿತಿದೆ.

ಈ ರೋಚಕ ಕಾದಾಟ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ 2023 ಸಮಾರೋಪ ಸಮಾರಂಭ ಏರ್ಪಡಿಸಲು ಮುಂದಾಗಿದೆ. ಇದನ್ನು ಅದ್ಧೂರಿಯಾಗಿ ನೆರವೇರಿಸಲು ತೀರ್ಮಾನಿಸಿದೆ. ಇದರಲ್ಲಿ ಖ್ಯಾತ ರ‍್ಯಾಪರ್​​ಗಳು ಪ್ರದರ್ಶನ ನೀಡಲಿದ್ದಾರೆ. ರ‍್ಯಾಪರ್​​ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಪಂದ್ಯಕ್ಕೂ ಮುನ್ನ ಕಿಂಗ್​ ಮತ್ತು ನ್ಯೂಕ್ಲಿಯಾ ಅಭಿಮಾನಿಗಳನ್ನು ರಂಜಿಸಿದರೆ, ಪಂದ್ಯದ ಮೊದಲ ಇನ್ನಿಂಗ್ಸ್ ನಂತರ, ಜೋನಿತಾ ಗಾಂಧಿ ಮತ್ತು ಡಿವೈನ್ ತಮ್ಮ ಪ್ರದರ್ಶನ ನೀಡಲಿದ್ದಾರೆ.

IPL 2023: ಕೊಹ್ಲಿ ಹಾದಿಯಲ್ಲಿ ಶುಭ್​ಮನ್; 60 ಎಸೆತಗಳಲ್ಲಿ 129 ರನ್ ಚಚ್ಚಿದ ಗಿಲ್ ಬರೆದ ದಾಖಲೆಗಳಿವು

ಇದನ್ನೂ ಓದಿ
Image
Shubman Gill Six: ಶುಭ್​ಮನ್ ಗಿಲ್ 106-m ಸಿಕ್ಸ್ ಕಂಡು ಸ್ತಬ್ಧವಾದ ನರೇಂದ್ರ ಮೋದಿ ಸ್ಟೇಡಿಯಂ: ಹಾರ್ದಿಕ್ ಪಾಂಡ್ಯ ಏನು ಮಾಡಿದ್ರು ನೋಡಿ
Image
Shubman Gill: ಶುಭ್​ಮನ್ ಗಿಲ್ ಶತಕ ಸಿಡಿಸಿದಾಗ ರೋಹಿತ್ ಶರ್ಮಾ ಹಾಗೂ ಜಯ್ ಶಾ ಕೊಟ್ಟ ರಿಯಾಕ್ಷನ್ ನೋಡಿ
Image
Shubman Gill: ಶತಕದ ಸರದಾರ ಶುಭ್​ಮನ್ ಗಿಲ್ ಪಂದ್ಯ ಮುಗಿದ ಬಳಿಕ ಆಡಿದ ಮಾತುಗಳೇನು ಗೊತ್ತೇ?
Image
IPL 2023: 6,6,6; 5 ರನ್ ನೀಡಿ 5 ವಿಕೆಟ್ ಉರುಳಿಸಿದ್ದ ಬೌಲರ್​ ಸದ್ದಡಗಿಸಿದ ಗಿಲ್..!

ಹಾಗಾದರೆ ಐಪಿಎಲ್ 2023 ಕ್ಲೋಸಿಂಗ್ ಸೆರಮನಿ ಯಾವಾಗ?, ಎಷ್ಟು ಗಂಟೆಗೆ?, ಯಾರೆಲ್ಲ ಸಾಕ್ಷಿಯಾಗಲಿದ್ದಾರೆ ಎಂಬುದನ್ನು ನೋಡೋಣ.

ಐಪಿಎಲ್ 2023 ರ ಸಮಾರೋಪ ಸಮಾರಂಭ ಎಲ್ಲಿ ನಡೆಯಲಿದೆ?

ಐಪಿಎಲ್ 2023 ಸಮಾರೋಪ ಸಮಾರಂಭ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಐಪಿಎಲ್ 2023 ರ ಸಮಾರೋಪ ಸಮಾರಂಭ ಯಾವಾಗ ನಡೆಯಲಿದೆ?

ಐಪಿಎಲ್ 2023 ರ ಸಮಾರೋಪ ಸಮಾರಂಭ ಭಾನುವಾರ (ಮೇ 28) ನಡೆಯಲಿದೆ. ಅದ್ಧೂರಿ ಕಾರ್ಯಕ್ರಮ ಸಂಜೆ ಸುಮಾರು 6 ಗಂಟೆಯಿಂದ ಶುರುವಾಗುವ ನಿರೀಕ್ಷೆಯಿದೆ.

ಐಪಿಎಲ್ 2023 ರ ಸಮಾರೋಪ ಸಮಾರಂಭದಲ್ಲಿ ಯಾರು ಭಾಗವಹಿಸಲಿದ್ದಾರೆ?

ರ‍್ಯಾಪರ್​​ಗಳಾದ ಕಿಂಗ್ ಮತ್ತು ಡಿಜೆ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ, ಡಿವೈನ್ ಮತ್ತು ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ರಂಜಿಸಲಿದ್ದಾರೆ.

ಐಪಿಎಲ್ 2023 ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಐಪಿಎಲ್ 2023 ರ ಸಮಾರೋಪ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಲೈವ್ ಸ್ಟ್ರೀಮ್ ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Sat, 27 May 23

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ