AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 DC vs CSK Live Streaming: ಗೆದ್ದರಷ್ಟೇ ಚೆನ್ನೈಗೆ ಉಳಿಗಾಲ! ಪಂದ್ಯ ಎಷ್ಟು ಗಂಟೆಗೆ ಆರಂಭ?

IPL 2023 DC vs CSK Live Streaming: ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಸಿಎಸ್‌ಕೆ 18 ಬಾರಿ ಗೆದ್ದಿದ್ದರೆ, ಡೆಲ್ಲಿ 10 ಬಾರಿ ಗೆದ್ದಿದೆ.

IPL 2023 DC vs CSK Live Streaming: ಗೆದ್ದರಷ್ಟೇ ಚೆನ್ನೈಗೆ ಉಳಿಗಾಲ! ಪಂದ್ಯ ಎಷ್ಟು ಗಂಟೆಗೆ ಆರಂಭ?
ಡೆಲ್ಲಿ-ಚೆನ್ನೈ ಮುಖಾಮುಖಿ
ಪೃಥ್ವಿಶಂಕರ
|

Updated on:May 19, 2023 | 8:40 PM

Share

16ನೇ ಆವೃತ್ತಿಯ ಐಪಿಎಲ್ (IPL 2023) ಮುಕ್ತಾಯದ ಹಂತಕ್ಕೆ ತಲುಪಿದೆ. ಗುಂಪು ಹಂತದಲ್ಲಿ ಇನ್ನು 5 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಐಪಿಎಲ್ ಡಬಲ್ ಹೆಡರ್​ನ ಮೊದಲ ಪಂದ್ಯದಲ್ಲಿ ಡೇವಿಡ್ ವಾರ್ನರ್ (David Warner) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (Delhi Capitals vs Chennai Super Kings) ನಾಳೆ ಶನಿವಾರ ನವದೆಹಲಿಯಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಗುಂಪು ಹಂತದಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಲಿವೆ. ಚೆನ್ನೈ ತನ್ನ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಚಿಪಾಕ್​ನಲ್ಲಿ ಸೋತಿತು. ಮತ್ತೊಂದೆಡೆ ಪಂಜಾಬ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಗೆಲುವು ಸಾಧಿಸಿತ್ತು. ಇನ್ನು ಈ ಬಾರಿ ಐಪಿಎಲ್‌ನ ಮೊದಲ ಮುಖಾಮುಖಿಯಲ್ಲಿ ಸಿಎಸ್‌ಕೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತ್ತು. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ದೆಹಲಿಗೆ ಕಳೆದುಕೊಳ್ಳಲು ಏನೂ ಇಲ್ಲ. ಮತ್ತೊಂದೆಡೆ, ಸಿಎಸ್‌ಕೆ 15 ಅಂಕಗಳೊಂದಿಗೆ ಪ್ಲೇ ಆಫ್‌ಗಿಂತ ಒಂದು ಹೆಜ್ಜೆ ಹಿಂದಿದೆ. ಡೆಲ್ಲಿ ವಿರುದ್ಧ 2 ಅಂಕ ಪಡೆದರೆ ಚೆನ್ನೈ 17 ಅಂಕಗಳೊಂದಿಗೆ ಪ್ಲೇ ಆಫ್​ಗೆ ಎಂಟ್ರಿಕೊಡಲಿದೆ.

ಇನ್ನು ಈ ಉಭಯ ತಂಡಗಳ ನಡುವಿನ ಮುಖಾಮುಖಿಯಾಗಿ ನೋಡಿದರೆ, ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಸಿಎಸ್‌ಕೆ 18 ಬಾರಿ ಗೆದ್ದಿದ್ದರೆ, ಡೆಲ್ಲಿ 10 ಬಾರಿ ಗೆದ್ದಿದೆ.

IPL 2023: ಸವ್ಯಸಾಚಿ ಧೋನಿಗೆ ಯಾರೂ ನಿರೀಕ್ಷಿಸದ ಉಡುಗೊರೆ ನೀಡಿದ ಚೆನ್ನೈ ಫ್ಯಾನ್ಸ್..! ವಿಡಿಯೋ

ಪಂದ್ಯದ ಬಗ್ಗೆಗಿನ ಪೂರ್ಣ ಮಾಹಿತಿ ಇಲ್ಲಿದೆ

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ನಡೆಯಲ್ಲಿದೆ?

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಮೇ 20) ನಡುವಿನ ಪಂದ್ಯ ನಾಳೆ ಶನಿವಾರ ನಡೆಯಲಿದೆ.

ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಎಲ್ಲಿ ನಡೆಯುತ್ತದೆ?

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ನಡೆಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವು ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಟಾಸ್ ಇರಲಿದೆ.

ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?

ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ಇದಲ್ಲದೆ, ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Fri, 19 May 23

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು