KKR vs GT, IPL 2023: ಐಪಿಎಲ್ನಲ್ಲಿಂದು ಎರಡು ಪಂದ್ಯ: ಕೆಕೆಆರ್-ಗುಜರಾತ್ ನಡುವೆ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷೆ
DC vs SRH, IPL 2023: ಐಪಿಎಲ್ನಲ್ಲಿಂದು ಎರಡು ಪಂದ್ಯ ನಡೆಯಲಿದೆ. ಮೊದಲ ಮ್ಯಾಚ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ. ಮತ್ತೊಂದು ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿ ಆಗಲಿದೆ.
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಮೊದಲ ಮ್ಯಾಚ್ನಲ್ಲಿ ನಿತೀಶ್ ರಾಣ ನಾಯಕತ್ವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ (KKR vs GT) ಅನ್ನು ಎದುರಿಸಲಿದೆ. ಮತ್ತೊಂದು ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದ್ದು ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ (DC vs PBKS) ಮುಖಾಮುಖಿ ಆಗಲಿದೆ.
ಕೆಕೆಆರ್ vs ಜಿಟಿ:
ಕೆಕೆಆರ್ ಆಡಿದ ಎಂಟು ಪಂದ್ಯಗಳ ಪೈಕಿ ಐದರಲ್ಲಿ ಸೋಲು ಮೂರರಲ್ಲಿ ಗೆಲುವು ಕಂಡಿದೆ. ಹ್ಯಾಟ್ರಿಕ್ ಸೋಲಿನ ಬಳಿಕ ಕಳೆದ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಜಯ ಸಾಧಿಸಿ ಗೆಲುವಿನ ಲಯಕ್ಕೆ ಮರಳಿದೆ. ಕೆಕೆಆರ್ ತಂಡದ ಪ್ರಮುಖ ಅಸ್ತ್ರ ಬ್ಯಾಟಿಂಗ್ ಶಕ್ತಿ. ನಾಯಕ ನಿತೀಶ್ ರಾಣ ಹಾಗೂ ರಿಂಕು ಸಿಂಗ್ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಎನ್. ಜಗದೀಸನ್ ಹಾಗೂ ಜೇಸನ್ ರಾಯ್ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ವೆಂಕಟೇಶ್ ಅಯ್ಯರ್ ಕೂಡ ಫಾರ್ಮ್ನಲ್ಲಿದ್ದಾರೆ. ರೆಹ್ಮಾನುಲ್ಲ ಗುರ್ಬಜ್, ಶಾರ್ದೂಲ್ ಥಾಕೂರ್ ಬ್ಯಾಟಿಂಗ್ನಲ್ಲಿ ಬಲ ತುಂಬಿದರೆ ತಂಡದ ಮೊತ್ತ ಮತ್ತೊಮ್ಮೆ 200+ ಆಗುವುದು ಖಚಿತ. ಆಂಡ್ರೆ ರಸೆಲ್ ಅಬ್ಬರಿಸಬೇಕಿದೆ. ಸುನಿಲ್ ನರೈನ್, ವರುಣ್ ಚಕ್ರವರ್ತಿ, ಉಮೇಶ್ ಯಾದವ್, ಸುಯೇಶ್ ಶರ್ಮಾ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ.
LSG vs RCB: ಆರ್ಸಿಬಿ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಸಂಪೂರ್ಣ ಮಾಹಿತಿ
ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಜಿಟಿ ತಂಡದ ಪ್ಲೇಯರ್ಸ್ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಉತ್ತಮ ರನ್ರೇಟ್ ಕೂಡ ಹೊಂದಿದೆ. ನಾಯಕ ಹಾರ್ದಿಕ್ ಪಾಂಡ್ಯ ಲಯಕಂಡುಕೊಂಡಿರುವುದು ದೊಡ್ಡ ಪ್ಲಸ್ ಪಾಯಿಂಟ್. ವೃದ್ದಿಮಾನ್ ಸಾಹ ಹಾಗೂ ಶುಭ್ಮನ್ ಗಿಲ್ ಪ್ರತಿ ಪಂದ್ಯದಲ್ಲಿ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಅಭಿನವ್ ಮನೋಹರ್ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದಾರೆ. ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿಯ ಫಿನಿಶರ್ಗಳಾಗಿ ಗುರುತಿಸಿಕೊಂಡಿದ್ದಾರೆ. ಶಮಿ, ಮೋಹಿತ್ ಶರ್ಮಾ, ಜೋಶ್ವಾ ಲಿಟಲ್, ರಶೀದ್ ಖಾನ್ ಹಾಗೂ ನೂರ್ ಅಹ್ಮದ್ ಮಾರಕವಾಗಿದ್ದಾರೆ.
ಪಂದ್ಯ ಆರಂಭ: ಮಧ್ಯಾಹ್ನ 3:30ಕ್ಕೆ
ಡೆಲ್ಲಿ vs ಹೈದರಾಬಾದ್:
ಡೆಲ್ಲಿ ಆರಂಭದಲ್ಲಿ ಆಡಿದ ಏಳು ಪಂದ್ಯಗಳ ಪೈಕಿ ಐದರಲ್ಲೂ ಸೋಲುಂಡು ಎರಡು ಪಂದ್ಯದಲ್ಲಷ್ಟೆ ಜಯ ಸಾಧಿಸಿದೆ. ಮುಂದಿನ ಸುತ್ತಿಗೆ ತೇರ್ಗಡೆ ಆಗಬೇಕಾದರೆ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಆರಂಭದಲ್ಲಿ ಡೆಲ್ಲಿ ತಂಡದ ಪರ ನಾಯಕ ಡೇವಿಡ್ ವಾರ್ನರ್ ಬಿಟ್ಟರೆ ಮತ್ಯಾರು ರನ್ ಕಲೆಹಾಕುತ್ತಿರಲಿಲ್ಲ. ಆದರೀಗ ವಾರ್ನರ್ ಕೂಡ ಬೇಗನೆ ಔಟಾಗುತ್ತಿದ್ದಾರೆ. ಪೃಥ್ವಿ ಶಾ ತಂಡಕ್ಕೆ ಮರಳುವ ಸಾಧ್ಯತೆ ಇದೆ. ಮನೀಶ್ ಪಾಂಡೆ ತಮ್ಮ ಕೈಲಾದಷ್ಟು ರನ್ ಕಲೆಹಾಕುತ್ತಿದ್ದಾರೆ. ಮಿಚೆಲ್ ಮಾರ್ಶ, ಸರ್ಫರಾಜ್ ಖಾನ್, ಪಿಲಿಪ್ ಸಾಲ್ಟ್ ಕಡೆಯಿಂದ ಘನೆತೆಗೆ ತಕ್ಕಂತೆ ಆಡುತ್ತಿಲ್ಲ. ಅಕ್ಷರ್ ಪಟೇಲ್ ಮಾತ್ರ ಆಲ್ರೌಂಡ್ ಪ್ರದರ್ಶನ ನೀಡುತ್ತಿದ್ದಾರೆ. ಬೌಲಿಂಗ್ನಲ್ಲೂ ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಆ್ಯನ್ರಿಚ್ ನಾರ್ಟ್ಜೆ, ಕುಲ್ದೀಪ್ ಯಾದವ್ ಕಡೆಯಿಂದ ಇನ್ನಷ್ಟು ಕೊಡುಗೆ ಬರಬೇಕು.
ಇತ್ತ ಸನ್ರೈಸರ್ಸ್ ಹೈದರಾಬಾದ್ ತಂಡ ಕೂಡ ಡೆಲ್ಲಿ ರೀತಿಯಲ್ಲೇ ಆಡಿದ ಏಳು ಪಂದ್ಯಗಳ ಪೈಕಿ ಐದರಲ್ಲೂ ಸೋಲುಂಡಿದೆ. ಹ್ಯಾರಿ ಬ್ರೂಕ್ ಒಂದು ಶತಕ ಸಿಡಿಸಿ ಮಂಕಾಗಿದ್ದಾರೆ. ಮಯಾಂಕ್ ಅಗರ್ವಾಲ್ ರನ್ ಗಳಿಸಿದರೂ ಇತರರು ಸಾಥ್ ನೀಡುತ್ತಿಲ್ಲ. ರಾಹುಲ್ ತ್ರಿಪಾಠಿ, ಮರ್ಕ್ರಮ್, ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್ ಅಬ್ಬರಿಸ ಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಬೌಲಿಂಗ್ನಲ್ಲಿ ಹೈದರಬಾದ್ ಪರ ಭುವನೇಶ್ವರ್ ಕುಮಾರ್ ಬಿಟ್ಟರೆ ಮತ್ಯಾರು ಮಾರಕವಾಗಿ ಗೋಚರಿಸುತ್ತಿಲ್ಲ. ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಟಿ. ನಟರಾಜನ್, ಮಯಾಂಕ್ ಮಾರ್ಕಂಡೆ ಲಯಕಂಡುಕೊಳ್ಳಬೇಕಿದೆ.
ಪಂದ್ಯ ಆರಂಭ: ಸಂಜೆ 7:30ಕ್ಕೆ
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ