ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಈಗಾಗಲೇ ಫೈನಲ್‌ಗೆ ಪ್ರವೇಶಿಸಿದ್ದು, ಇದೀಗ ಎರಡನೇ ಫೈನಲಿಸ್ಟ್ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ (Gujarat Titans vs Mumbai Indians) ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಹೀಗಾಗಿ ಈ ಪಂದ್ಯ ಗೆಲ್ಲಲು ಆಟಗಾರರು ಅದ್ಭುತ ಪ್ರದರ್ಶನ ನೀಡಬೇಕಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ (Narendra Modi Stadium) ಈ ಪಂದ್ಯ ನಡೆಯಲಿದೆ. ಕಳೆದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿರುವ ಈ ಸೀಸನ್ನ ಎರಡು ತಂಡಗಳು ಚೆನ್ನೈ ಮತ್ತು ಮುಂಬೈ ಮಾತ್ರ. ಚೆನ್ನೈ ಈಗಾಗಲೇ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಇದೀಗ ಮುಂಬೈ ಈ ಹಂತದಿಂದ ಒಂದು ಹೆಜ್ಜೆ ದೂರದಲ್ಲಿದೆ. ಕಳೆದೆರಡು ಪಂದ್ಯಗಳಲ್ಲಿ ಮುಂಬೈ ಗೆದ್ದಿರುವ ರೀತಿ ಗುಜರಾತ್ಗೆ ಎಚ್ಚರಿಕೆ ಗಂಟೆಯಾಗಿದೆ.
ಇನ್ನು ಈ ಉಭಯ ತಂಡಗಳ ಮುಖಾಮುಖಿ ವರದಿ ನೋಡಿದರೆ ಈ ಹಿಂದೆ ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು 3 ಬಾರಿ ಮುಖಾಮುಖಿಯಾಗಿವೆ. ಕಳೆದ ಸೀಸನ್ನಲ್ಲಿ ಗುಜರಾತ್ ಮತ್ತು ಮುಂಬೈ 1 ಬಾರಿ ಮುಖಾಮುಖಿಯಾಗಿದ್ದವು. ಆಗ ಮುಂಬೈ ಗೆದ್ದಿತ್ತು. ಈ ಆವೃತ್ತಿಯಲ್ಲಿ ಈ ಎರಡು ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಪ್ರಿಲ್ 25 ರಂದು ನಡೆದ ಪಂದ್ಯದಲ್ಲಿ ಹಾರ್ದಿಕ್ ತಂಡವು 55 ರನ್‌ಗಳಿಂದ ಗೆದ್ದಿತ್ತು. ಇನ್ನು ಮೇ 12 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡ 27 ರನ್‌ಗಳಿಂದ ಗೆಲುವು ಸಾಧಿಸಿತ್ತು. ಇದೀಗ ನಡೆಯುವ ನಾಲ್ಕನೇ ಮುಖಾಮುಖಿಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
IPL 2023: ಮಳೆಯಿಂದ ಕ್ವಾಲಿಫೈಯರ್ 2 ಪಂದ್ಯ ರದ್ದಾದರೆ ಯಾವ ತಂಡ ಫೈನಲ್ಗೇರಲಿದೆ ಗೊತ್ತಾ?
ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಕ್ವಾಲಿಫೈಯರ್ 2 ಪಂದ್ಯ ಯಾವಾಗ ನಡೆಯಲಿದೆ?
ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಕ್ವಾಲಿಫೈಯರ್ 2 ಪಂದ್ಯ ನಾಳೆ (ಮೇ 26) ಶುಕ್ರವಾರ ನಡೆಯಲಿದೆ.
ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಕ್ವಾಲಿಫೈಯರ್ 2 ಪಂದ್ಯ ಎಲ್ಲಿ ನಡೆಯಲಿದೆ?
ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಕ್ವಾಲಿಫೈಯರ್ 2 ಪಂದ್ಯ ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಕ್ವಾಲಿಫೈಯರ್ 2 ಯಾವಾಗ ಪ್ರಾರಂಭವಾಗುತ್ತದೆ?
ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಕ್ವಾಲಿಫೈಯರ್ 2 ಪಂದ್ಯವು ಸಂಜೆ 7:30ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಮುನ್ನ 7 ಗಂಟೆಗೆ ಟಾಸ್ ನಡೆಯಲಿದೆ.
ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಕ್ವಾಲಿಫೈಯರ್ 2 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಕ್ವಾಲಿಫೈಯರ್ 2 ಲೈವ್ ಸ್ಟ್ರೀಮಿಂಗ್ (ಲೈವ್ ಸ್ಟ್ರೀಮಿಂಗ್) ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಲಭ್ಯವಿರುತ್ತದೆ. ಇದಲ್ಲದೆ, ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:05 pm, Thu, 25 May 23