16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿ ರೋಚಕತೆ ಪಡೆಯುತ್ತಿದೆ. ದಿನದಿಂದ ದಿನಕ್ಕೆ ವೀಕ್ಷಕರ ಸಂಖ್ಯೆ ಕೂಡ ಹೆಚ್ಚುತ್ತಿದ್ದು ಅಭಿಮಾನಿಗಳು ಸ್ಟೇಡಿಯಂಗಳಲ್ಲಿ ಪಂದ್ಯ ನೋಡಲು ಕಿಕ್ಕಿರಿದು ಬರುತ್ತಿದ್ದಾರೆ. ಸೋಮವಾರ ಐಪಿಎಲ್ 2023 ರಲ್ಲಿ ಚೆನ್ನೈ ಹಾಗೂ ಲಖನೌ (CSK vs LSG) ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಿತು. ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ 217 ರನ್ ಗಳಿಸಿದರೆ ಟಾರ್ಗೆಟ್ ಬೆನ್ನಟ್ಟಿದ ಎಲ್ಎಸ್ಜಿ ಗೆಲುವಿಗೆ ಹೋರಾಟ ನಡೆಸಿ ಅಂತಿಮವಾಗಿ 205 ರನ್ ಗಳಿಸಲಷ್ಟೆ ಶಕ್ತವಾಗಿ ಸೋಲು ಕಂಡಿತು. ಇದೀಗ ಚೆನ್ನೈ-ಲಖನೌ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.
IPL 2023: ಕೇವಲ 8 ರನ್; ಚೆಪಾಕ್‌ನಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಧೋನಿ..!
ಆರೆಂಜ್ ಕ್ಯಾಪ್:
ಸಿಎಸ್ಕೆ ತಂಡದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಆರೆಂಕ್ ಕ್ಯಾಪ್ ತೊಟ್ಟಿದ್ದಾರೆ. ಇವರು ಜಿಟಿ ವಿರುದ್ಧ 92 ರನ್ ಹಾಗೂ ಲಖನೌ ವಿರುದ್ಧ 57 ರನ್ ಸಿಡಿಸಿದ್ದರು. ಈ ಮೂಲಕ ಆಡಿದ ಎರಡು ಪಂದ್ಯಗಳಲ್ಲಿ ಒಟ್ಟು 149 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಎಲ್ಎಸ್ಜಿಯ ಖೈಲ್ ಮೇಯರ್ಸ್ ಅವರಿದ್ದು 126 ರನ್ ಕಲೆಹಾಕಿದ್ದಾರೆ.
ಪರ್ಪಲ್ ಕ್ಯಾಪ್:
ಲಖನೌ ಸೂಪರ್ ಜೇಂಟ್ಸ್ ತಂಡದ ಮಾರ್ಕ್ ವುಡ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಡೆಲ್ಲಿ ವಿರುದ್ಧ 5 ವಿಕೆಟ್ ಕಬಳಿಸಿದ್ದರು. ಹಾಗೆಯೆ ಚೆನ್ನೈ ವಿರುದ್ಧ 3 ವಿಕೆಟ್ ಕಿತ್ತಿದ್ದಾರೆ. ಇದೀಗ 8 ವಿಕೆಟ್ ಪಪಡೆದು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ 5 ವಿಕೆಟ್ಗಳನ್ನು ಪಡೆದು ಎಲ್ಎಸ್ಜಿ ತಂಡದ ರವಿ ಬಿಷ್ಟೋಯಿ ಇದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:56 am, Tue, 4 April 23