AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಬಿಗ್ ಅಪ್ಡೇಟ್​: ಆಟಗಾರರಿಗೆ ಟೆನ್ಶನ್ ಶುರು..!

IPL 2023: ಐಪಿಎಲ್ ಸೀಸನ್ 16 ಹರಾಜಿಗಾಗಿ ಫ್ರಾಂಚೈಸಿಗಳ ಹರಾಜು ಮೊತ್ತವನ್ನು ಹೆಚ್ಚಿಸಲಾಗುತ್ತಿದೆ. ಕಳೆದ ಬಾರಿ 90 ಕೋಟಿಯಿದ್ದ ಹರಾಜು ಮೊತ್ತವು ಈ ಬಾರಿ 5 ಕೋಟಿ ಏರಿಕೆಯಾಗಲಿದೆ.

IPL 2023: ಐಪಿಎಲ್ ಬಿಗ್ ಅಪ್ಡೇಟ್​: ಆಟಗಾರರಿಗೆ ಟೆನ್ಶನ್ ಶುರು..!
IPL 2023
TV9 Web
| Edited By: |

Updated on: Oct 17, 2022 | 4:59 PM

Share

IPL 2023: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ (IPL) ಲೀಗ್ ಸೀಸನ್ 16 ಗಾಗಿ ಸಿದ್ಧತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಮುಂದಿನ ಸೀಸನ್​ ಹರಾಜಿಗಾಗಿ ಡೇಟ್ ಫಿಕ್ಸ್ ಮಾಡಲಾಗಿದೆ. ಅದರಂತೆ ಡಿಸೆಂಬರ್ 16 ರಂದು ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಆದರೆ ಅದಕ್ಕೂ ಮುನ್ನ, ಅಂದರೆ  ನವೆಂಬರ್ 15 ರೊಳಗೆ ತಂಡದಲ್ಲೇ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳಿಗೆ ಸೂಚಿಸಿದೆ. ಅಂದರೆ ಮುಂದಿನ ಸೀಸನ್​ನಲ್ಲಿ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮೊದಲು ತಂಡದಲ್ಲಿ ಉಳಿಸಿಕೊಳ್ಳುವ ಮತ್ತು ಬಿಡುಗಡೆ ಮಾಡಲಾಗುವ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಬೇಕಾಗುತ್ತದೆ. ಹೀಗೆ ಪ್ರತಿ ತಂಡಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸಲು ನವೆಂಬರ್ 15 ರವರೆಗೆ ಗಡುವು ವಿಧಿಸಲಾಗಿದೆ. ಈ ಮೂಲಕ ಎಲ್ಲಾ ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಮುಂದಿನ ತಿಂಗಳ 15 ರೊಳಗೆ ಸಲ್ಲಿಸಬೇಕಾಗುತ್ತದೆ.

ಇತ್ತ ಐಪಿಎಲ್ ಆಡುವ ಬಹುತೇಕ ಆಟಗಾರರು ಟಿ20 ವಿಶ್ವಕಪ್ ಆಡುತ್ತಿದ್ದಾರೆ. ಹೀಗಾಗಿ  ಈ ಟೂರ್ನಿಯಲ್ಲಿ ಅತ್ಯುತ್ತಮವಾಗಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಒಂದು ವೇಳೆ ಕಳಪೆ ಪ್ರದರ್ಶನ ನೀಡಿದ್ರೆ ಐಪಿಎಲ್ ತಂಡಗಳಿಂದ ಹೊರಬೀಳುವ ಸಾಧ್ಯತೆಯಿದೆ.

ಟಿ20 ವಿಶ್ವಕಪ್​-ಐಪಿಎಲ್ 2023:

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಟಿ20 ವಿಶ್ವಕಪ್ ಫೈನಲ್ ಪಂದ್ಯವು ನವೆಂಬರ್ 13 ರಂದು ನಡೆಯಲಿದೆ. ಇಲ್ಲಿ ಅಚ್ಚರಿ ಸಂಗತಿ ಎಂದರೆ ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ನವೆಂಬರ್ 15 ರೊಳಗೆ ಸಲ್ಲಿಸಬೇಕಾಗುತ್ತದೆ. ಅಂದರೆ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರು ತಂಡದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ. ಹಾಗೆಯೇ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿದ ಹೊಸ ಆಟಗಾರರು ಮುಂದಿನ ಐಪಿಎಲ್​ನಲ್ಲಿ ಅವಕಾಶ ಪಡೆಯಲಿದ್ದಾರೆ. ಏಕೆಂದರೆ ಟಿ20 ವಿಶ್ವಕಪ್ ಮುಗಿದ ಒಂದು ತಿಂಗಳ ಅಂತರದಲ್ಲಿ ಐಪಿಎಲ್ ಮಿನಿ ಹರಾಜು ನಡೆಯಲಿದೆ.

ಈ ಬಾರಿ ಮಿನಿ ಹರಾಜು:

ಐಪಿಎಲ್​ನಲ್ಲಿ ಪ್ರತಿ ಮೂರು ಸೀಸನ್​ಗೊಮ್ಮೆ ಮೆಗಾ ಹರಾಜನ್ನು ನಡೆಸಲಾಗುತ್ತದೆ. ಇದರ ನಡುವಿನ 2 ಸೀಸನ್​ಗಳಲ್ಲಿ ಮಿನಿ ಹರಾಜು ನಡೆಯಲಿದೆ. ಕಳೆದ ಬಾರಿ ಮೆಗಾ ಹರಾಜು ನಡೆದಿರುವುದರಿಂದ ಈ ಬಾರಿ ಮಿನಿ ಹರಾಜು ನಡೆಯಲಿದೆ. ಅಂದರೆ ಪ್ರತಿ ತಂಡಗಳು 25 ಆಟಗಾರರಲ್ಲಿ ಬಿಡುಗಡೆ ಮಾಡಲಾದ ಆಟಗಾರ ಸ್ಥಾನದಲ್ಲಿ ಬದಲಿ ಆಟಗಾರರನ್ನು ಹರಾಜಿನ ಮೂಲಕ ಖರೀದಿಸಲು ಅವಕಾಶ ಇರಲಿದೆ.

ಹರಾಜು ಮೊತ್ತ ಹೆಚ್ಚಳ:

ಐಪಿಎಲ್ ಸೀಸನ್ 16 ಹರಾಜಿಗಾಗಿ ಫ್ರಾಂಚೈಸಿಗಳ ಹರಾಜು ಮೊತ್ತವನ್ನು ಹೆಚ್ಚಿಸಲಾಗುತ್ತಿದೆ. ಕಳೆದ ಬಾರಿ 90 ಕೋಟಿಯಿದ್ದ ಹರಾಜು ಮೊತ್ತವು ಈ ಬಾರಿ 5 ಕೋಟಿ ಏರಿಕೆಯಾಗಲಿದೆ. ಅಂದರೆ ಐಪಿಎಲ್ ಸೀಸನ್ 16 ಹರಾಜು ಪ್ರಕ್ರಿಯೆಯು ಒಟ್ಟು 95 ಕೋಟಿಯಲ್ಲಿ ನಡೆಯಲಿದೆ.

ಒಟ್ಟಿನಲ್ಲಿ ಟಿ20 ವಿಶ್ವಕಪ್​ ಮುಕ್ತಾಯದ ಬೆನ್ನಲ್ಲೇ ಐಪಿಎಲ್​ನ ಮೊದಲ ಹಂತದ ಸಿದ್ಧತೆಗಳನ್ನು ಶುರು ಮಾಡಲು ಬಿಸಿಸಿಐ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸಿರುವುದು ವಿಶೇಷ.

Follow Us
Web contact
Web contact

TV9 Kannada

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ