IPL 2023 RCB Team: RCB ತಂಡದಲ್ಲಿ 10 ಆಲ್​ರೌಂಡರ್ಸ್​, 8 ಬೌಲರ್​ಗಳು​..!

IPL 2023 RCB Team: 10 ಆಲ್​ರೌಂಡರ್​ಗಳನ್ನು ಹೊಂದಿರುವ ಆರ್​ಸಿಬಿಗೆ ಈ ಬಾರಿ ಉತ್ತಮ ಸಮತೋಲನದಿಂದ ಕೂಡಿರುವ ಪ್ಲೇಯಿಂಗ್ ಇಲೆವೆನ್ ರೂಪಿಸಿಕೊಳ್ಳಲು ಅವಕಾಶವಿದೆ.

IPL 2023 RCB Team: RCB ತಂಡದಲ್ಲಿ 10 ಆಲ್​ರೌಂಡರ್ಸ್​, 8 ಬೌಲರ್​ಗಳು​..!
IPL 2023 RCB Team
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 24, 2022 | 5:09 PM

IPL 2023 RCB Team: ಐಪಿಎಲ್ ಸೀಸನ್ 16 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ಫ್ರಾಂಚೈಸಿಯು ಬಲಿಷ್ಠ ತಂಡ ಕಟ್ಟಿದೆ. ಈ ಬಾರಿಯ ಹರಾಜಿಗೂ ಮುನ್ನ 18 ಆಟಗಾರರನ್ನು ಉಳಿಸಿಕೊಂಡಿದ್ದ ಆರ್​ಸಿಬಿ, ಮಿನಿ ಹರಾಜಿನ ಮೂಲಕ 7 ಆಟಗಾರರನ್ನು ಖರೀದಿಸಿದೆ. ಈ ಮೂಲಕ 25 ಸದಸ್ಯರ ಬಳಗವನ್ನು ರೂಪಿಸಿದೆ. ಈ 25 ಆಟಗಾರರಲ್ಲಿ 10 ಆಲ್​ರೌಂಡರ್​ಗಳು ಎಂಬುದು ವಿಶೇಷ. ಇನ್ನು ತಂಡದಲ್ಲಿ ನಾಲ್ವರು ಬ್ಯಾಟ್ಸ್​​ಮನ್​ಗಳಿದ್ದರೆ, 8 ಬೌಲರ್​ಗಳಿದ್ದಾರೆ. ಹಾಗೆಯೇ 3 ವಿಕೆಟ್​ ಕೀಪರ್​ಗಳು ತಂಡದಲ್ಲಿದ್ದಾರೆ.

  • ಇಲ್ಲಿ ಪೂರ್ಣ ಪ್ರಮಾಣದ ಬ್ಯಾಟ್ಸ್​ಮನ್​ಗಳಾಗಿ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಹಾಗೂ ವಿಲ್ ಜಾಕ್ಸ್​ ಕಾಣಿಸಿಕೊಳ್ಳಲಿದ್ದಾರೆ.
  • ಅದೇ ರೀತಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ಗಳಾಗಿ ದಿನೇಶ್ ಕಾರ್ತಿಕ್, ಅನೂಜ್ ರಾವತ್ ಹಾಗೂ ಫಿನ್ ಅಲೆನ್ ಆರ್​ಸಿಬಿ ತಂಡದಲ್ಲಿದ್ದಾರೆ.
  • ಬೌಲರ್​ಗಳ ವಿಭಾಗದಲ್ಲಿ ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್ ಹಾಗೂ ಅವಿನಾಶ್ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ.
  • ಹಾಗೆಯೇ ಆಲ್​ರೌಂಡರ್​ಗಳಾಗಿ ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ ಹಾಗೂ ಸೋನು ಯಾದವ್ ಆರ್​ಸಿಬಿ ತಂಡದಲ್ಲಿದ್ದಾರೆ.

ಅಂದರೆ 10 ಆಲ್​ರೌಂಡರ್​ಗಳನ್ನು ಹೊಂದಿರುವ ಆರ್​ಸಿಬಿಗೆ ಈ ಬಾರಿ ಉತ್ತಮ ಸಮತೋಲನದಿಂದ ಕೂಡಿರುವ ಪ್ಲೇಯಿಂಗ್ ಇಲೆವೆನ್ ರೂಪಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ಐಪಿಎಲ್ ಸೀಸನ್​ 16 ನಲ್ಲಿ ಆರ್​ಸಿಬಿ ತಂಡದಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

RCB ಹೊಸ ತಂಡ ಹೀಗಿದೆ:

ಇದನ್ನೂ ಓದಿ
Image
IPL 2023: ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಯಾರು ಗೊತ್ತಾ?
Image
IPL 2023 RCB Team: RCB ಹೊಸ ತಂಡ ಹೀಗಿದೆ
Image
Manoj Bhandage: RCB ತಂಡಕ್ಕೆ ಕನ್ನಡಿಗ ಮನೋಜ್ ಭಾಂಡಗೆ ಆಯ್ಕೆ
Image
IPL 2023 RCB Squad: ಆರ್​ಸಿಬಿ ಪರ ಕಣಕ್ಕಿಳಿಯುವ 8 ವಿದೇಶಿ ಆಟಗಾರರು ಇವರೇ..!

ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ವಿಲ್ ಜಾಕ್ಸ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

RCB ತಂಡಕ್ಕೆ ಹೊಸದಾಗಿ ಆಯ್ಕೆಯಾದ 7 ಆಟಗಾರರು:

ಸೋನು ಯಾದವ್, ಮನೋಜ್ ಭಾಂಡಗೆ, ರಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ, ವಿಲ್ ಜಾಕ್ಸ್​ (ಇಂಗ್ಲೆಂಡ್), ರೀಸ್ ಟೋಪ್ಲಿ (ಇಂಗ್ಲೆಂಡ್).

Published On - 5:04 pm, Sat, 24 December 22

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?