AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಕೆಕೆಆರ್ ತಂಡಕ್ಕೆ ಹೊಸ ಮುಖ್ಯ ಕೋಚ್ ನೇಮಕ; ಮೆಕಲಮ್ ಜಾಗಕ್ಕೆ ಬಂದವರ್ಯಾರು ಗೊತ್ತಾ?

Kolkata Knight Riders: ದೇಶಿ ಕ್ರಿಕೆಟ್‌ನಲ್ಲಿ ಚಂದ್ರಕಾಂತ್ ಪಂಡಿತ್ ಅವರ ದಾಖಲೆ ಅತ್ಯುತ್ತಮವಾಗಿದೆ. ಅವರು ಮೂರು ಬಾರಿ ಮುಂಬೈ ಮತ್ತು ಎರಡು ಬಾರಿ ವಿದರ್ಭ ತಂಡವನ್ನು ಚಾಂಪಿಯನ್ ಮಾಡಿದ್ದಾರೆ.

IPL: ಕೆಕೆಆರ್ ತಂಡಕ್ಕೆ ಹೊಸ ಮುಖ್ಯ ಕೋಚ್ ನೇಮಕ; ಮೆಕಲಮ್ ಜಾಗಕ್ಕೆ ಬಂದವರ್ಯಾರು ಗೊತ್ತಾ?
TV9 Web
| Updated By: ಪೃಥ್ವಿಶಂಕರ|

Updated on: Aug 17, 2022 | 6:54 PM

Share

ಎರಡು ಬಾರಿಯ ಐಪಿಎಲ್ (IPL) ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡ ಮುಂದಿನ ಸೀಸನ್​ಗೂ ಮುನ್ನ ತಂಡಕ್ಕೆ ಹೊಸ ಮುಖ್ಯ ಕೋಚ್ ಆಯ್ಕೆ ಮಾಡಿದೆ. ಕಿಂಗ್ ಖಾನ್ ತಂಡ ಚಂದ್ರಕಾಂತ್ ಪಂಡಿತ್ ಅವರನ್ನು ತನ್ನ ಹೊಸ ಮುಖ್ಯ ಕೋಚ್ ಆಗಿ ನೇಮಿಸಿದೆ. ಈ ಬಗ್ಗೆ ಫ್ರಾಂಚೈಸಿ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿ ಚಂದ್ರಕಾಂತ್ ಪಂಡಿತ್ (Chandrakant Pandit) ಅವರನ್ನು ಸ್ವಾಗತಿಸಿದೆ. ಐಪಿಎಲ್ 2022 ರಲ್ಲಿ, ಕೆಕೆಆರ್ ತಂಡ ಪ್ಲೇಆಫ್‌ಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಈ ಸೀಸನ್​ ನಂತರ ಬ್ರೆಂಡಮ್ ಮೆಕಲಮ್ ಕೆಕೆಆರ್ ತಂಡಕ್ಕೆ ವಿದಾಯ ಹೇಳಿದ್ದರು. ಅಂದಿನಿಂದ ಕೆಕೆಆರ್ ಹೊಸ ಸೀಸನ್‌ಗೆ ಮುಖ್ಯ ಕೋಚ್‌ಗಾಗಿ ಹುಡುಕಾಟ ನಡೆಸಿತ್ತು. ಅಷ್ಟಕ್ಕೂ ಅದು ಚಂದ್ರಕಾಂತ್ ಪಂಡಿತ್ ರೂಪದಲ್ಲಿ ಕೊನೆಗೊಂಡಿದೆ.

ಚಂದ್ರಕಾಂತ್ ಪಂಡಿತ್ ಕೆಕೆಆರ್ ಸೇರಲು ಉತ್ಸುಕರಾಗಿದ್ದಾರೆ

ಹೊಸ ಜವಾಬ್ದಾರಿ ಕುರಿತು ಮಾತನಾಡಿದ ಚಂದ್ರಕಾಂತ್ ಪಂಡಿತ್, ‘ಈ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಮತ್ತು ಗೌರವದ ಸಂಗತಿ. ಕೆಕೆಆರ್‌ಗೆ ಸಂಬಂಧಿಸಿದ ಹಲವು ಆಟಗಾರರಿಂದ ಈ ತಂಡದ ಬಗ್ಗೆ ಕೇಳಿದ್ದೇನೆ. ನಾನು ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಸಂಪರ್ಕ ಸಾಧಿಸಲು ಎದುರು ನೋಡುತ್ತಿದ್ದೇನೆ. ಈ ಜವಾಬ್ದಾರಿಯನ್ನು ನಿಭಾಯಿಸಲು ನಾನು ಸಿದ್ಧನಿದ್ದೇನೆ. KKR ಸಿಇಒ ವೆಂಕಿ ಮೈಸೂರು ಮಾತನಾಡಿ, “ನಮ್ಮ ಮುಂದಿನ ಪಯಣಕ್ಕೆ ಚಂದು ನಮ್ಮೊಂದಿಗೆ ಕೈಜೋಡಿಸುತ್ತಿರುವುದು ನಮಗೆ ತುಂಬಾ ಸಂತೋಷವಾಗಿದೆ. ಅವರ ಆಟದ ಮೇಲಿನ ಉತ್ಸಾಹ ಮತ್ತು ಅವರ ಯಶಸ್ಸನ್ನು ಎಲ್ಲರೂ ನೋಡಿದ್ದಾರೆ. ಅವರು ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಅವರೊಂದಿಗೆ ಜೋಡಿಯಾಗುವುದನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಚಂದ್ರಕಾಂತ್ ಪಂಡಿತ್ ದಾಖಲೆಗಳು ಹೀಗಿವೆ

ಇತ್ತೀಚೆಗೆ, ಚಂದ್ರಕಾಂತ್ ಪಂಡಿತ್ ಅವರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶ ಮೊದಲ ಬಾರಿಗೆ ರಣಜಿ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ದೇಶಿ ಕ್ರಿಕೆಟ್‌ನಲ್ಲಿ ಚಂದ್ರಕಾಂತ್ ಪಂಡಿತ್ ಅವರ ದಾಖಲೆ ಅತ್ಯುತ್ತಮವಾಗಿದೆ. ಅವರು ಮೂರು ಬಾರಿ ಮುಂಬೈ ಮತ್ತು ಎರಡು ಬಾರಿ ವಿದರ್ಭ ತಂಡವನ್ನು ಚಾಂಪಿಯನ್ ಮಾಡಿದ್ದಾರೆ. ಅವರ ಕೋಚಿಂಗ್ ಅಡಿಯಲ್ಲಿ, ವಿದರ್ಭದಂತಹ ತಂಡವು 2018 ಮತ್ತು 2019 ರಲ್ಲಿ ಎರಡು ಬಾರಿ ಚಾಂಪಿಯನ್ ಆಯಿತು. ಇದರ ನಂತರ ಅವರು ಮಧ್ಯಪ್ರದೇಶ ತಂಡಕ್ಕೆ ಕೋಚಿಂಗ್ ಮಾಡಿ ತಂಡವನ್ನು ಚಾಂಪಿಯನ್ ಮಾಡಿದರು.

ಚಂದ್ರಕಾಂತ್ ಅವರಿಂದ ಕೆಕೆಆರ್ ಹೆಚ್ಚಿನ ನಿರೀಕ್ಷೆ ಹೊಂದಿದೆ

ಕೆಕೆಆರ್ 2012 ಮತ್ತು 2014ರಲ್ಲಿ ಚಾಂಪಿಯನ್ ಆಗಿತ್ತು. ಆದರೆ, ಅಂದಿನಿಂದ ಒಮ್ಮೆಯೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಚಂದ್ರಕಾಂತ್ ಆಗಮನದೊಂದಿಗೆ ಈ ಕಾಯುವಿಕೆ ಕೊನೆಗೊಳ್ಳುತ್ತದೆ ಎಂದು ತಂಡವು ಭಾವಿಸುತ್ತದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ತಂಡ ಮೂರನೇ ಬಾರಿಗೆ ಚಾಂಪಿಯನ್ ಆಗಲು ಪ್ರಯತ್ನಿಸಲಿದೆ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್