ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) 16ನೇ ಆವೃತ್ತಿಗೆ ಚಾಲನೆ ಸಿಗಲಿದೆ. 52 ದಿನಗಳ ಕಾಲ ನಡೆಯಲಿರುವ ಈ ಚುಟುಕು ಸಮರದಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿದ್ದು ಒಂದು ಟ್ರೋಫಿಗಾಗಿ 10 ತಂಡಗಳು ಸೆಣೆಸಾಟ ನಡೆಸಲಿದೆ. ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಹಾಗೂ ಎಂಎಸ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು (GT vs CSK) ಮುಖಾಮುಖಿ ಆಗಲಿದೆ. ಹಾಗಾದರೆ ಪಂದ್ಯ ಯಾವುದರಲ್ಲಿ ನೇರಪ್ರಸಾರ ಕಾಣಲಿದೆ?, ಎಷ್ಟು ಗಂಟೆಗೆ ಆರಂಭ?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಗುಜರಾತ್ ಟೈಟಾನ್ಸ್-ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ?
ಈ ಪಂದ್ಯ ಮಾರ್ಚ್ 31 ರಂದು ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂಬಲ್ಲಿ ಆಯೋಜಿಸಲಾಗಿದೆ.
ಗುಜರಾತ್ ಟೈಟಾನ್ಸ್-ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ ಎಷ್ಟು ಗಂಟೆಗೆ ಆರಂಭ?
ಗುಜರಾತ್ ಟೈಟಾನ್ಸ್-ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವು ಇಂದು ರಾತ್ರಿ 7;30ಕ್ಕೆ ಆರಂಭವಾಗಲಿದೆ. ಏಳು ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಗುಜರಾತ್ ಟೈಟಾನ್ಸ್-ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರುವುದಿಲ್ಲ. ಬದಲಾಗಿ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗಲಿದೆ.
IPL 2023: ಮೊದಲ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಹಿನ್ನಡೆ..!
ಉದ್ಘಾಟನೆ ಎಷ್ಟು ಗಂಟೆಗೆ?:
ಐಪಿಎಲ್ ಉದ್ಘಾಟನಾ ಸಮಾರಂಭವು ಸಂಜೆ 6 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ ಎಂಬ ಮಾಹಿತಿ ಇದೆ. ಉದ್ಘಾಟನಾ ಸಮಾರಂಭದಲ್ಲಿ ಎಲ್ಲಾ 10 ತಂಡಗಳ ನಾಯಕರು ಭಾಗವಹಿಸುವುದಿಲ್ಲ ಎಂಬುದು ತಿಳಿದುಬಂದಿದೆ. ಆದಾಗ್ಯೂ, ಬುಧವಾರದಂದು ಕಡ್ಡಾಯ ನಾಯಕರ ಸಭೆಯಲ್ಲಿ ಎಲ್ಲಾ ನಾಯಕರು ಅಹಮದಾಬಾದ್‌ನಲ್ಲಿ ಭೇಟಿಯಾಗಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಯಾರ್ಯಾರಿರಲಿದ್ದಾರೆ?
ಸದ್ಯಕ್ಕೆ ಹೊರಬಿದ್ದಿರುವ ಮಾಹಿತಿ ಪ್ರಕಾ,ರ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್ ಪ್ರದರ್ಶನ ನೀಡಲಿದ್ದಾರೆ. ಹಾಗೆಯೇ ನಟಿ ತಮನ್ನಾ ಭಾಟಿಯಾ ಭಾಗವಹಿಸುವಿಕೆಯನ್ನು ಖಚಿತಪಡಿಸಲಾಗಿದೆ. ಅಲ್ಲದೆ ಈ ಈವೆಂಟ್‌ನಲ್ಲಿ ಪ್ರದರ್ಶನ ನೀಡಲು ರಶ್ಮಿಕಾ ಮಂದಣ್ಣರನ್ನು ಕೇಳಿಕೊಳ್ಳಲಾಗಿದೆ ಎಂಬ ಮಾಹಿತಿ ಇದೆ. ಬಾಲಿವುಡ್ ನಟಿ ಕತ್ರಿನಾ ಕೈಫ್ ಹಾಗೂ ನಟ ಟೈಗರ್ ಶ್ರಾಫ್ ಕೂಡ ಇರಲಿದ್ದಾರಂತೆ. ಇಷ್ಟೆ ಅಲ್ಲದೆ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶೇಷ ಲೇಸರ್ ಶೋ ನಡೆಯುವ ಸಾಧ್ಯತೆಯೂ ಇದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:57 am, Fri, 31 March 23