IPL 2023 Orange & Purple Cap: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಆರ್ಸಿಬಿಯ ಇಬ್ಬರು ಆಟಗಾರರು
IPL 2023: ಚೊಚ್ಚಲ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮುಂಬೈ ತಂಡ 8ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರೆ, ಸತತ 4 ಪಂದ್ಯಗಳಲ್ಲಿ ಸೋಲನುಭವಿಸಿರುವ ಡೆಲ್ಲಿ ಕೊನೆಯ ಸ್ಥಾನದಲ್ಲಿದೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023 (IPL 2023) ರ 16 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದ, ಮುಂಬೈ ಇಂಡಿಯನ್ಸ್ (Delhi Capitals vs Mumbai Indians) ಕೊನೆಯ ಎಸೆತದಲ್ಲಿ ಗೆಲುವು ಸಾಧಿಸುವುದರೊಂದಿಗೆ ಟೂರ್ನಿಯ ಮೊದಲ ಗೆಲುವು ಸಾಧಿಸಿದೆ. ಈ ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 19.4 ಓವರ್‌ಗಳಲ್ಲಿ 172 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ರೋಹಿತ್ ಶರ್ಮಾ (Rohit Sharma) ಅವರ ಅರ್ಧಶತಕ ಮತ್ತು ತಿಲಕ್ ವರ್ಮಾ ಅವರ ಮಹತ್ವದ ಇನ್ನಿಂಗ್ಸ್ ನೆರವಿನಿಂದ ಮುಂಬೈ ಇಂಡಿಯನ್ಸ್ ಕೊನೆಯ ಎಸೆತದಲ್ಲಿ 6 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಚೊಚ್ಚಲ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮುಂಬೈ ತಂಡ 8ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರೆ, ಸತತ 4 ಪಂದ್ಯಗಳಲ್ಲಿ ಸೋಲನುಭವಿಸಿರುವ ಡೆಲ್ಲಿ ಕೊನೆಯ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ಗೆ ಸತತ ನಾಲ್ಕನೇ ಸೋಲು
ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭಿಸಿರುವ ಡೆಲ್ಲಿ ಕ್ಯಾಪಿಟಲ್ಸ್ಗೆ ಲೀಗ್ನಲ್ಲಿ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಆಡಿರುವ ನಾಲ್ಕು ಪಂದ್ಯಗಳಲ್ಲಿ ನಾಲ್ಕರಲ್ಲೂ ಸೋತಿರುವ ಡೆಲ್ಲಿ ತನ್ನ ಮುಂದಿನ ಪಂದ್ಯವನ್ನು ಮಾ. 15 ರಂದು ಆರ್ಸಿಬಿ ವಿರುದ್ಧ ಆಡಲಿದೆ. ಮುಂಬೈ ವಿರುದ್ಧ ಡೆಲ್ಲಿ ಸೋಲನುಭವಿಸಿತ್ತಾದರೂ, ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕ ವಾರ್ನರ್ 47 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಇನ್ನಿಂಗ್ಸ್‌ನ ನಂತರ ವಾರ್ನರ್, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಪಂದ್ಯಕ್ಕೂ ಮೊದಲು ವಾರ್ನರ್ ಐದನೇ ಶ್ರೇಯಾಂಕದಲ್ಲಿದ್ದರು.
IPL 2023: ಧೋನಿಗಿಂದು ಐತಿಹಾಸಿಕ ಪಂದ್ಯ; ವಿಶೇಷ ಉಡುಗೊರೆ ನೀಡುತ್ತೇವೆ ಎಂದ ಜಡೇಜಾ
ಇನ್ನು ವಾರ್ನರ್ ಅವರನ್ನು ಹೊರತುಪಡಿಸಿದರೆ, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಶಿಖರ್ ಧವನ್ (225 ರನ್) ಅಗ್ರಸ್ಥಾನದಲ್ಲಿದ್ದರೆ, ಡೇವಿಡ್ ವಾರ್ನರ್ (209 ರನ್) ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ರುತುರಾಜ್ ಗಾಯಕ್ವಾಡ್ (92 ರನ್) 3ನೇ ಸ್ಥಾನ, ಫಾಫ್ ಡು ಪ್ಲೆಸಿಸ್ (79 ರನ್) 4 ನೇ ಸ್ಥಾನದಲ್ಲಿ, ವಿರಾಟ್ ಕೊಹ್ಲಿ (82* ರನ್) 5 ನೇ ಸ್ಥಾನದಲ್ಲಿದ್ದಾರೆ.
ಆರೆಂಜ್ ಕ್ಯಾಪ್ ರೇಸ್
- 225 ರನ್ – ಶಿಖರ್ ಧವನ್
- 209 ರನ್ – ಡೇವಿಡ್ ವಾರ್ನರ್
- 189 ರನ್ – ರುತುರಾಜ್ ಗಾಯಕ್ವಾಡ್
- 175 ರನ್- ಫಾಫ್ ಡುಪ್ಲೆಸಿಸ್
- 164 ರನ್- ವಿರಾಟ್ ಕೊಹ್ಲಿ
ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಲಕ್ನೋ ಬೌಲರ್
ಮುಂಬೈ ಇಂಡಿಯನ್ಸ್ ಗೆಲುವಿನ ನಂತರ ಪರ್ಪಲ್ ಕ್ಯಾಪ್‌ನಲ್ಲಿ ಯಾವುದೇ ಬದಲಾವಣೆ ಆಗಿಲ್ಲ.ಐಪಿಎಲ್ 2023 ರ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವೇಗದ ಬೌಲರ್ ಮಾರ್ಕ್ ವುಡ್ ಇದುವರೆಗೆ 3 ಪಂದ್ಯಗಳಲ್ಲಿ 9 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. 8 ವಿಕೆಟ್ ಪಡೆದ ಯುಜುವೇಂದ್ರ ಚಹಾಲ್ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ರಶೀದ್ ಖಾನ್ ಕೂಡ ಚಹಾಲ್ ಅವರಷ್ಟೇ ವಿಕೆಟ್ ಪಡೆದು 3ನೇ ಸ್ಥಾನದಲ್ಲಿದ್ದಾರೆ. ರವಿ ಬಿಷ್ಣೋಯ್ 6 ವಿಕೆಟ್ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಸುನಿಲ್ ನರೈನ್ ಕೂಡ ಅಷ್ಟೇ ವಿಕೆಟ್ ಪಡೆದು ಆರನೇ ಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್ ರೇಸ್
- 9 ವಿಕೆಟ್ – ಮಾರ್ಕ್ ವುಡ್
- 8 ವಿಕೆಟ್ – ಯುಜುವೇಂದ್ರ ಚಹಾಲ್
- 8 ವಿಕೆಟ್ – ರಶೀದ್ ಖಾನ್
- 6 ವಿಕೆಟ್ – ರವಿ ಬಿಷ್ಣೋಯ್
- 6 ವಿಕೆಟ್ – ಅಲ್ಜಾರಿ ಜೋಸೆಫ್
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:20 pm, Wed, 12 April 23
