IPL 2023 PBKS vs KKR Live Streaming: 2ನೇ ಪಂದ್ಯ ಎಲ್ಲಿ, ಯಾರ ನಡುವೆ, ಎಷ್ಟು ಗಂಟೆಗೆ ನಡೆಯಲಿದೆ? ಇಲ್ಲಿದೆ ವಿವರ

|

Updated on: Mar 31, 2023 | 4:52 PM

Punjab Kings vs Kolkata Knight Riders Live Streaming: ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಕೆಕೆಆರ್ 20 ಬಾರಿ ಮತ್ತು ಪಂಜಾಬ್ 10 ಬಾರಿ ಗೆದ್ದಿದೆ.

IPL 2023 PBKS vs KKR Live Streaming: 2ನೇ ಪಂದ್ಯ ಎಲ್ಲಿ, ಯಾರ ನಡುವೆ, ಎಷ್ಟು ಗಂಟೆಗೆ ನಡೆಯಲಿದೆ? ಇಲ್ಲಿದೆ ವಿವರ
ಪಂಜಾಬ್- ಕೋಲ್ಕತ್ತಾ ಮುಖಾಮುಖಿ
Follow us on

ಇಂದಿನಿಂದ ಐಪಿಎಲ್ (IPL 2023) ಆರಂಭವಾಗುತ್ತಿದ್ದು, ಮುಂದಿನ 2 ತಿಂಗಳ ಕಾಲ ಅಭಿಮಾನಿಗಳಿಗೆ ಬರಪೂರ ಮನರಂಜನೆ ಸಿಗಲಿದೆ. ಇಂದಿನ ಉಧ್ಘಾಟನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮತ್ತು ಮಹೇಂದ್ರ ಸಿಂಗ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (Gujarat Titans and Chennai Super Kings) ತಂಡಗಳು ಅಹಮದಾಬಾದ್‌ನಲ್ಲಿ ಮುಖಾಮುಖಿಯಾಗಲಿವೆ. ನಾಳೆ ಶನಿವಾರ, ಅಂದರೆ ಟೂರ್ನಿಯ ಮೊದಲ ಹೆಡರ್ ಪಂದ್ಯ ನಡೆಯಲಿದೆ. ಇದರಲ್ಲಿ ಮೊದಲ ಪಂದ್ಯದಲ್ಲಿ ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ಮತ್ತು ನಿತೀಶ್ ರಾಣಾ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (Punjab Kings vs Kolkata Knight Riders) ತಂಡಗಳು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಯಾಣವನ್ನು ಶನಿವಾರ ಮಧ್ಯಾಹ್ನ ಮೊಹಾಲಿಯಲ್ಲಿ ಪ್ರಾರಂಭಿಸಲಿವೆ. ಕಳೆದ ಆವೃತ್ತಿಯಲ್ಲಿ ಈ ಉಭಯ ತಂಡಗಳು ಆರು ಮತ್ತು ಏಳನೇ ಸ್ಥಾನ ಗಳಿಸಿದ್ದವು. ಹೀಗಾಗಿ ಉಭಯ ತಂಡಗಳು ಈ ಬಾರಿ ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಲು ಎದುರು ನೋಡುತ್ತಿವೆ.

ಇನ್ನು ಈ ಉಭಯ ತಂಡಗಳು ಮುಖಾಮುಖಿ ವರದಿ ನೋಡಿದರೆ, ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಕೆಕೆಆರ್ 20 ಬಾರಿ ಮತ್ತು ಪಂಜಾಬ್ 10 ಬಾರಿ ಗೆದ್ದಿದೆ.

IPL 2023: ಪ್ರತಿ ತಂಡದಲ್ಲಿರುವ ಕಿರಿಯ ಮತ್ತು ಹಿರಿಯ ಆಟಗಾರರು ಯಾರು ಗೊತ್ತಾ?

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಯಾವಾಗ?

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ (ಏಪ್ರಿಲ್ 1) ನಾಳೆ ಶನಿವಾರ ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವು ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯವು 3.30 ಕ್ಕೆ ಪ್ರಾರಂಭವಾಗುತ್ತದೆ. ಪಂದ್ಯದ ಟಾಸ್ 3 ಗಂಟೆಗೆ ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ಇದಲ್ಲದೆ, ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ