IPL 2023 Points Table: ಆರೆಂಜ್, ಪರ್ಪಲ್ ಕ್ಯಾಪ್ ಆರ್ಸಿಬಿ ಪ್ಲೇಯರ್ಸ್ ಬಳಿ ಭದ್ರ: ಪಾಯಿಂಟ್ ಟೇಬಲ್ ಹೇಗಿದೆ?
Orange-Purple Cap IPL 2023: ಡೆಲ್ಲಿ-ಎಸ್ಆರ್ಹೆಚ್ ಪಂದ್ಯಗ ಬಳಿಕ ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಟೂರ್ನಿಯಲ್ಲಿ 34 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಇಂದು ಐಪಿಎಲ್ 2023 ರಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ (GT vs MI) ಮುಖಾಮುಖಿ ಆಗಲಿದೆ. ಸೋಮವಾರ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ರನ್ಗಳ ರೋಚಕ ಗೆಲುವು ಸಾಧಿಸಿತು. ಹಾಗಾದರೆ, ಡೆಲ್ಲಿ-ಎಸ್ಆರ್ಹೆಚ್ ಪಂದ್ಯಗ ಬಳಿಕ ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.
- ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಏಳು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಎರಡರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿ ಮೊದಲ ಸ್ಥಾನದಲ್ಲಿದೆ. +0.662 ರನ್ರೇಟ್ ಹೊಂದಿದೆ.
- ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಭರ್ಜರಿ ಆಟ ಪ್ರದರ್ಶಿಸುತ್ತಿದ್ದು ಪಾಯಿಂಟ್ ಟೇಬಲ್ನಲ್ಲಿ ಎರಡನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳಲ್ಲಿ ನಾಲ್ಕು ಗೆಲುವು, ಮೂರರಲ್ಲಿ ಸೋಲುಂಡು +0.844 ರನ್ರೇಟ್ನೊಂದಿಗೆ 8 ಅಂಕ ಸಂಪಾದಿಸಿದೆ.
- ಲಖನೌ ಸೂಪರ್ ಜೇಂಟ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳಲ್ಲಿ ನಾಲ್ಕು ಗೆಲುವು, ಮೂರು ಸೋಲು ಕಂಡು 8 ಅಂಕ ಸಂಪಾದಿಸಿ +0.547 ರನ್ರೇಟ್ ಹೊಂದಿದೆ.
- ಗುಜರಾತ್ ಟೈಟಾನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದ್ದು ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು, ಎರಡು ಸೋಲುಂಡು +0.212 ರನ್ರೇಟ್ನೊಂದಿಗೆ 8 ಅಂಕ ಸಂಪಾದಿಸಿದೆ.
- ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ಮೂರರಲ್ಲಿ ಸೋಲು ಕಂಡು 8 ಅಂಕ ಸಂಪಾದಿಸಿ -0.008 ರನ್ರೇಟ್ ಹೊಂದಿದೆ.
- ಪಂಜಾಬ್ ಕಿಂಗ್ಸ್ ಆಡಿದ ಏಳು ಪಂದ್ಯಗಳಲ್ಲಿ ನಾಲ್ಕು ಸೋಲು-ಮೂರು ಜಯ ಕಂಡು 8 ಅಂಕ ಹೊಂದಿ -0.162ರನ್ರೇಟ್ನೊಂದಿಗೆ ಆರನೇ ಸ್ಥಾನದಲ್ಲಿದೆ.
- ಮುಂಬೈ ಇಂಡಿಯನ್ಸ್ ಏಳನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯದಲ್ಲಿ ತಲಾ ಮೂರು ಸೋಲು, ಮೂರು ಗೆಲುವು ಕಂಡು 6 ಅಂಕ ಸಂಪಾದಿಸಿ -0.254 ರನ್ರೇಟ್ ಹೊಂದಿದೆ.
- ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಪ್ಲೇಸ್ನಲ್ಲಿದೆ. ಆಡಿದ ಏಳು ಪಂದ್ಯಗಳಲ್ಲಿ ಎರಡು ಗೆಲುವು, ಐದರಲ್ಲಿ ಸೋಲುಂಡು -0.186 ರನ್ರೇಟ್ನೊಂದಿಗೆ 4 ಅಂಕ ಸಂಪಾದಿಸಿದೆ.
- ಸನ್ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯದಲ್ಲಿ ಐದರಲ್ಲಿ ಸೋಲು ಎರಡರಲ್ಲಿ ಜಯ ಕಂಡು 4 ಅಂಕ ಸಂಪಾದಿಸಿ -0.725 ರನ್ರೇಟ್ ಹೊಂದಿದೆ.
- ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳ ಪೈಕಿ ಕೇವಲ ಎರಡರಲ್ಲಷ್ಟೆ ಜಯ ಸಾಧಿಸಿ 4 ಅಂಕ ಸಂಪಾದಿಸಿ -0.961 ರನ್ರೇಟ್ ಹೊಂದಿದೆ.
IPL 2023: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಪ್ರಮುಖ ವೇಗಿ ಕಂಬ್ಯಾಕ್..!
ಆರೆಂಜ್ ಕ್ಯಾಪ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಏಳು ಪಂದ್ಯಗಳಲ್ಲಿ ಐದು ಅರ್ಧಶತಕ ಸಿಡಿಸಿ ಒಟ್ಟು 405 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಸಿಎಸ್ಕೆ ತಂಡದ ಡೆವೊನ್ ಕಾನ್ವೇ ಇದ್ದು ಏಳು ಪಂದ್ಯಗಳಿಂದ 314 ರನ್ ಗಳಿಸಿದ್ದಾರೆ. ಡೆಲ್ಲಿ ನಾಯಕ ಡೇವಿಡ್ ವಾರ್ನರ್ 306 ರನ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್:
ಆರ್ಸಿಬಿ ತಂಡದ ಮೊಹಮ್ಮದ್ ಸಿರಾಜ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಏಳು ಪಂದ್ಯಗಳಿಂದ 13 ವಿಕೆಟ್ ಕಬಳಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಅರ್ಶ್ದೀಪ್ ಸಿಂಗ್ ದ್ವಿತೀಯ ಸ್ಥಾನದಲ್ಲಿದ್ದು ಆಡಿರುವ ಏಳು ಪಂದ್ಯಗಳಲ್ಲಿ 13 ವಿಕೆಟ್ ಪಡೆದುಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಏಳು ಪಂದ್ಯಗಳಿಂದ ಒಟ್ಟು 12 ವಿಕೆಟ್ ಕಿತ್ತು ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ