IPL 2023 Points Table: ಆರೆಂಜ್, ಪರ್ಪಲ್ ಕ್ಯಾಪ್ ಆರ್​ಸಿಬಿ ಪ್ಲೇಯರ್ಸ್ ಬಳಿ ಭದ್ರ: ಪಾಯಿಂಟ್ ಟೇಬಲ್ ಹೇಗಿದೆ?

|

Updated on: Apr 25, 2023 | 10:54 AM

Orange-Purple Cap IPL 2023: ಡೆಲ್ಲಿ-ಎಸ್​ಆರ್​ಹೆಚ್ ಪಂದ್ಯಗ ಬಳಿಕ ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL 2023 Points Table: ಆರೆಂಜ್, ಪರ್ಪಲ್ ಕ್ಯಾಪ್ ಆರ್​ಸಿಬಿ ಪ್ಲೇಯರ್ಸ್ ಬಳಿ ಭದ್ರ: ಪಾಯಿಂಟ್ ಟೇಬಲ್ ಹೇಗಿದೆ?
IPL 2023
Follow us on

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 34 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಇಂದು ಐಪಿಎಲ್ 2023 ರಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ (GT vs MI) ಮುಖಾಮುಖಿ ಆಗಲಿದೆ. ಸೋಮವಾರ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ರನ್​ಗಳ ರೋಚಕ ಗೆಲುವು ಸಾಧಿಸಿತು. ಹಾಗಾದರೆ, ಡೆಲ್ಲಿ-ಎಸ್​ಆರ್​ಹೆಚ್ ಪಂದ್ಯಗ ಬಳಿಕ ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಏಳು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಎರಡರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿ ಮೊದಲ ಸ್ಥಾನದಲ್ಲಿದೆ. +0.662 ರನ್​ರೇಟ್ ಹೊಂದಿದೆ.
  • ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಭರ್ಜರಿ ಆಟ ಪ್ರದರ್ಶಿಸುತ್ತಿದ್ದು ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳಲ್ಲಿ ನಾಲ್ಕು ಗೆಲುವು, ಮೂರರಲ್ಲಿ ಸೋಲುಂಡು +0.844 ರನ್​ರೇಟ್​ನೊಂದಿಗೆ 8 ಅಂಕ ಸಂಪಾದಿಸಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳಲ್ಲಿ ನಾಲ್ಕು ಗೆಲುವು, ಮೂರು ಸೋಲು ಕಂಡು 8 ಅಂಕ ಸಂಪಾದಿಸಿ +0.547 ರನ್​ರೇಟ್​ ಹೊಂದಿದೆ.
  • ಗುಜರಾತ್ ಟೈಟಾನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದ್ದು ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು, ಎರಡು ಸೋಲುಂಡು +0.212 ರನ್​ರೇಟ್​ನೊಂದಿಗೆ 8 ಅಂಕ ಸಂಪಾದಿಸಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ಮೂರರಲ್ಲಿ ಸೋಲು ಕಂಡು 8 ಅಂಕ ಸಂಪಾದಿಸಿ -0.008 ರನ್​ರೇಟ್ ಹೊಂದಿದೆ.
  • ಪಂಜಾಬ್ ಕಿಂಗ್ಸ್ ಆಡಿದ ಏಳು ಪಂದ್ಯಗಳಲ್ಲಿ ನಾಲ್ಕು ಸೋಲು-ಮೂರು ಜಯ ಕಂಡು 8 ಅಂಕ ಹೊಂದಿ -0.162ರನ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.
  • ಮುಂಬೈ ಇಂಡಿಯನ್ಸ್ ಏಳನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯದಲ್ಲಿ ತಲಾ ಮೂರು ಸೋಲು, ಮೂರು ಗೆಲುವು ಕಂಡು 6 ಅಂಕ ಸಂಪಾದಿಸಿ -0.254 ರನ್​ರೇಟ್ ಹೊಂದಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಪ್ಲೇಸ್​ನಲ್ಲಿದೆ. ಆಡಿದ ಏಳು ಪಂದ್ಯಗಳಲ್ಲಿ ಎರಡು ಗೆಲುವು, ಐದರಲ್ಲಿ ಸೋಲುಂಡು -0.186 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯದಲ್ಲಿ ಐದರಲ್ಲಿ ಸೋಲು ಎರಡರಲ್ಲಿ ಜಯ ಕಂಡು 4 ಅಂಕ ಸಂಪಾದಿಸಿ -0.725 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳ ಪೈಕಿ ಕೇವಲ ಎರಡರಲ್ಲಷ್ಟೆ ಜಯ ಸಾಧಿಸಿ 4 ಅಂಕ ಸಂಪಾದಿಸಿ -0.961 ರನ್​ರೇಟ್ ಹೊಂದಿದೆ.

IPL 2023: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಪ್ರಮುಖ ವೇಗಿ ಕಂಬ್ಯಾಕ್..!

ಆರೆಂಜ್ ಕ್ಯಾಪ್:

ಇದನ್ನೂ ಓದಿ
SRH vs DC, IPL 2023: ಹೈದರಾಬಾದ್- ಡೆಲ್ಲಿ ರೋಚಕ ಪಂದ್ಯದ ಫೋಟೋಗಳು ಇಲ್ಲಿದೆ ನೋಡಿ
GT vs MI, IPL 2023: ಐಪಿಎಲ್​ನಲ್ಲಿಂದು ದಿಗ್ಗಜರ ಕಾಳಗ: ಗುಜರಾತ್-ಮುಂಬೈ ನಡುವೆ ಹೈವೋಲ್ಟೇಜ್ ಪಂದ್ಯ
IPL 2023: ಈ ಸಲ ಪಕ್ಕಾ RCB ಫೈನಲ್​ ಆಡಲಿದೆಯಂತೆ..!
IPL 2023: ವಿರಾಟ್ ಕೊಹ್ಲಿಗೆ 24 ಲಕ್ಷ ರೂ. ದಂಡ: ಬ್ಯಾನ್ ಭೀತಿಯಲ್ಲಿ RCB ನಾಯಕ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಏಳು ಪಂದ್ಯಗಳಲ್ಲಿ ಐದು ಅರ್ಧಶತಕ ಸಿಡಿಸಿ ಒಟ್ಟು 405 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಸಿಎಸ್​ಕೆ ತಂಡದ ಡೆವೊನ್ ಕಾನ್ವೇ ಇದ್ದು ಏಳು ಪಂದ್ಯಗಳಿಂದ 314 ರನ್ ಗಳಿಸಿದ್ದಾರೆ. ಡೆಲ್ಲಿ ನಾಯಕ ಡೇವಿಡ್ ವಾರ್ನರ್ 306 ರನ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್:

ಆರ್​ಸಿಬಿ ತಂಡದ ಮೊಹಮ್ಮದ್ ಸಿರಾಜ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಏಳು ಪಂದ್ಯಗಳಿಂದ 13 ವಿಕೆಟ್ ಕಬಳಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಅರ್ಶ್​ದೀಪ್ ಸಿಂಗ್ ದ್ವಿತೀಯ ಸ್ಥಾನದಲ್ಲಿದ್ದು ಆಡಿರುವ ಏಳು ಪಂದ್ಯಗಳಲ್ಲಿ 13 ವಿಕೆಟ್ ಪಡೆದುಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಏಳು ಪಂದ್ಯಗಳಿಂದ ಒಟ್ಟು 12 ವಿಕೆಟ್ ಕಿತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ