IPL Points Table 2023: ರೋಚಕ ಘಟ್ಟದತ್ತ ಐಪಿಎಲ್ 2023: ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್-ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

|

Updated on: May 11, 2023 | 10:13 AM

IPL 2023 Orange-Purple Cap: ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL Points Table 2023: ರೋಚಕ ಘಟ್ಟದತ್ತ ಐಪಿಎಲ್ 2023: ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್-ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
IPL 2023: ಐಪಿಎಲ್ ಸೀಸನ್ 16 ರ ಪ್ಲೇಆಫ್ ರೇಸ್ ರೋಚಕ ಘಟ್ಟದತ್ತ ಸಾಗುತ್ತಿದೆ. ಈಗಾಗಲೇ ಬಹುತೇಕ ತಂಡಗಳ 12 ಪಂದ್ಯಗಳು ಮುಗಿದರೂ ಯಾವುದೇ ತಂಡ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿಲ್ಲ. ಹೀಗಾಗಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ ತಂಡ ಯಾವುದೆಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಈ ಕುತೂಹಲವನ್ನು ತಣಿಸುವಂತಹ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ, ವೀಕ್ಷಕ ವಿವರಣೆಗಾರ ಹರ್ಭಜನ್ ಸಿಂಗ್.
Follow us on

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 55 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಹೆಚ್ಚಾಗುತ್ತಿವೆ. ಅಲ್ಲದೆ 20ನೇ ಓವರ್​ನ ಕೊನೆಯ ಎಸೆತದಲ್ಲಿ ಗೆಲುವು ಸಾಧಿಸುತ್ತಿರುವುದು ಕಂಡು ಬರುತ್ತಿದೆ. ಹೀಗೆ ಅನೇಕ ರೋಚಕ ಕಾದಾಟಕ್ಕೆ ಈ ಬಾರಿಯ ಐಪಿಎಲ್ ಸಾಕ್ಷಿಯಾಗುತ್ತಿದೆ. ಬುಧವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಮುಖಾಮುಖಿಯಲ್ಲಿ ಸಿಎಸ್​ಕೆ 27 ರನ್​ಗಳ ಜಯ ಕಂಡಿತು. ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (MI vs RCB) ಸೆಣೆಸಾಟ ನಡೆಸಲಿದೆ. ಸದ್ಯ ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಪ್ರದರ್ಶನ ತೋರಿ ಅಗ್ರಸ್ಥಾನದಲ್ಲಿ ಭದ್ರವಾಗಿದ್ದು ಪ್ಲೇ ಆಫ್​ಗೆ ಬಹುತೇಕ ಕಾಲಿಟ್ಟಿದೆ. ಆಡಿದ 11 ಪಂದ್ಯಗಳಲ್ಲಿ ಎಂಟು ಗೆಲುವು, ಮೂರು ಸೋಲುಂಡು +0.951 ರನ್​ರೇಟ್​ನೊಂದಿಗೆ 16 ಅಂಕ ಸಂಪಾದಿಸಿದೆ.
  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು ಒಟ್ಟು 15 ಅಂಕ ಸಂಪಾದಿಸಿದೆ. +0.493 ರನ್​ರೇಟ್ ಹೊಂದಿದೆ.
  • ಮುಂಬೈ ಇಂಡಿಯನ್ಸ್ ತಂಡ ಮೂರನೇ ಸ್ಥಾನಕ್ಕೇರಿದೆ. ಇವರು ಆಡಿದ 11 ಪಂದ್ಯದಲ್ಲಿ 5 ಸೋಲು, ಆರು ಗೆಲುವು ಕಂಡು 12 ಅಂಕ ಸಂಪಾದಿಸಿ -0.255 ರನ್​ರೇಟ್ ಹೊಂದಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳಲ್ಲಿ ಐದು ಗೆಲುವು, ಐದು ಸೋಲು ಕಂಡು 11 ಅಂಕ ಸಂಪಾದಿಸಿ +0.294 ರನ್​ರೇಟ್​ ಹೊಂದಿದೆ.
  • ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು, ಆರು ಸೋಲುಂಡು +0.388ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರನೇ ಸ್ಥಾನದಲ್ಲಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು, ಆರರಲ್ಲಿ ಸೋಲುಂಡು -0.079 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕುಸಿತ ಕಂಡು ಏಳನೇ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ.
  • ಪಂಜಾಬ್ ಕಿಂಗ್ಸ್ ಆಡಿದ 11 ಪಂದ್ಯಗಳಲ್ಲಿ ಆರು ಸೋಲು- ಐದು ಜಯ ಕಂಡು 10 ಅಂಕ ಹೊಂದಿ -0.441ರನ್​ರೇಟ್​ನೊಂದಿಗೆ ಏಳನೇ ಸ್ಥಾನಲ್ಲಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯದಲ್ಲಿ ಆರರಲ್ಲಿ ಸೋಲು ನಾಲ್ಕರಲ್ಲಿ ಜಯ ಕಂಡು 8 ಅಂಕ ಸಂಪಾದಿಸಿ -0.472 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ 11 ಪಂದ್ಯಗಳ ಪೈಕಿ ನಾಲ್ಕರಲ್ಲಿ ಜಯ ಸಾಧಿಸಿ, ಏಳು ಪಂದ್ಯಗಳಲ್ಲಿ ಸೋಲುಂಡು 8 ಅಂಕ ಸಂಪಾದಿಸಿ -0.605 ರನ್​ರೇಟ್ ಹೊಂದಿದೆ.

IPL 2023: RCB ಬೌಲರ್​ಗಳ ಬೆಂಡೆತ್ತಿ ಭರ್ಜರಿ ದಾಖಲೆ ಬರೆದ ಮುಂಬೈ ಇಂಡಿಯನ್ಸ್

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ 11 ಪಂದ್ಯಗಳಲ್ಲಿ ಆರು ಅರ್ಧಶತಕ ಸಿಡಿಸಿ ಒಟ್ಟು 576 ರನ್ ಗಳಿಸಿದ್ದಾರೆ. ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇವರು ಆಡಿದ 11 ಪಂದ್ಯಗಳಲ್ಲಿ ಮೂರು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 477 ರನ್ ಕಲೆಹಾಕಿದ್ದಾರೆ. ಗುಜರಾತ್ ತಂಡದ ಶುಭ್​ಮನ್ ಗಿಲ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು 11 ಪಂದ್ಯಗಳಿಂದ 469 ರನ್ ಗಳಿಸಿದ್ದಾರೆ.

ಇದನ್ನೂ ಓದಿ
Dinesh Karthik: ಆರ್​ಸಿಬಿಗೆ ದೊಡ್ಡ ಆಘಾತ: ದಿನೇಶ್ ಕಾರ್ತಿಕ್ ಆರೋಗ್ಯದಲ್ಲಿ ಏರುಪೇರು
MS Dhoni: ಎಂಎಸ್ ಧೋನಿ ಸಿಕ್ಸ್ ಸಿಡಿಸಿದಾಗ ಪ್ರೇಕ್ಷಕ ಗ್ಯಾಲರಿಯಲ್ಲಿದ್ದ ಝೀವಾ ಏನು ಮಾಡಿದ್ರು ನೋಡಿ
KKR vs RR, IPL 2023: ಐಪಿಎಲ್​ನಲ್ಲಿಂದು ಕೋಲ್ಕತ್ತಾ-ರಾಜಸ್ಥಾನ್ ಮುಖಾಮುಖಿ: ಉಭಯ ತಂಡಗಳಿಗೆ ಗೆಲುವು ಅನಿವಾರ್ಯ
ODI World Cup 2023: ಏಕದಿನ ವಿಶ್ವಕಪ್​ಗೆ 8 ತಂಡಗಳು ಫೈನಲ್

ಪರ್ಪಲ್ ಕ್ಯಾಪ್:

ಗುಜರಾತ್ ಟೈಟಾನ್ಸ್ ತಂಡದ ಮೊಹಮ್ಮದ್ ಶಮಿ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿರುವ ಹನ್ನೊಂದು ಪಂದ್ಯಗಳಲ್ಲಿ 19 ವಿಕೆಟ್ ಪಡೆದುಕೊಂಡಿದ್ದಾರೆ. ಇದೇ ತಂಡದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಕೂಡ 11 ಪಂದ್ಯಗಳಿಂದ 19 ವಿಕೆಟ್ ಕಿತ್ತು ದ್ವಿತೀಯ ಸ್ಥಾನದಲ್ಲಿದ್ದಾರೆ. ಸಿಕೆಸ್​ಕೆ ತಂಡದ ತುಷಾರ್ ದೇಶಪಾಂಡೆ ಆಡಿರುವ 12 ಪಂದ್ಯಗಳಲ್ಲಿ 19 ವಿಕೆಟ್ ಗಳಿಸಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ