AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಲ್ಲಿ ಹಿಟ್, ಟಿ20 ಲೀಗ್​ನಲ್ಲಿ ಫ್ಲಾಪ್; ಪಂಜಾಬ್​ಗೆ ಬಿಸಿ ತುಪ್ಪವಾದ 18.5 ಕೋಟಿ ರೂ. ಪ್ಲೇಯರ್!

IPL 2023: ಈ ಲೀಗ್‌ನಲ್ಲಿ ಅವರು ಇಲ್ಲಿಯವರೆಗೆ ಒಟ್ಟು ನಾಲ್ಕು ಪಂದ್ಯಗಳನ್ನು ಆಡಿದ್ದು ಈ ಪಂದ್ಯಗಳಲ್ಲಿ ಬೌಲಿಂಗ್ ಮಾಡಿ ಕೇವಲ 2 ವಿಕೆಟ್ ಮಾತ್ರ ಪಡೆದಿದ್ದಾರೆ.

ವಿಶ್ವಕಪ್​ನಲ್ಲಿ ಹಿಟ್, ಟಿ20 ಲೀಗ್​ನಲ್ಲಿ ಫ್ಲಾಪ್; ಪಂಜಾಬ್​ಗೆ ಬಿಸಿ ತುಪ್ಪವಾದ 18.5 ಕೋಟಿ ರೂ. ಪ್ಲೇಯರ್!
ಸ್ಯಾಮ್ ಕರನ್
TV9 Web
| Edited By: |

Updated on:Jan 18, 2023 | 11:57 AM

Share

ಕೆಲವು ದಿನಗಳ ಹಿಂದೆ ಐಪಿಎಲ್ ಮಿನಿ ಹರಾಜಿನಲ್ಲಿ (IPL Mini Auction 2023) ದಾಖಲೆ ಮೊತ್ತ ಪಡೆದು ಸಾಕಷ್ಟು ಚರ್ಚೆಗೆ ಒಳಗಾಗಿದ್ದ ಇಂಗ್ಲಿಷ್ ಆಲ್ ರೌಂಡರ್ ಸ್ಯಾಮ್ ಕರನ್ (Sam Curran) ಪ್ರಸ್ತುತ SA20 ಲೀಗ್​ನಲ್ಲಿ MI ಕೇಪ್ ಟೌನ್‌ ತಂಡದ ಪರ ಆಡುತ್ತಿದ್ದಾರೆ. ಈ ಮೊದಲು ಐಪಿಎಲ್ ಮಿನಿ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ 18.5 ಕೋಟಿ ರೂಪಾಯಿಗಳ ಬೃಹತ್ ಬೆಲೆಯನ್ನು ಪಾವತಿಸುವ ಮೂಲಕ ಸ್ಯಾಮ್ ಕರನ್ ಅವರನ್ನು ಖರೀದಿಸಿತ್ತು. 2022 ರಲ್ಲಿ ಆಡಿದ ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕರನ್, ವಿಶ್ವಕಪ್‌ನಲ್ಲಿ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಅವರ ಈ ಪ್ರದರ್ಶನ ನೋಡಿಯೇ ಪಂಜಾಬ್ ಕಿಂಗ್ಸ್ (Punjab Kings) ಅವರಿಗೆ ಭಾರಿ ಬೆಲೆ ನೀಡಿತ್ತು. ಆದರೆ ಈಗ ಸೌತ್ ಆಫ್ರಿಕಾ ಲೀಗ್​ನಲ್ಲಿ ನಿರಸ ಪ್ರದರ್ಶನ ನೀಡುತ್ತಿರುವ ಕರನ್ ಪಂಜಾಬ್ ಕಿಂಗ್ಸ್ ತಂಡದ ತಲೆನೋವು ಹೆಚ್ಚಿಸಿದ್ದಾರೆ.

ಪಂಜಾಬ್ ಕಿಂಗ್ಸ್​ಗೆ ಬಿಸಿ ತುಪ್ಪವಾದ ಕರನ್

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್‌ನಲ್ಲಿ ಸ್ಯಾಮ್ ಕರನ್ ಅವರ ಪ್ರದರ್ಶನವು ತುಂಬಾ ಕಳಪೆಯಾಗಿದೆ. ಈ ಲೀಗ್‌ನಲ್ಲಿ ಅವರು ಇಲ್ಲಿಯವರೆಗೆ ಒಟ್ಟು ನಾಲ್ಕು ಪಂದ್ಯಗಳನ್ನು ಆಡಿದ್ದು ಈ ಪಂದ್ಯಗಳಲ್ಲಿ ಬೌಲಿಂಗ್ ಮಾಡಿ ಕೇವಲ 2 ವಿಕೆಟ್ ಮಾತ್ರ ಪಡೆದಿದ್ದಾರೆ. ಅದೇ ಸಮಯದಲ್ಲಿ, ಅವರು ಬ್ಯಾಟಿಂಗ್‌ನಲ್ಲಿ ಕೇವಲ 43 ರನ್ ಮಾತ್ರ ಗಳಿಸಿದ್ದಾರೆ. ಇದರಲ್ಲಿ ಮೊದಲ ಪಂದ್ಯದಲ್ಲಿ 20 ರನ್, ಎರಡನೇ ಪಂದ್ಯದಲ್ಲಿ 0, ಮೂರನೇ ಪಂದ್ಯದಲ್ಲಿ 15* ಮತ್ತು ನಾಲ್ಕನೇ ಪಂದ್ಯದಲ್ಲಿ 8 ರನ್ ಗಳಿಸಿದರು.

T20 World Cup: ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿ ಗೆದ್ದ ಸ್ಯಾಮ್ ಕರನ್; ಕೊಹ್ಲಿ ದಾಖಲೆ ಪುಡಿಗಟ್ಟಿದ ಆಂಗ್ಲ ವೇಗಿ!

SA20 ಲೀಗ್‌ನಲ್ಲಿ ಫ್ಲಾಪ್

ಈ ಅಂಕಿಅಂಶಗಳನ್ನು ನೋಡಿದರೆ ಕರನ್.. SA20 ಲೀಗ್‌ನಲ್ಲಿ ಬಾಲು ಮತ್ತು ಬ್ಯಾಟ್ ಎರಡರಲ್ಲೂ ವಿಫಲವಾದಂತೆ ತೋರುತ್ತಿದೆ. ಹೀಗಾಗಿ ದಾಖಲೆಯ ಬೆಲೆಕೊಟ್ಟು ಖರೀದಿ ಮಾಡಿರುವ ಪಂಜಾಬ್ ಕಿಂಗ್ಸ್‌ಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ.

ವೃತ್ತಿಜೀವನ ಹೀಗಿದೆ

24ರ ಹರೆಯದ ಕರನ್ ಇಂಗ್ಲೆಂಡ್ ಪರ ಮೂರು ಫಾರ್ಮ್ಯಾಟ್‌ಗಳಲ್ಲೂ ಕಣಕ್ಕಿಳಿಯುತ್ತಿದ್ದಾರೆ.ಇದುವರೆಗೂ ಅವರು 24 ಟೆಸ್ಟ್ ಪಂದ್ಯಗಳಲ್ಲಿ 42 ಇನ್ನಿಂಗ್ಸ್‌ಗಳಲ್ಲಿ 47 ವಿಕೆಟ್ ಪಡೆದಿದ್ದು, ಬ್ಯಾಟಿಂಗ್​ನಲ್ಲಿ 38 ಇನ್ನಿಂಗ್ಸ್‌ಗಳಲ್ಲಿ 815 ರನ್ ಗಳಿಸಿದ್ದಾರೆ. ಇದರೊಂದಿಗೆ ಏಕದಿನ ಮಾದರಿಯಲ್ಲಿ ಬೌಲಿಂಗ್​ನಲ್ಲಿ 16 ವಿಕೆಟ್ ಕಬಳಿಸಿದ್ದರೆ, ಬ್ಯಾಟಿಂಗ್​ನಲ್ಲಿ 206 ರನ್ ಗಳಿಸಿದ್ದಾರೆ. ಹಾಗೆಯೇ 35 ಟಿ20 ಅಂತರಾಷ್ಟ್ರೀಯ ಪಂದ್ಯಗಳ 21 ಇನ್ನಿಂಗ್ಸ್‌ಗಳಲ್ಲಿ 41 ವಿಕೆಟ್ ಮತ್ತು 158 ರನ್ ಗಳಿಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 am, Wed, 18 January 23

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ