IPL 2023: ಐಪಿಎಲ್ ಪ್ರಯಾಣ ಮುಗಿದಿದ್ದರೂ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆರ್​ಸಿಬಿ ನಾಯಕ

IPL 2023: ಐಪಿಎಲ್ 2023 ರ ಎರಡನೇ ಕ್ವಾಲಿಫೈಯರ್ ಮತ್ತು ಫೈನಲ್ ಅಹಮದಾಬಾದ್‌ನಲ್ಲಿ ನಡೆಯಲಿದೆ ಮತ್ತು ಆರ್‌ಸಿಬಿ ನಾಯಕ ಈ ಎರಡೂ ಪಂದ್ಯಗಳ ಭಾಗವಾಗಲಿದ್ದಾರೆ.

IPL 2023: ಐಪಿಎಲ್ ಪ್ರಯಾಣ ಮುಗಿದಿದ್ದರೂ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆರ್​ಸಿಬಿ ನಾಯಕ
ಫಾಫ್ ಡು ಪ್ಲೆಸಿಸ್
Follow us
ಪೃಥ್ವಿಶಂಕರ
|

Updated on: May 26, 2023 | 4:33 PM

ಐಪಿಎಲ್ 2023 (IPL 2023) ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಪ್ರಯಾಣ ಲೀಗ್ ಹಂತದಲ್ಲೇ ಕೊನೆಗೊಂಡಿತು. ಆರ್‌ಸಿಬಿ 14 ಪಂದ್ಯಗಳಲ್ಲಿ 7ರಲ್ಲಿ ಗೆದ್ದು ಒಟ್ಟು 14 ಅಂಕಗಳೊಂದಿಗೆ ಆರನೇ ಸ್ಥಾನ ಗಳಿಸಿತು. ಪಂದ್ಯಾವಳಿಯಿಂದ ಆರ್​ಸಿಬಿ (RCB) ಹೊರಬಿದ್ದ ನಂತರ, ವಿರಾಟ್ ಕೊಹ್ಲಿ (Virat Kohli) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗಾಗಿ ಇಂಗ್ಲೆಂಡ್‌ಗೆ ತೆರಳಿದ್ದಾರೆ. ಉಳಿದ ಆಟಗಾರರು ಕೂಡ ತಮ್ಮ ಮನೆಗಳಿಗೆ ಮರಳಿದ್ದಾರೆ, ಆದರೆ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಅವರ ಪಯಣ ಈ ಟೂರ್ನಿಯಲ್ಲಿ ಇನ್ನೂ ಮುಗಿದಿಲ್ಲ. ಡು ಪ್ಲೆಸಿಸ್ ಕ್ವಾಲಿಫೈಯರ್ 2 ಮತ್ತು ಫೈನಲ್‌ ಮೂಲಕ ಮತ್ತೆ ಐಪಿಎಲ್​ಗೆ ಮರಳಲು ತಯಾರಿ ನಡೆಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಫಾಫ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ತಜ್ಞರ ಸಮಿತಿಯ ಭಾಗ

ಐಪಿಎಲ್ 2023 ರ ಎರಡನೇ ಕ್ವಾಲಿಫೈಯರ್ ಮತ್ತು ಫೈನಲ್ ಅಹಮದಾಬಾದ್‌ನಲ್ಲಿ ನಡೆಯಲಿದೆ ಮತ್ತು ಆರ್‌ಸಿಬಿ ನಾಯಕ ಈ ಎರಡೂ ಪಂದ್ಯಗಳ ಭಾಗವಾಗಲಿದ್ದಾರೆ. ಶುಕ್ರವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಹೀಗಾಗಿ ಈ ಎರಡು ಪ್ರಮುಖ ಪಂದ್ಯಗಳಲ್ಲಿ ಫಾಫ್ ಡು ಪ್ಲೆಸಿಸ್ ಪರಿಣಿತರಾಗಿ ಕಾಣಿಸಿಕೊಳ್ಳಲಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯ ಮತ್ತು ಅಂತಿಮ ಪಂದ್ಯಕ್ಕಾಗಿ ಆರ್‌ಸಿಬಿ ನಾಯಕ ಡುಪ್ಲೆಸಿಸ್ ಟಿವಿ ಪ್ರಸಾರಕರ ತಜ್ಞರ ಸಮಿತಿಯ ಭಾಗವಾಗಲಿದ್ದಾರೆ. ಹೀಗಾಗಿ, ಆವೃತ್ತಿಯ ಅಂತಿಮ ಎರಡು ಪಂದ್ಯಗಳಲ್ಲಿ ಅವರು ಈ ವಿಶೇಷ ಪಾತ್ರವನ್ನು ನಿರ್ವಹಿಸಲಿದ್ದಾರೆ.

WTC final 2023: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ ಸಿಗುವ ಬಹುಮಾನವೆಷ್ಟು ಗೊತ್ತಾ?

ಡುಪ್ಲೆಸಿ ಬಳಿ ಆರೆಂಜ್ ಕ್ಯಾಪ್

ಇನ್ನು ಐಪಿಎಲ್‌ನ ಈ ಆವೃತ್ತಿಯಲ್ಲಿ ಫಾಫ್ ಡುಪ್ಲೆಸಿಸ್ ಅವರ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಅವರು 14 ಪಂದ್ಯಗಳಲ್ಲಿ 56.15 ರ ಸರಾಸರಿಯಲ್ಲಿ 730 ರನ್ ಗಳಿಸಿದ್ದಾರೆ. ಇದರಲ್ಲಿ 8 ಅರ್ಧಶತಕಗಳು ಸೇರಿವೆ. ಆರೆಂಜ್ ಕ್ಯಾಪ್ ಪ್ರಸ್ತುತ ಡ್ಯೂಪ್ಲೆಸಿ ಬಳಿ ಇದೆ, ಆದರೆ ಆ ಕ್ಯಾಪ್ ಅವರ ತಲೆಯಿಂದ ಕೆಳಗಿಳಿಯುವ ಸನಿಹದಲ್ಲಿದೆ. ವಾಸ್ತವವಾಗಿ ಗುಜರಾತ್ ಟೈಟಾನ್ಸ್‌ ತಂಡದ ಶುಭ್​ಮನ್ ಗಿಲ್ ಆರೆಂಜ್ ಕ್ಯಾಪ್ ಪಡೆಯಲು ಇನ್ನು ಕೇವಲ 8 ರನ್‌ಗಳ ಅಂತರದಲ್ಲಿದ್ದಾರೆ. ಗಿಲ್ 15 ಪಂದ್ಯಗಳಲ್ಲಿ 722 ರನ್ ಗಳಿಸಿದ್ದು ಸದ್ಯ ಆರೆಂಜ್ ಕ್ಯಾಪ್ ರೇಸ್​ನಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್