AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 RCB vs DC Live Streaming: ಉಭಯ ತಂಡಗಳಿಗೂ ಬೇಕಿದೆ ಜಯ; ಪಂದ್ಯ ಎಷ್ಟು ಗಂಟೆಗೆ ಆರಂಭ?

IPL 2023 RCB vs DC Live Streaming: ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು 29 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ 18 ಬಾರಿ ಗೆದ್ದಿದ್ದರೆ, ಡೆಲ್ಲಿ 10 ಬಾರಿ ಗೆದ್ದಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

IPL 2023 RCB vs DC Live Streaming: ಉಭಯ ತಂಡಗಳಿಗೂ ಬೇಕಿದೆ ಜಯ; ಪಂದ್ಯ ಎಷ್ಟು ಗಂಟೆಗೆ  ಆರಂಭ?
ಆರ್​ಸಿಬಿ- ಡೆಲ್ಲಿ ಮುಖಾಮುಖಿ
ಪೃಥ್ವಿಶಂಕರ
|

Updated on:Apr 14, 2023 | 7:53 PM

Share

ನಾಳೆ ಐಪಿಎಲ್​ನಲ್ಲಿ (IPL 2023) ಡಬಲ್ ಹೆಡರ್ ದಿನವಾಗಿದೆ. ಅಂದರೆ ಒಂದೇ ದಿನದಲ್ಲಿ ಎರಡು ಪಂದ್ಯಗಳು ನಡೆಯಲ್ಲಿವೆ. 3 ಗಂಟೆಯಿಂದ ಆರಂಭವಾಗುವ ಮೊದಲ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ (David Warner) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ (Royal Challengers Bangalore vs Delhi Capitals) ತಂಡವನ್ನು ಎದುರಿಸುತ್ತಿದೆ. ಪ್ರಸಕ್ತ ಐಪಿಎಲ್‌ನಲ್ಲಿ ಆರ್‌ಸಿಬಿ ಇದುವರೆಗೆ 3 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 1ರಲ್ಲಿ ಗೆದ್ದು 2ರಲ್ಲಿ ಸೋತಿದೆ. ಮತ್ತೊಂದೆಡೆ, ವಾರ್ನರ್‌ ನಾಯಕತ್ವದ ಡೆಲ್ಲಿ ತಂಡ ಆಡಿದ 4 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಗೆಲುವು ಅವಶ್ಯಕವಾಗಿದೆ. ಆದ್ದರಿಂದ ನಾಳಿನ ಪಂದ್ಯದ ಮೇಲೆ ಎಲ್ಲರ ಗಮನ ನೆಟ್ಟಿದೆ.

ಇನ್ನು ಐಪಿಎಲ್​ನಲ್ಲಿ ಈ ಉಭಯ ತಂಡಗಳ ಮುಖಾಮುಖಿ ವರದಿ ನೋಡಿದರೆ ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು 29 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ 18 ಬಾರಿ ಗೆದ್ದಿದ್ದರೆ, ಡೆಲ್ಲಿ 10 ಬಾರಿ ಗೆದ್ದಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಹಾಗೆಯೇ ಉಭಯ ತಂಡಗಳ ಬಲಾಬಲ ನೋಡುವುದಾದರೆ, ಆರ್​ಸಿಬಿ ಪಾಳಯದಲ್ಲಿ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿ ಕಾಣುತ್ತಿದೆ. ಆದರೆ ಬೌಲಿಂಗ್ ವಿಭಾಗ ಮಾತ್ರ ಎಂದಿನಂತೆ ದುಬಾರಿಯಾಗುತ್ತಿದೆ. ಇತ್ತ ಡೆಲ್ಲಿ ತಂಡದಲ್ಲಿ ಎರಡೂ ವಿಭಾಗವೂ ಹೇಳಿಕೊಳ್ಳುವಂತ ಫಲಿತಾಂಶ ನೀಡುತ್ತಿಲ್ಲ. ಹಾಗಾಗಿ ಉಭಯ ತಂಡಗಳು ಈ ಪಂದ್ಯದಲ್ಲಿ ಹಳೆಯ ಲೋಪಗಳನ್ನು ಸರಿಪಡಿಸಿಕೊಂಡು ಅಖಾಡಕ್ಕಿಳಿಯುವ ಯತ್ನದಲ್ಲಿವೆ.

KKR vs SRH Live Score IPL 2023: ಹೈದರಾಬಾದ್ ಬ್ಯಾಟಿಂಗ್ ಆರಂಭ

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಯಾವಾಗ ನಡೆಯಲ್ಲಿದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ (ಏಪ್ರಿಲ್ 15) ನಾಳೆ ಶನಿವಾರ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಎಲ್ಲಿ ನಡೆಯುತ್ತದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗುತ್ತದೆ. ಪಂದ್ಯದ ಟಾಸ್ 3 ಗಂಟೆಗೆ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಲಭ್ಯವಿರುತ್ತದೆ. ಇದಲ್ಲದೆ, ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 pm, Fri, 14 April 23

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ