AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 RCB vs KKR Live Streaming: ಕೆಕೆಆರ್- ಆರ್​ಸಿಬಿ ಮುಖಾಮುಖಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

IPL 2023 RCB vs KKR Live Streaming: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಗುರುವಾರ, ಅಂದರೆ ಏಪ್ರಿಲ್ 6 ರಂದು ನಡೆಯಲ್ಲಿರುವ 9 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ.

IPL 2023 RCB vs KKR Live Streaming: ಕೆಕೆಆರ್- ಆರ್​ಸಿಬಿ ಮುಖಾಮುಖಿ; ಪಂದ್ಯ ಎಷ್ಟು ಗಂಟೆಗೆ ಆರಂಭ?
ಕೆಕೆಆರ್- ಆರ್​ಸಿಬಿ ಮುಖಾಮುಖಿImage Credit source: insidesport
ಪೃಥ್ವಿಶಂಕರ
|

Updated on:Apr 05, 2023 | 6:38 PM

Share

ಮುಖ್ಯಾಂಶಗಳು

  • 9 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ.
  • 3 ವರ್ಷಗಳ ನಂತರ ತವರು ನೆಲವಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಆಡುತ್ತಿರುವ ನಿತೀಶ್ ರಾಣಾ ನೇತೃತ್ವದ ಕೆಕೆಆರ್ ತಂಡ ಮೊದಲ ಜಯದ ನಿರೀಕ್ಷೆಯಲ್ಲಿದೆ.
  • ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳಿಗೆ ಆಟಗಾರರ ಇಂಜುರಿ ಹಿನ್ನಡೆಯುಂಟು ಮಾಡಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ (Eden Gardens) ಗುರುವಾರ ಅಂದರೆ, ಏಪ್ರಿಲ್ 6 ರಂದು ನಡೆಯಲ್ಲಿರುವ 9 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ( Kolkata Knight Riders vs Royal Challengers Bangalore) ತಂಡಗಳು ಸೆಣಸಾಡಲಿವೆ. 3 ವರ್ಷಗಳ ನಂತರ ತವರು ನೆಲವಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಆಡುತ್ತಿರುವ ನಿತೀಶ್ ರಾಣಾ (Nitish Rana) ನೇತೃತ್ವದ ಕೆಕೆಆರ್ ತಂಡ ಮೊದಲ ಜಯದ ನಿರೀಕ್ಷೆಯಲ್ಲಿದೆ. ಇನ್ನು ಉಭಯ ತಂಡಗಳು ಈ ಟೂರ್ನಿಯಲ್ಲಿ ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇದರಲ್ಲಿ ಆರ್​ಸಿಬಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 7 ವಿಕೆಟ್​ಗಳಿಂದ ಸೋಲಿಸಿತ್ತು. ಇತ್ತ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 7 ರನ್​ಗಳಿಂದ ಕೆಕೆಆರ್ ಸೋತಿತ್ತು. ಹೀಗಾಗಿ ತವರು ಮೈದಾನದಲ್ಲಿ ಗೆಲುವಿನ ಲಯದಲ್ಲಿರುವ ಆರ್​ಸಿಬಿಯನ್ನು ಸೋಲಿಸುವ ತವಕದಲ್ಲಿ ಕೆಕೆಆರ್ ತಂಡವಿದೆ.

ಆದರೆ ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳಿಗೆ ಆಟಗಾರರ ಇಂಜುರಿ ಹಿನ್ನಡೆಯುಂಟು ಮಾಡಿದೆ. ಬೆನ್ನಿನ ಗಾಯದಿಂದಾಗಿ ಕೆಕೆಆರ್ ತಂಡದ ಖಾಯಂ ನಾಯಕ ಶ್ರೇಯಸ್ ಅಯ್ಯರ್ ಇಡೀ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಇದರಿಂದಾಗಿ ಮೆನ್ ಇನ್ ಪರ್ಪಲ್ ತಂಡವನ್ನು ನಿತೀಶ್ ರಾಣಾ ಮುನ್ನಡೆಸಲಿದ್ದಾರೆ. ಹಾಗೆಯೇ ತಂಡದ ಸ್ಟಾರ್ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಕೂಡ ಈ ಬಾರಿಯ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಶಕೀಬ್ ಸ್ಥಾನಕ್ಕೆ ಕೆಕೆಆರ್ ತಂಡ ಇಂಗ್ಲೆಂಡ್ ತಂಡದ ಸ್ಟಾರ್ ಓಪನರ್ ಜೇಸನ್ ರಾಯ್ ಅವರನ್ನು ಕರೆತಂದಿದೆ. ಇತ್ತ ಆರ್​ಸಿಬಿ ಪಾಳಯದಲ್ಲೂ ಆಟಗಾರರ ಇಂಜುರಿ ಸಮಸ್ಯೆ ಹೆಚ್ಚಾಗಿದ್ದು, ಮೊದಲ ಪಂದ್ಯದಲ್ಲಿ ಇಂಜುರಿಗೆ ತುತ್ತಾಗಿದ್ದ ವೇಗಿ ರೀಸ್ ಟೋಪ್ಲಿ ಆಡುವುದು ಅನುಮಾನವಾಗಿದೆ. ಹಾಗೆಯೇ ತಂಡದ ಸ್ಟಾರ್ ಬ್ಯಾಟರ್ ರಜತ್ ಪಾಟಿದಾರ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಉಭಯ ತಂಡಗಳು ಯಾವ ಆಡುವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯುತ್ತವೆ ಎಂಬುದು ಕುತೂಹಲಕಾರಿಯಾಗಿದೆ.

ಐಪಿಎಲ್​ನಿಂದ ಮಾತ್ರವಲ್ಲ ಡಬ್ಲ್ಯುಟಿಸಿ ಫೈನಲ್​ನಿಂದಲೂ ಹೊರಬಿದ್ದ ಶ್ರೇಯಸ್ ಅಯ್ಯರ್..!

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ.

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ಯಾವಾಗ?

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ (ಏಪ್ರಿಲ್ 6) ನಾಳೆ ಗುರುವಾರ ನಡೆಯಲಿದೆ.

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆಯಲಿದೆ.

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಆರ್​ಸಿಬಿ ಮತ್ತು ಕೆಕೆಆರ್ ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗುತ್ತದೆ. ಪಂದ್ಯದ ಟಾಸ್ 7 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?

ಆರ್​ಸಿಬಿ ಮತ್ತು ಕೆಕೆಆರ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ಇದಲ್ಲದೆ, ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಸಂಭಾವ್ಯ ಉಭಯ ತಂಡಗಳು

ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್, ಮಂದೀಪ್ ಸಿಂಗ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೇನ್, ಲಾಕಿ ಫರ್ಗುಸನ್, ಅಂಕುಲ್ ರಾಯ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:37 pm, Wed, 5 April 23

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!