ಭಾನುವಾರದ ಡಬಲ್ ಹೆಡರ್‌ನ ಮೊದಲ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ (Royal Challengers Bangalore vs Rajasthan Royals) ಮುಖಾಮುಖಿಯಾಗಲಿವೆ. ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಆರ್‌ಸಿಬಿ ತನ್ನ ಕೊನೆಯ ಪಂದ್ಯವನ್ನು ಗೆದ್ದುಕೊಂಡಿತು. ಇತ್ತ ಟೇಬಲ್ ಟಾಪರ್ ರಾಜಸ್ಥಾನ ತನ್ನ ಕೊನೆಯ ಪಂದ್ಯದಲ್ಲಿ ಸೋಲನುಭವಿಸಿತ್ತು. ಈ ಬಾರಿ ವಿರಾಟ್ ಕೊಹ್ಲಿ (Virat Kohli) ಪಡೆ ಭಾನುವಾರ ತವರಿನಲ್ಲಿ ಪಿಂಕ್ ಆರ್ಮಿಯನ್ನು ಸೋಲಿಸಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಈ ಪಂದ್ಯದ ನಂತರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Kolkata Knight Riders and Chennai Super Kings) ಭಾನುವಾರ ರಾತ್ರಿ ಈಡನ್‌ನಲ್ಲಿ ಮುಖಾಮುಖಿಯಾಗಲಿವೆ.
ಇನ್ನು ಐಪಿಎಲ್ನಲ್ಲಿ ಈ ಉಭಯ ತಂಡಗಳ ಮುಖಾಮುಖಿ ವರದಿ ನೋಡುವುದಾದರೆ, ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಒಟ್ಟು 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ 13 ಬಾರಿ ಗೆದ್ದಿದ್ದರೆ, ರಾಜಸ್ಥಾನ 12 ಬಾರಿ ಗೆದ್ದಿದೆ. 3 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ.
IPL 2023: ಆರ್ಸಿಬಿಗೆ ಹಸಿರೇ ಅಪಾಯ! ಗ್ರೀನ್ ಜೆರ್ಸಿ ಪಂದ್ಯಗಳಲ್ಲಿ ಆರ್‌ಸಿಬಿ ಪ್ರದರ್ಶನ ಹೇಗಿದೆ ಗೊತ್ತಾ?
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್ ಪಂದ್ಯ ಯಾವಾಗ ನಡೆಯಲಿದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯ (ಏಪ್ರಿಲ್ 23) ನಾಳೆ ಭಾನುವಾರ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ ಪಂದ್ಯ ಎಲ್ಲಿ ನಡೆಯುತ್ತದೆ?
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವು 3:30ಕ್ಕೆ ಆರಂಭವಾಗಲಿದೆ. ಪಂದ್ಯದ ಟಾಸ್ 3 ಗಂಟೆಗೆ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಲಭ್ಯವಿರುತ್ತದೆ. ಇದಲ್ಲದೆ, ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:27 pm, Sat, 22 April 23