ಭಾನುವಾರ ನಡೆಯಲ್ಲಿರುವ ಡಬಲ್ ಹೆಡರ್ನಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತನ್ನ 7ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (Royal Challengers Bangalore vs Rajasthan Royals) ವಿರುದ್ಧ ತವರಿನಲ್ಲಿ ಸೆಣಸಲಿದೆ . ಈ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ತಮ್ಮ ಎಂದಿನ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿಯ ಬದಲು ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಾಸ್ತವವಾಗಿ 2011 ರ ಐಪಿಎಲ್ನಿಂದ ಆರ್‌ಸಿಬಿ ಒಂದು ಪಂದ್ಯದಲ್ಲಿ ಗ್ರೀನ್ ಜೆರ್ಸಿ (Green Jersey) ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್‌ಸಿಬಿ ಪ್ರತಿ ವರ್ಷ ಐಪಿಎಲ್‌ನಲ್ಲಿ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ಈ ಬಾರಿ ಪಿಂಕ್ ಆರ್ಮಿ ವಿರುದ್ಧ ಹಸಿರು ಜೆರ್ಸಿ ಧರಿಸಲಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್‌ಸಿಬಿ (RCB) ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಈ ಹಸಿರು ಜರ್ಸಿಯ ವಿಶೇಷತೆಯೆಂದರೆ 100 ಪ್ರತಿಶತ ಮರುಬಳಕೆಯ ವಸ್ತುಗಳಿಂದ ಈ ಜರ್ಸಿಯನ್ನು ತಯಾರಿಸಲಾಗಿರುತ್ತದೆ. ಇದೀಗ ನಾಳಿನ ಪಂದ್ಯದಲ್ಲಿ ಫಾಫ್ ಪಡೆ ಇದೇ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನ ಆರ್‌ಸಿಬಿ ಅಭಿಮಾನಿಗಳಲ್ಲಿ ಸೋಲಿನ ಆತಂಕ ಎದುರಾಗಿದೆ. ಏಕೆಂದರೆ ಆರ್‌ಸಿಬಿ ಹಸಿರು ಜೆರ್ಸಿ ತೊಟ್ಟು ಆಡಿದ ಪಂದ್ಯಗಳಲ್ಲಿ ಗೆದ್ದಿದ್ದಕ್ಕಿಂತ ಸೋತಿದ್ದೆ ಹೆಚ್ಚು.
2011ರಿಂದ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತಿರುವ ಆರ್‌ಸಿಬಿ ಐಪಿಎಲ್‌ನಲ್ಲಿ ಒಟ್ಟು 11 ಪಂದ್ಯಗಳನ್ನು ಆಡಿದೆ. ಈ ಹನ್ನೊಂದು ಪಂದ್ಯಗಳಲ್ಲಿ ಆರ್‌ಸಿಬಿ ಕೇವಲ 3 ಪಂದ್ಯಗಳಲ್ಲಿ ಮಾತ್ರ ಗೆದ್ದಿದ್ದರೆ, ಇನ್ನುಳಿದ 7 ಪಂದ್ಯಗಳಲ್ಲಿ ಸೋಲನುಭವಿಸಿದೆ. ಹಾಗಿದ್ದರೆ ಪ್ರತಿ ವರ್ಷ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯುವ ಆರ್ಸಿಬಿಯ ಪ್ರದರ್ಶನ ಆ ಪಂದ್ಯದಲ್ಲಿ ಹೇಗಿತ್ತು ಎಂಬುದರ ವಿವರ ಇಲ್ಲಿದೆ.
MI vs PBKS Live Score IPL 2023: ಟಾಸ್ ಗೆದ್ದ ರೋಹಿತ್; ಪಂಜಾಬ್ ಬ್ಯಾಟಿಂಗ್
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:09 pm, Sat, 22 April 23