ಇಂದು IPL 2023 Retention: ಯಾರು ಇನ್?, ಯಾರು ಔಟ್?: ಎಷ್ಟು ಗಂಟೆಗೆ?, ಲೈವ್ ವೀಕ್ಷಿಸುವುದು ಹೇಗೆ?
ಐಪಿಎಲ್ ರಿಟೆನ್ಶನ್ (IPL 2023 Retention) ನೇರಪ್ರಸಾರ ಕೂಡ ಕಾಣಲಿದೆ. ಮೂಲಗಳ ಪ್ರಕಾರ ಉಳಿಸಿಕೊಂಡ ಆಟಗಾರರು ಹಾಗೂ ರಿಲೀಸ್ ಮಾಡಿದ ಆಟಗಾರರ ಪಟ್ಟಿಯಲ್ಲಿ ಎಲ್ಲ ಫ್ರಾಂಚೈಸಿ ಸಂಜೆ 5 ಗಂಟೆ ಸುಮಾರಿಗೆ ಪ್ರಕಟ ಮಾಡಲಿದೆ
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 2023ಕ್ಕೆ (IPL 2023) ಎಲ್ಲಾ 10 ಫ್ರಾಂಚೈಸಿಗಳು ಭರ್ಜರಿ ಸಿದ್ಧತೆ ಶುರುಮಾಡಿಕೊಂಡಿದೆ. ಇದೇ ಡಿಸೆಂಬರ್ 23 ರಂದು ಕೇರಳದ ಕೊಚ್ಚಿಯಲ್ಲಿ ಮಿನಿ ಹರಾಜು ಪ್ರಕ್ರಿಯೆ ಏರ್ಪಡಿಸಲಾಗಿದ್ದು ಇದಕ್ಕೂ ಮುನ್ನ ಬಿಸಿಸಿಐ (BCCI) ಎಲ್ಲಾ ತಂಡಗಳಿಗೆ ತಮಗೆ ಅಗತ್ಯವಿಲ್ಲದ ಆಟಗಾರರನ್ನು ಬಿಡುಗಡೆ ಮಾಡಲು ಹೇಳಿತ್ತು. ಇಂದು ನವೆಂಬರ್ 15 ಇದಕ್ಕೆ ಕೊನೆಯ ದಿನವಾಗಿದೆ. ಈಗಾಗಲೇ ಕೆಲ ಫ್ರಾಂಚೈಸಿಗಳು ಅಧಿಕೃತವಾಗಿ ಆಟಗಾರರನ್ನು ಬಿಡುಗಡೆ ಮಾಡಿದ ಬಗ್ಗೆ ಹಾಗೂ ಟ್ರೇಡ್ ಮಾಡಿರುವ ಬಗ್ಗೆ ಮಾಹಿತಿ ಹೊರಹಾಕಿದೆ. ಇಂದು ಸಂಜೆ ಎಲ್ಲ 10 ತಂಡಗಳ ಸಂಪೂರ್ಣ ಚಿತ್ರಣ ಸಿಗಲಿದೆ. ಐಪಿಎಲ್ ರಿಟೆನ್ಶನ್ (IPL 2023 Retention) ನೇರಪ್ರಸಾರ ಕೂಡ ಕಾಣಲಿದೆ.
ಮೂಲಗಳ ಪ್ರಕಾರ ಉಳಿಸಿಕೊಂಡ ಆಟಗಾರರು ಹಾಗೂ ರಿಲೀಸ್ ಮಾಡಿದ ಆಟಗಾರರ ಪಟ್ಟಿಯಲ್ಲಿ ಎಲ್ಲ ಫ್ರಾಂಚೈಸಿ ಸಂಜೆ 5 ಗಂಟೆ ಸುಮಾರಿಗೆ ಪ್ರಕಟ ಮಾಡಲಿದೆ. ಇದು ಸ್ಟಾರ್ ಸ್ಫೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಕಾಣಲಿದೆ. ಜೊತೆಗೆ ಡಿಸ್ನಿ+ ಹಾಟ್ಸ್ಟಾರ್ನಲ್ಲಿ ಲೈವ್ಸ್ಟ್ರೀಮ್ ವೀಕ್ಷಿಸಬಹುದು.
ಸದ್ಯಕ್ಕೆ ತಿಳಿದುಬಂದಿರುವ ಮಾಹಿತಿಯ ಪ್ರಕಾರ, ಆರ್ಸಿಬಿ ತನ್ನ ತಂಡದಲ್ಲಿದ್ದ ನಾಲ್ಕು ಆಟಗಾರರನ್ನು ಬಿಡುಗಡೆ ಮಾಡಿದೆ ಎಂದು ವರದಿ ಆಗಿದೆ. ಐಪಿಎಲ್ 2022 ರಲ್ಲಿ ಕಮಾಲ್ ಮಾಡದ ಸಿದ್ಧಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲೆ ಹಾಗೂ ಆಕಾಶ್ ದೀಪ್ ಅವರನ್ನು ಆರ್ಸಿಬಿ ತಂಡದಿಂದ ಕೈಬಿಟ್ಟಿದೆ. ಆರ್ಸಿಬಿ ಉಳಿದಿಕೊಂಡ ಆಟಗಾರರು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್ ಹಾಗೂ ರಜತ್ ಪಾಟಿದಾರ್ ಅವರನ್ನು ತನ್ನಲ್ಲೇ ಉಳಿಸಿಕೊಂಡಿದೆ.
ಇನ್ನು ಮುಂಬೈ ಇಂಡಿಯನ್ಸ್ ತಂಡ 5 ಆಟಗಾರರನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕೈರೊನ್ ಪೊಲಾರ್ಡ್ ಹೆಸರು ಕೂಡ ಇರುವುದು ಅಚ್ಚರಿ ಮೂಡಿಸಿದೆ. ಇವರ ಜೊತೆಗೆ ಫ್ಯಾಬಿಯನ್ ಆಲೆನ್, ಟೈಮಲ್ ಮಿಲ್ಸ್, ಮಯಾಂಕ್ ಮಾರ್ಕಂಡೆ ಹಾಗೂ ಹೃತಿಕ್ ಶೋಕಿನ್ ಅವರನ್ನು ಮುಂಬೈ ರಿಲೀಸ್ ಮಾಡಿದೆ. ಪಂಜಾಬ್ ಕಿಂಗ್ಸ್ ತಂಡ ಅಚ್ಚರಿ ಎಂಬಂತೆ ಮಯಾಂಕ್ ಅಗರ್ವಾಲ್, ಶಾರುಖ್ ಖಾನ್ ಮತ್ತು ವೆಸ್ಟ್ ಇಂಡೀಸ್ ಆಲ್ ರೌಂಡರ್ ಓಡಿಯನ್ ಸ್ಮಿತ್ಅವರನ್ನು ತಂಡದಿಂದ ಕೈಬಿಡಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ. ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಭಾನುಕಾ ರಾಜಪಕ್ಸೆ, ಅರ್ಶ್‌ದೀಪ್ ಸಿಂಗ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್ ಹಾಗೂ ಸಂದೀಪ್ ಶರ್ಮಾ ಅವರನ್ನು ಉಳಿಸಿಕೊಂಡಿದೆಯಂತೆ.
ಇತ್ತ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕ್ರಿಸ್ ಜೋರ್ಡಾನ್, ಆಡಮ್ ಮಿಲ್ನೆ, ನಾರಾಯಣ್ ಜಗದೀಶನ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ತಂಡದಿಂದ ಕೈಬಿಟ್ಟಿದೆ. ಅಂತೆಯೆ ಗುಜರಾತ್ ಟೈಟಾನ್ಸ್ ಬಿಡುಗಡೆ ಮಾಡಿದ ಆಟಗಾರರು ಮ್ಯಾಥ್ಯೂ ವೇಡ್, ವಿಜಯ್ ಶಂಕರ್, ಗುರುಕೀರತ್ ಮನ್ ಸಿಂಗ್, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ನೂರ್ ಅಹ್ಮದ್, ಸಾಯಿ ಕಿಶೋರ್, ವರುಣ್ ಆರುಣ್ ಆಗಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ ಜೇಸನ್ ಹೋಲ್ಡರ್, ಮನೀಶ್ ಪಾಂಡೆ ಮತ್ತು ಮರ್ಕಸ್ ಸ್ಟೋಯಿನಿಸ್ ಅವರನ್ನು ರಿಲೀಸ್ ಮಾಡಲಿದೆ. ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ಎವಿನ್ ಲೂಯಿಸ್, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹ್ಸಿನ್ ಖಾನ್, ಆಯುಷ್ ಬದೋನಿ ತಂಡದಲ್ಲಿ ಇರಲಿದ್ದಾರೆ.
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು: ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ರೋವ್‌ಮನ್ ಪೊವೆಲ್, ಅಕ್ಸರ್ ಪಟೇಲ್, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಅನ್ರಿಚ್ ನಾರ್ಟ್ಜೆ, ಕುಲದೀಪ್ ಯಾದವ್. ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿದ ಆಟಗಾರರು: ಶಾರ್ದೂಲ್ ಠಾಕೂರ್, ಟಿಮ್ ಸಿಫೆರ್ಟ್, ಕೆಎಸ್ ಭರತ್, ಮನ್ ದೀಪ್ ಸಿಂಗ್ ಹಾಗೂ ಅಶ್ವಿನ್ ಹೆಬ್ಬಾರ್ ವರನ್ನು ರಿಲೀಸ್ ಮಾಡಿದೆ.
ರಾಜಸ್ಥಾನ ರಾಯಲ್ಸ್ ತಂಡದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಆದರೆ, ಕನ್ನಡಿಗ ದೇವದತ್ ಪಡಿಕ್ಕಲ್ ಅವರನ್ನು ಬಿಡುಗಡೆ ಮಾಡಲು ತಂಡ ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ. ಉಳಿದಂತೆ ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಲ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ಜೇಮ್ಸ್ ನೀಶಮ್, ಪ್ರಸಿದ್ಧ್ ಕೃಷ್ಣ, ಒಬೆದ್ ಮೆಕಾಯ್ ತಂಡದಲ್ಲಿ ಇರಲಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ಶಾರ್ದೂಲ್ ಠಾಕೂರ್ ಅವರನ್ನು ಟ್ರೇಡಿಂಗ್ ಮೂಲಕ ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇವರನ್ನು ಖರೀದಿಸಲು ಕೆಕೆಆರ್ ಜೊತೆಗೆ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಂದೆ ಬಂದವು. ಆದರೆ ಅಂತಿಮವಾಗಿ ಶಾರ್ದೂಲ್ ಕೆಕೆಆರ್ ಪಾಲಾಗಿದ್ದಾರೆ. ಇವರ ಜೊತೆಗೆ ಲೂಕಿ ಫರ್ಗುಸನ್ ಮತ್ತು ರೆಹ್ಮಾನುಲ್ಲ ಗುರ್ಬಜ್ ಕೂಡ ಕೆಕೆಆರ್ ಸೇರಿಕೊಂಡಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ತಂಡ ಕೇನ್ ವಿಲಿಯಮ್ಸನ್ ಮತ್ತು ನಿಕೋಲಸ್ ಪೂರನ್ ಅವರನ್ನು ತಂಡದಿಂದ ಕೈಬಿಡುವ ತೀರ್ಮಾನ ಮಾಡಿಕೊಂಡಿದೆಯಂತೆ.
Published On - 11:30 am, Tue, 15 November 22