AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 5 ವರ್ಷಗಳಲ್ಲಿ 17 ಪಂದ್ಯಗಳನ್ನಾಡಿದ ಆಟಗಾರನಿಗೆ KKR ತಂಡದ ನಾಯಕತ್ವ?

IPL 2023 Kannada: ಕೆಕೆಆರ್ ತಂಡದಲ್ಲಿ ಸ್ಟಾರ್ ಆಟಗಾರರಾದ ಸುನಿಲ್ ನರೈನ್,ಟಿಮ್ ಸೌಥಿ, ನಿತೀಶ್ ರಾಣಾ, ಶಕೀಬ್ ಅಲ್ ಹಸನ್​ನಂತಹ ಆಟಗಾರರಿದ್ದರೂ, ಫ್ರಾಂಚೈಸಿಯು ಯುವ ಎಡಗೈ ದಾಂಡಿಗನನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಿದೆ ಎಂದು ವರದಿಯಾಗಿದೆ.

IPL 2023: 5 ವರ್ಷಗಳಲ್ಲಿ 17 ಪಂದ್ಯಗಳನ್ನಾಡಿದ ಆಟಗಾರನಿಗೆ KKR ತಂಡದ ನಾಯಕತ್ವ?
Rinku Singh - KKR
TV9 Web
| Edited By: |

Updated on: Mar 15, 2023 | 4:05 PM

Share

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ರ ಮೊದಲಾರ್ಧದ ಪಂದ್ಯಗಳಿಂದ ಕೊಲ್ಕತ್ತಾ ನೈಟ್​ ರೈಡರ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅಯ್ಯರ್ ಇದೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆನ್ನು ನೋವಿನ ಸಮಸ್ಯೆಯು ಗಂಭೀರವಾಗಿರುವ ಕಾರಣ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಹಾಗೆಯೇ ಐಪಿಎಲ್​ನ ಆರಂಭಿಕ ಪಂದ್ಯಗಳಿಗೂ ಅಯ್ಯರ್ ಅಲಭ್ಯರಾಗಲಿದ್ದಾರೆ.

ಇತ್ತ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಹೊಸ ನಾಯಕನ ಆಯ್ಕೆಗೆ ಮುಂದಾಗಿದೆ. ತಂಡದಲ್ಲಿ ಅನುಭವಿ ಆಟಗಾರರ ದಂಡೇ ಇದ್ದು, ಇದಾಗ್ಯೂ ಕೆಕೆಆರ್ ಫ್ರಾಂಚೈಸಿ ಯುವ ಆಟಗಾರನಿಗೆ ಪಟ್ಟ ಕಟ್ಟಲು ಮುಂದಾಗಿರುವ ಸುಳಿವು ಸಿಕ್ಕಿದೆ.

ಕೆಕೆಆರ್ ತಂಡದಲ್ಲಿ ಸ್ಟಾರ್ ಆಟಗಾರರಾದ ಸುನಿಲ್ ನರೈನ್,ಟಿಮ್ ಸೌಥಿ, ನಿತೀಶ್ ರಾಣಾ, ಶಕೀಬ್ ಅಲ್ ಹಸನ್​ನಂತಹ ಆಟಗಾರರಿದ್ದರೂ, ಫ್ರಾಂಚೈಸಿಯು ಯುವ ಎಡಗೈ ದಾಂಡಿಗ ರಿಂಕು ಸಿಂಗ್ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇದನ್ನೂ ಓದಿ: ICC Test Rankings: ಐಸಿಸಿ ನೂತನ ಟೆಸ್ಟ್​ ಬೌಲರ್​ಗಳ ಶ್ರೇಯಾಂಕ ಪಟ್ಟಿ ಪ್ರಕಟ

ಕೆಕೆಆರ್​ ತಂಡದ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ನೀಡಿದ ಪ್ರತಿಕ್ರಿಯೆ ಕೂಡ ಇದನ್ನು ಪುಷ್ಠೀಕರಿಸಿದೆ. ಇತ್ತೀಚೆಗಷ್ಟೇ ರಿಂಕು ಸಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಕೆಕೆಆರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು.

ರಿಂಕು ಸಿಂಗ್ ಅವರ ಸ್ವೀಪ್ ಶಾಟ್ ವೀಡಿಯೊವನ್ನು ವೀಕ್ಷಿಸಿದ ಅಭಿಮಾನಿಯೊಬ್ಬರು “ಗೇಮ್ ಚೇಂಜರ್, ರಿಂಕು” ಎಂದು ಕಾಮೆಂಟ್ ಮಾಡಿದ್ದರು.  ಇದಕ್ಕೆ ಪ್ರತಿಕ್ರಿಯಿಸಿರುವ KKR ಸೋಷಿಯಲ್ ಮೀಡಿಯಾ ಹ್ಯಾಂಡಲ್​ “ನಮ್ಮ ನಾಯಕ” ಎಂದು ಉತ್ತರಿಸಿದ್ದಾರೆ. ಇದರೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ರಿಂಕು ಸಿಂಗ್​ಗೆ ನಾಯಕತ್ವ ನೀಡಲಿದೆ ಎಂಬ ಸುದ್ದಿ ವೈರಲ್ ಆಗಿದೆ.

ಕೆಕೆಆರ್ ಇನ್​ಸ್ಟಾಗ್ರಾಮ್ ಹ್ಯಾಂಡಲ್ ಪ್ರತಿಕ್ರಿಯೆ

5 ವರ್ಷಗಳಲ್ಲಿ 17 ಪಂದ್ಯಗಳು:

2018 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದ ರಿಂಕು ಸಿಂಗ್ ಇದುವರೆಗೆ ಆಡಿದ್ದು ಕೇವಲ 17 ಪಂದ್ಯಗಳನ್ನು ಮಾತ್ರ. ಈ ವೇಳೆ ಕಲೆಹಾಕಿರುವುದು ಕೇವಲ 251 ರನ್​ಗಳು. ಇದಾಗ್ಯೂ ಕೆಕೆಆರ್​ ಫ್ರಾಂಚೈಸಿಯು 25 ವರ್ಷದ ಎಡಗೈ ದಾಂಡಿಗನಿಗೆ ನಾಯಕತ್ವ ನೀಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೀಗಿದೆ:

ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಸೌತ್ ಯಾದವ್, ಟಿಶಿಮ್ ಯಾದವ್, ರಾಣಾ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಶಕೀಬ್ ಅಲ್ ಹಸನ್, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್, ಕುಲ್ವಂತ್ ಖೆಜ್ರೋಲಿಯಾ, ಡೇವಿಡ್ ವೀಝ, ಸುಯಶ್ ಶರ್ಮಾ, ವೈಭವ್ ಅರೋರಾ, ಎನ್. ಜಗದೀಸನ್, ಶ್ರೇಯಸ್ ಅಯ್ಯರ್ (ಗಾಯಾಳು).

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ