AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿ? ರೋಹಿತ್ ಶರ್ಮಾ ಹೇಳಿದ್ದೇನು ಗೊತ್ತಾ?

IPL 2023: ಐಪಿಎಲ್ ಸಮಯದಲ್ಲಿ ಯಾವುದೇ ಆಟಗಾರ ವಿರಾಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ.

IPL 2023: ಐಪಿಎಲ್​ನಲ್ಲಿ ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿ? ರೋಹಿತ್ ಶರ್ಮಾ ಹೇಳಿದ್ದೇನು ಗೊತ್ತಾ?
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on:Mar 23, 2023 | 11:58 AM

Share

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿ ಮುಗಿಸಿರುವ ಟೀಂ ಇಂಡಿಯಾ (India Vs Australia) ಆಟಗಾರರು ಇದೀಗ ಐಪಿಎಲ್​ಗೆ (IPL) ತಯಾರಿ ಆರಂಭಿಸಿದ್ದಾರೆ. ಇದೇ ತಿಂಗಳ ಅಂತ್ಯದಿಂದ ಅಂದರೆ, ಮಾರ್ಚ್​ 31ರಿಂದ ಐಪಿಎಲ್ ಆರಂಭವಾಗುತ್ತಿದೆ. ಆದರೆ ಈ ನಡುವೆ ಹುಟ್ಟಿಕೊಂಡಿದ್ದ ವದಂತಿಗೆ ಸ್ಪಷ್ಟನೆ ಸಿಕ್ಕಿದ್ದು, ಆ ವದಂತಿಗೆ ನಾಯಕ ರೋಹಿತ್ ಶರ್ಮಾ (Rohit Sharma) ತೆರೆ ಎಳೆದಿದ್ದಾರೆ. ಅದೆನೇಂದರೆ ಐಪಿಎಲ್ ನಂತರ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (World Test Championship) ಹಾಗೂ ಏಕದಿನ ವಿಶ್ವಕಪ್ (ODI World Cup) ಆಡಬೇಕು. ಹೀಗಾಗಿ ಕೆಲಸದ ಹೊರನಿರ್ವಹಣೆಯನ್ನು ಗಮದಲ್ಲಿಟ್ಟುಕೊಂಡು ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೆ ಐಪಿಎಲ್​ ಪಂದ್ಯಗಳ ನಡುವೆ ವಿರಾಮ ನೀಡಲು ಬಿಸಿಸಿಐ ಚಿಂತಿಸುತ್ತಿದೆ ಎಂಬ ಸುದ್ದಿ ಹರಿದಾಡಲಾರಂಭಿಸಿತ್ತು. ಆದರೆ ಇದೀಗ ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ, ಹಾಗಾಗುವ ಸಾಧ್ಯತೆಗಳಿಲ್ಲ ಎಂದಿದ್ದಾರೆ.

ಭಾರತ ಈ ವರ್ಷ ಏಕದಿನ ವಿಶ್ವಕಪ್‌ಗೆ ಆತಿಥ್ಯ ವಹಿಸುತ್ತಿದೆ. ಕಳೆದ ಬಾರಿ ಭಾರತದಲ್ಲಿ ವಿಶ್ವಕಪ್ ನಡೆದಾಗ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಬಿಸಿಸಿಐ ಈ ಬಾರಿಯೂ ತನ್ನ ತಂಡದಿಂದ ಅದೇ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ. ಅಲ್ಲದೆ ಈ ವಿಶ್ವಕಪ್‌ನ ಹೊರತಾಗಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಯಾರಿ ನಡೆಸುವ ಸಲುವಾಗಿ ಮಂಡಳಿ, ಐಪಿಎಲ್ ಫ್ರಾಂಚೈಸಿಗಳ ಬಳಿ ಪ್ರಮುಖ ಆಟಗಾರರ ವಿರಾಮದ ಬಗ್ಗೆ ಮಾತನಾಡಲಿದೆ ಎಂದು ವರದಿಯಾಗಿತ್ತು.

IND vs AUS: ಗೆಲುವಿನ ಟ್ರ್ಯಾಕ್​ನಲ್ಲಿದ್ದ ಭಾರತ ಎಡವಿದ್ದೆಲ್ಲಿ? ತಂಡದ ಸೋಲಿಗೆ ಪ್ರಮುಖ 4 ಕಾರಣಗಳಿವು

ಐಪಿಎಲ್‌ನಿಂದ ವಿರಾಮ ತೆಗೆದುಕೊಳ್ಳುವುದಿಲ್ಲ

ಆದರೆ ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ , ಆಟಗಾರರು ವಿಶ್ರಾಂತಿ ಪಡೆಯುತ್ತಾರೋ ಇಲ್ಲವೋ ಎಂಬುದು ಅವರ ತಂಡಗಳ ಮೇಲೆ ಅವಲಂಬಿತವಾಗಿರುತ್ತದೆ. ಐಪಿಎಲ್ ಸಮಯದಲ್ಲಿ ಯಾವುದೇ ಆಟಗಾರ ವಿರಾಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ. ನಾವು ಕೆಲವು ತಂಡಗಳಿಗೆ ಸಲಹೆಗಳನ್ನು ನೀಡಿದ್ದೇವೆ ಆದರೆ ಒಪ್ಪಿಕೊಳ್ಳುವುದು ಅಥವಾ ಬಿಡುವುದು ಫ್ರಾಂಚೈಸಿಗೆ ಬಿಟ್ಟದ್ದು. ಅವರು ಲೀಗ್‌ನಲ್ಲಿ ಆಟಗಾರರ ಮಾಲೀಕರಾಗಿರುವುದರಿಂದ ಅವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಲ್ಲದೆ ಇದು ಆಟಗಾರರ ಮೇಲೆ ಅವಲಂಬಿತವಾಗಿರುತ್ತದೆ. ಪ್ರತಿಯೊಬ್ಬರೂ ಬೆಳೆದಿದ್ದಾರೆ ಮತ್ತು ವಿಷಯಗಳನ್ನು ಅರ್ಥಮಾಡಿಕೊಳ್ಳುತ್ತಾರೆ. ನಾವು ಹೆಚ್ಚು ಆಡುತ್ತಿದ್ದೇವೆ ಎಂದು ಅವರು ಭಾವಿಸಿದರೆ ಅವರು 1 ಅಥವಾ 2 ಪಂದ್ಯಗಳ ವಿರಾಮವನ್ನು ತೆಗೆದುಕೊಳ್ಳಬಹುದು ಎಂದು ರೋಹಿತ್ ಹೇಳಿದ್ದಾರೆ.

ತಂಡಗಳಿಗೆ ಸಲಹೆಗಳನ್ನು ನೀಡಿದ ಬಿಸಿಸಿಐ

ಐಪಿಎಲ್​ನಲ್ಲಿ ಪ್ರತಿಯೊಂದು ತಂಡವೂ ಲೀಗ್ ಸುತ್ತಿನಲ್ಲಿ ತಲಾ 14 ಪಂದ್ಯಗಳನ್ನು ಆಡಬೇಕಿದ್ದು, ಆಯಾಸ ಖಚಿತ. ಐಪಿಎಲ್ ಬಳಿಕ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಬೇಕಿದೆ. ಐಪಿಎಲ್‌ನ ಆಯಾಸದಿಂದ ಆಟಗಾರರು ಈ ಮಹತ್ವದ ಪಂದ್ಯಕ್ಕೆ ಅಣಿಯಾಗುವುದು ಕೊಂಚ ತ್ರಾಸದಾಯಕ. ಅಲ್ಲದೆ ಐಪಿಎಲ್‌ನಲ್ಲಿ ಆಡುವ ಟೀಂ ಇಂಡಿಯಾ ಆಟಗಾರರು ಇಂಜುರಿಗೆ ತುತ್ತಾದರೆ, ಅದು ಮುಂದಿನ ಐಸಿಸಿ ಸರಣಿಗಳಲ್ಲಿ ತಂಡದ ಮೇಲೆ ಪರಿಣಾಮ ಬೀರಲಿದೆ. ಈ ಕಾರಣಕ್ಕಾಗಿ, ಬಿಸಿಸಿಐ ಕೆಲವು ಆಟಗಾರರ ಬಗ್ಗೆ ಅವರವರ ತಂಡಗಳಿಗೆ ಸಲಹೆಗಳನ್ನು ನೀಡಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:56 am, Thu, 23 March 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ