AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಾಟ್ ಎ ಕ್ಯಾಚ್…ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಂಜು ಸ್ಯಾಮ್ಸನ್

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ (60) ಹಾಗೂ ಜೋಸ್ ಬಟ್ಲರ್ (79) ಸ್ಪೋಟಕ ಆರಂಭ ಒದಗಿಸಿದ್ದರು.

IPL 2023: ವಾಟ್ ಎ ಕ್ಯಾಚ್...ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಂಜು ಸ್ಯಾಮ್ಸನ್
Sanju Samson
TV9 Web
| Edited By: |

Updated on:Apr 09, 2023 | 5:13 AM

Share

IPL 2023: ಮೊದಲ ಓವರ್​ನಲ್ಲೇ ಮೊದಲ ವಿಕೆಟ್​…ಟ್ರೆಂಟ್ ಬೌಲ್ಟ್ (Trent Boult) ಅವರ ಟ್ರೇಡ್ ಮಾರ್ಕ್​ ಈ ಬಾರಿಯ ಐಪಿಎಲ್​ನಲ್ಲೂ ಮುಂದುವರೆದಿದೆ. ಗುವಾಹಟಿ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡಕ್ಕೆ ಆರಂಭಿಕ ಆಘಾತ ನೀಡುವ ಮೂಲಕ ಬೌಲ್ಟ್ ಮತ್ತೊಮ್ಮೆ ಗಮನ ಸೆಳೆದರು. ಆದರೆ ಈ ಬಾರಿ ಮೊದಲ ವಿಕೆಟ್ ಪತನಕ್ಕೆ ಸಾಥ್ ನೀಡಿದ್ದು ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ (Sanju Samson) ಎಂಬುದು ವಿಶೇಷ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ (60) ಹಾಗೂ ಜೋಸ್ ಬಟ್ಲರ್ (79) ಸ್ಪೋಟಕ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ಹೆಟ್ಮೆಯರ್ ಕೂಡ 21 ಎಸೆತಗಳಲ್ಲಿ ಅಜೇಯ 39 ರನ್ ಬಾರಿಸಿ ತಂಡದ ಮೊತ್ತವನ್ನು 4 ವಿಕೆಟ್ ನಷ್ಟಕ್ಕೆ 199 ಕ್ಕೆ ತಂದು ನಿಲ್ಲಿಸಿದರು.

200 ರನ್​ಗಳ ಕಠಿಣ ಗುರಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ಪರ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಆರಂಭಿಕರಾಗಿ ಮೈದಾನಕ್ಕಿಳಿದರು. ಸ್ಟ್ರೈಕ್ ತೆಗೆದುಕೊಂಡ ಪೃಥ್ವಿ ಶಾ ಟ್ರೆಂಟ್ ಬೌಲ್ಟ್ ಅವರ ಮೊದಲೆರಡು ಎಸೆತಗಳನ್ನು ಎದುರಿಸಲು ವಿಫಲರಾದರು. ಎಲ್​ಬಿಡಬ್ಲ್ಯೂ ಅನ್ನೇ ಟಾರ್ಗೆಟ್ ಮಾಡಿ ಎಸೆದ ಬೌಲ್ಟ್ ಅವರ ಮೂರನೇ ಎಸೆತವು ಪೃಥ್ವಿ ಶಾ ಅವರ ಬ್ಯಾಟ್ ಸವರಿ ಸ್ಲಿಪ್​ನತ್ತ ಚಿಮ್ಮಿತ್ತು.

ಕ್ಷಣಾರ್ಧದಲ್ಲೇ ಬಲಭಾಗಕ್ಕೆ ಅದ್ಭುತವಾಗಿ ಡೈವ್ ಹೊಡೆದ ಸಂಜು ಸ್ಯಾಮ್ಸನ್ ಒಂದೇ ಕೈಯಲ್ಲಿ ಚೆಂಡನ್ನು ಬಂಧಿಸಿದರು. ಈ ಅತ್ಯದ್ಭುತ ಡೈವಿಂಗ್ ಕ್ಯಾಚ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಸ್ಯಾಮ್ಸನ್ ಅವರ ವಿಕೆಟ್ ಕೀಪಿಂಗ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11: ಜೋಸ್ ಬಟ್ಲರ್ , ಯಶಸ್ವಿ ಜೈಸ್ವಾಲ್ , ಸಂಜು ಸ್ಯಾಮ್ಸನ್ (ನಾಯಕ) , ರಿಯಾನ್ ಪರಾಗ್ , ಶಿಮ್ರಾನ್ ಹೆಟ್ಮೆಯರ್ , ಧ್ರುವ ಜುರೆಲ್ , ರವಿಚಂದ್ರನ್ ಅಶ್ವಿನ್ , ಜೇಸನ್ ಹೋಲ್ಡರ್ , ಟ್ರೆಂಟ್ ಬೌಲ್ಟ್ , ಸಂದೀಪ್ ಶರ್ಮಾ , ಯುಜ್ವೇಂದ್ರ ಚಾಹಲ್

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11: ಡೇವಿಡ್ ವಾರ್ನರ್ (ನಾಯಕ) , ಮನೀಶ್ ಪಾಂಡೆ , ರಿಲೀ ರೊಸೊವ್ , ರೋವ್ಮನ್ ಪೊವೆಲ್ , ಲಲಿತ್ ಯಾದವ್ , ಅಕ್ಷರ್ ಪಟೇಲ್ , ಅಭಿಷೇಕ್ ಪೊರೆಲ್ , ಅನ್ರಿಕ್ ನೋಕಿಯಾ, ಖಲೀಲ್ ಅಹ್ಮದ್ , ಕುಲದೀಪ್ ಯಾದವ್ , ಮುಖೇಶ್ ಕುಮಾರ್.

Published On - 6:32 pm, Sat, 8 April 23

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು