AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Schedule: 16ನೇ ಆವೃತ್ತಿಯ ಐಪಿಎಲ್ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯ ಯಾವಾಗ ಗೊತ್ತಾ?

IPL 2023 Schedule: 16ನೇ ಆವೃತ್ತಿಯ ಐಪಿಎಲ್ 2023 ರ ವೇಳಾಪಟ್ಟಿಯನ್ನು ಐಪಿಎಲ್ ಮಂಡಳಿ ಬಿಡುಗಡೆಯಾಗಿದ್ದು, ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿಯು ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ.

IPL 2023 Schedule: 16ನೇ ಆವೃತ್ತಿಯ ಐಪಿಎಲ್ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯ ಯಾವಾಗ ಗೊತ್ತಾ?
ಐಪಿಎಲ್ ವೇಳಾಪಟ್ಟಿ ಪ್ರಕಟImage Credit source: insidesport
ಪೃಥ್ವಿಶಂಕರ
|

Updated on:Feb 17, 2023 | 6:05 PM

Share

16ನೇ ಆವೃತ್ತಿಯ ಐಪಿಎಲ್ 2023 ರ ವೇಳಾಪಟ್ಟಿಯನ್ನು (IPL 2023 Schedule) ಐಪಿಎಲ್ ಮಂಡಳಿ ಬಿಡುಗಡೆಯಾಗಿದ್ದು, ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿಯು ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 28 ರಂದು ನಡೆಯಲಿದ್ದು, ಮೊದಲ ಪಂದ್ಯವು ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮತ್ತು ಪಂದ್ಯಾವಳಿಯ ಎರಡನೇ ಅತ್ಯಂತ ಯಶಸ್ವಿ ತಂಡ ಎಂಎಸ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings vs Gujarat Titans) ನಡುವೆ ನಡೆಯಲಿದೆ. ಟೂರ್ನಿಯ ಆರಂಭಿಕ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಮತ್ತೊಂದೆಡೆ, ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ (Royal Challengers Bangalore vs Mumbai Indians) ತಂಡಗಳು ಮುಖಾಮುಖಿಯಾಗಲಿವೆ.

ಏಪ್ರಿಲ್ 2 ರಂದು ಆರ್​ಸಿಬಿ- ಮುಂಬೈ ಮುಖಾಮುಖಿ

ಹಾಗೆಯೇ ಪಂದ್ಯಾವಳಿಯ ಎರಡನೇ ಪಂದ್ಯವೂ ಪಂಜಾಬ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಡುವೆ ನಡೆದರೆ, ಅದೇ ದಿನ ಲಕ್ನೋ ಸೂಪರ್ ಜೈಂಟ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಏಪ್ರಿಲ್ 2 ರಂದು, ರಾಜಸ್ಥಾನ ರಾಯಲ್ಸ್, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದ್ದು, ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ತಂಡವನ್ನು ಹೈ-ಪ್ರೊಫೈಲ್ ಹಣಾಹಣಿಯಲ್ಲಿ ಎದುರಿಸಲಿದೆ.

ಐಪಿಎಲ್ ವೇಳಾಪಟ್ಟಿ

ಐಪಿಎಲ್ ವೇಳಾಪಟ್ಟಿ

RCB: ಐಪಿಎಲ್ ಆರಂಭಕ್ಕೂ ಮುನ್ನ ಆರ್​ಸಿಬಿಗೆ ಬಿಗ್ ಶಾಕ್; ಮತ್ತೊಮ್ಮೆ ಟ್ವಿಟರ್ ಖಾತೆ ಹ್ಯಾಕ್..!

IPL 2023 ರ ಮೊದಲ ಐದು ಪಂದ್ಯಗಳ ವಿವರ ಹೀಗಿದೆ

  1. ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಮಾರ್ಚ್ 31.
  2. ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡ್ಸ್ – ಏಪ್ರಿಲ್ 1.
  3. ಲಕ್ನೋ ಸೂಪರ್ ಜೈಂಟ್ಸ್ vs ದೆಹಲಿ ಕ್ಯಾಪಿಟಲ್ಸ್ – ಏಪ್ರಿಲ್ 1.
  4. ಸನ್‌ರೈಸರ್ಸ್ ಹೈದರಾಬಾದ್ vs ರಾಜಸ್ಥಾನ ರಾಯಲ್ಸ್ – ಏಪ್ರಿಲ್ 2.
  5. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ – ಏಪ್ರಿಲ್ 2

ಒಟ್ಟು 70 ಲೀಗ್ ಪಂದ್ಯಗಳು

ಈ ಬಾರಿಯ ಐಪಿಎಲ್, ಅಹಮದಾಬಾದ್, ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಮತ್ತು ಧರ್ಮಶಾಲಾ ಸೇರಿದಂತೆ ಒಟ್ಟು 12 ನಗರಗಳಲ್ಲಿ ನಡೆಯಲಿದೆ. ಟೂರ್ನಿಯ ಮೊದಲ ಹಾಗೂ ಅಂತಿಮ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮೇ 21ರಂದು ಕೊನೆಯ ಲೀಗ್ ಪಂದ್ಯ ನಡೆಯಲಿದ್ದು, 18 ಡಬಲ್ ಹೆಡರ್ ಸೇರಿದಂತೆ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿವೆ. ಪ್ರತಿ ತಂಡ ತಲಾ 7 ಪಂದ್ಯಗಳನ್ನು ತವರು ನೆಲದಲ್ಲಿ ಮತ್ತು 7 ಪಂದ್ಯಗಳನ್ನು ಬೇರೆ ನೆಲದಲ್ಲಿ ಆಡಲಿದೆ.

2 ಗುಂಪುಗಳಾಗಿ ವಿಂಗಡಣೆ

10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು ಎ ಗುಂಪಿನಲ್ಲಿ ಮುಂಬೈ ಇಂಡಿಯನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸ್ಥಾನ ಪಡೆದಿದ್ದರೆ, ಬಿ ಗುಂಪಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಸ್ಥಾನ ಪಡೆದಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Fri, 17 February 23