GT vs CSK, IPL 2023: ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ 2023 ಆರಂಭ: ಗುಜರಾತ್-ಚೆನ್ನೈ ನಡುವೆ ಉದ್ಘಾಟನಾ ಪಂದ್ಯ

|

Updated on: Mar 31, 2023 | 7:21 AM

Gujarat vs Chennai: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಹಾಗೂ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ (GT vs CSK) ಮುಖಾಮುಖಿ ಆಗಲಿದೆ.

GT vs CSK, IPL 2023: ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ 2023 ಆರಂಭ: ಗುಜರಾತ್-ಚೆನ್ನೈ ನಡುವೆ ಉದ್ಘಾಟನಾ ಪಂದ್ಯ
GT vs CSK IPL 2023
Follow us on

ಕಳೆದ ಕೆಲವು ತಿಂಗಳುಗಳಿಂದ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಮತ್ತೆ ಬಂದಿದೆ. 16ನೇ ಆವೃತ್ತಿಯ ಐಪಿಎಲ್​ಗೆ ಇಂದು ಚಾಲನೆ ಸಿಗಲಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಹಾಗೂ ಎಂಎಸ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ (GT vs CSK) ಮುಖಾಮುಖಿ ಆಗಲಿದೆ. ಹಾಲಿ ಚಾಂಪಿಯನ್ ಜಿಟಿ ಈ ಬಾರಿ ಮತ್ತಷ್ಟು ಬಲಿಷ್ಠವಾಗಿದ್ದರೆ ಇತ್ತ ಸಿಎಸ್​ಕೆಯಲ್ಲಿ ಅನುಭವಿ ಆಟಗಾರರ ದಂಡೇ ಇದೆ. ಅಲ್ಲದೆ ಇದು ಧೋನಿಗೆ ಕೊನೆಯ ಐಪಿಎಲ್. ಹೀಗೆ ಅನೇಕ ಕಾರಣಗಳಿಗೆ ಮೊದಲ ಪಂದ್ಯವೇ ರೋಚಕತೆ ಸೃಷ್ಟಿಸಿದೆ.

ಗುಜರಾತ್ ಟೈಟಾನ್ಸ್:

ಕಳೆದ ಸೀಸನ್​ನಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಗುಜರಾತ್ ಟೈಟಾನ್ಸ್ ಟ್ರೋಫಿ ಎತ್ತಿ ಹಿಡಿದಿತ್ತು. ಈ ಬಾರಿ ಐಪಿಎಲ್ 2022ಕ್ಕಿಂತಲೂ ಬಲಿಷ್ಠವಾಗಿದೆ. ಶುಭ್​ಮನ್ ಗಿಲ್, ವೃದ್ದಿಮನ್ ಸಾಹ, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ, ವಿಜಯ್ ಶಂಕರ್, ಮ್ಯಾಥ್ಯೂ ವೇಡ್, ರಾಹುಲ್ ತೇವಾಟಿಯ, ರಶೀದ್ ಖಾನ್ ಹೀಗೆ ದೊಡ್ಡ ಬ್ಯಾಟಿಂಗ್ ಬಲವಿದೆ. ಡೇವಿಡ್ ಮಿಲ್ಲರ್ ಸೇರಿದಂತೆ ಕೆಲ ಆಟಗಾರರು ಇನ್ನಷ್ಟೆ ತಂಡ ಸೇರಿಕೊಳ್ಳಬೇಕು. ಮೊಹಮ್ಮದ್ ಶಮಿ, ಜೋಶ್ವಾ ಲಿಟಲ್ ಸ್ಟಾರ್ ವೇಗಿಗಳಾಗಿದ್ದಾರೆ.

ಇದನ್ನೂ ಓದಿ
IPL 2023: ಈ ಬಾರಿ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಸ್ಟೀವ್ ಸ್ಮಿತ್
IPL 2023: ಐಪಿಎಲ್ ಫ್ರೀ ವೀಕ್ಷಿಸುವುದು ಹೇಗೆ? ಯಾವ ಚಾನೆಲ್​ಗಳಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ
IPL 2023: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ CSK ಗೆ ಆಘಾತ: ಸ್ಟಾರ್ ಆಟಗಾರ ಔಟ್
IPL 2023: ಐಪಿಎಲ್​ ಅಖಾಡದಲ್ಲಿ 10 ಕನ್ನಡಿಗರು..!

ಚೆನ್ನೈ ಸೂಪರ್ ಕಿಂಗ್ಸ್:

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಅನುಭವಿಗಳ ದಂಡೇ ಇದೆ. ಡೆವೋನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯಾ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ಅಂಬಟಿ ರಾಯುಡು, ಬೆನ್ ಸ್ಟೋಕ್ಸ್, ರವೀಂದ್ರ ಜಡೇಜಾ, ಎಂಎಸ್ ಧೋನಿ ಹೀಗೆ ಹಿರಿಯ ಅನುಭವಿ ಬ್ಯಾಟರ್​ಗಳು ತಂಡದಲ್ಲಿದ್ದಾರೆ. ದೀಪಕ್ ಚಹರ್, ಮತೀಶಾ ಪಥಿರನಾ, ಖೈಲ್ ಜೆಮಿಸನ್ ನಂತಹ ವೇಗಿಗಳಿದ್ದಾರೆ.

IPL 2023: SRH ತಂಡದ ಹಂಗಾಮಿ ನಾಯಕನಾಗಿ ಭುವನೇಶ್ವರ್ ಕುಮಾರ್ ಆಯ್ಕೆ

ಮುಖಾಮುಖಿ:

ಕಳೆದ ಸೀಸನ್​ನ ಲೀಗ್ ಸುತ್ತಿನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಎರಡು ಪಂದ್ಯಗಳು ನಡೆದಿದ್ದವು. ಈ ಎರಡೂ ಪಂದ್ಯಗಳಲ್ಲೂ ಹಾರ್ದಿಕ್ ನಾಯಕತ್ವದ ಗುಜರಾತ್ ತಂಡ ಚೆನ್ನೈ ತಂಡವನ್ನು ಸೋಲಿಸಿತ್ತು.

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರಸಿಂಗ್ ಧೋನಿ (ನಾಯಕ/ವಿಕೆಟ್‌ಕೀಪರ್), ರುತುರಾಜ್ ಗಾಯಕ್ವಾಡ್, ಅಜಿಂಕ್ಯಾ ರಹಾನೆ, ಅಂಬಟಿ ರಾಯುಡು, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಶಿವಂ ದುಬೆ, ರವೀಂದ್ರ ಜಡೇಜಾ, ಡ್ವೇನ್ ಪ್ರಿಟೊರಿಯಸ್, ಮಿಚೆಲ್ ಸ್ಯಾಂಟನರ್, ಡೆವೋನ್ ಕಾನ್ವೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ರಾಜವರ್ಧನ್ ಹಂಗರೇಕರ್, ಸಿಸಾಂದಾ ಮಗಾಲ, ಅಜಯ್ ಮಂಡ್, ಮುಖೇಶ್ ಚೌಧರಿ, ಮಹೀಷ ತೀಕ್ಷಣ, ಪ್ರಶಾಂತ್ ಸೋಳಂಕಿ, ಸಿಮರಜೀತ್ ಸಿಂಗ್.

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಕೇನ್ ವಿಲಿಯಮ್ಸನ್, ಶುಭ್​ಮನ್ ಗಿಲ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಶಿವಂ ಮಾವಿ, ಶ್ರೀಕರ್ ಭರತ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಅಲ್ಜರಿ ಜೋಸೆಫ್, ಜೋಶುವಾ ಲಿಟಲ್, ಮೊಹಮ್ಮದ್ ಶಮಿ, ನೂರ್ ಅಹಮದ್, ರವಿಶ್ರೀನಿವಸಾನ್ ಸಾಯಿಕಿಶೋರ್, ಪ್ರದೀಪ್ ಸಂಗ್ವಾನ್, ಮೋಹಿತ್ ಶರ್ಮಾ, ಒಡಿಯನ್ ಸ್ಮಿತ್, ಜಯಂತ್ ಯಾದವ್, ಯಶ್ ದಯಾಳ್.

ಉದ್ಘಾಟನಾ ಸಮಾರಂಭ:

ಕೊರೊನಾ ಸೋಂಕಿನಿಂದಾಗಿ ಕಳೆದ 3 ಐಪಿಎಲ್ ಆವೃತ್ತಿಗಳು ವಿದೇಶದಲ್ಲಿ ನಡೆದಿತ್ತು. ಇದೀಗ ತವರಿಗೆ ಮರಳಿರುವ ಈ ಟೂರ್ನಿಗೆ ಇನ್ನಷ್ಟು ರಂಗು ತರಲು ಮುಂದಾಗಿರುವ ಬಿಸಿಸಿಐ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ. ಮಾಹಿತಿ ಪ್ರಕಾರ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್ ಪ್ರದರ್ಶನ ನೀಡಲಿದ್ದಾರೆ. ಹಾಗೆಯೇ ನಟಿ ತಮನ್ನಾ ಭಾಟಿಯಾ ಭಾಗವಹಿಸುವಿಕೆಯನ್ನು ಖಚಿತಪಡಿಸಲಾಗಿದೆ. ಅಲ್ಲದೆ ಈ ಈವೆಂಟ್‌ನಲ್ಲಿ ಪ್ರದರ್ಶನ ನೀಡಲು ರಶ್ಮಿಕಾ ಮಂದಣ್ಣರನ್ನು ಕೇಳಿಕೊಳ್ಳಲಾಗಿದೆ ಎಂಬ ಮಾಹಿತಿ ಇದೆ. ಹಾಗೆಯೇ ಬಾಲಿವುಡ್ ನಟಿ ಕತ್ರಿನಾ ಕೈಫ್ ಹಾಗೂ ನಟ ಟೈಗರ್ ಶ್ರಾಫ್ ಕೂಡ ಇರಲಿದ್ದಾರೆ ಎಂಬ ಮಾಹಿತಿ ಇದೆ. ಇಷ್ಟೆ ಅಲ್ಲದೆ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶೇಷ ಲೇಸರ್ ಶೋ ನಡೆಯುವ ಸಾಧ್ಯತೆಯೂ ಇದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ