AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಒಂದೇ ಪಂದ್ಯದಲ್ಲಿ ಮೂವರಿಗೆ ಬಿತ್ತು ಭಾರಿ ದಂಡ..!

IPL 2023: ಸೂರ್ಯಕುಮಾರ್ ಮಾತ್ರವಲ್ಲದೆ ತಂಡದ ಮತ್ತೊಬ್ಬ ಆಟಗಾರ ಹೃತಿಕ್ ಶೋಕೀನ್​ಗೂ ದಂಡ ವಿಧಿಸಲಾಗಿದೆ. ಇವರೊಂದಿಗೆ ಕೆಕೆಆರ್ ನಾಯಕ ನಿತೀಶ್ ರಾಣಾ ಕೂಡ ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಶಿಕ್ಷೆಗೆ ಗುರಿಯಾಗಿದ್ದಾರೆ.

IPL 2023: ಒಂದೇ ಪಂದ್ಯದಲ್ಲಿ ಮೂವರಿಗೆ ಬಿತ್ತು ಭಾರಿ ದಂಡ..!
ಪಂದ್ಯದ ನಡುವೆ ಮಾತಿನ ಚಕಮಕಿ
ಪೃಥ್ವಿಶಂಕರ
|

Updated on:Apr 17, 2023 | 3:26 PM

Share

ಸೂಪರ್ ಸಂಡೆ ಡಬಲ್ ಹೆಡರ್ ದಿನದಂದು ನಡೆದ ಮೊದಲ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್,  ಕೋಲ್ಕತ್ತಾ ನೈಟ್ ರೈಡರ್ಸ್ (Mumbai Indians and Kolkata Knight Riders) ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಟೂರ್ನಿಯಲ್ಲಿ ಎರಡನೇ ಗೆಲುವು ಸಾಧಿಸಿತ್ತು. ನಿಯಮಿತ ನಾಯಕ ರೋಹಿತ್ ಶರ್ಮಾ ಬದಲಿಗೆ ಮುಂಬೈ ಇಂಡಿಯನ್ಸ್ ತಂಡದ ಸಾರಥ್ಯ ವಹಿಸಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) ತಂಡಕ್ಕೆ ಜಯ ತಂದುಕೊಡುವುದಲ್ಲಿ ಶ್ರಮವಹಿಸಿದ್ದರು. ಆದರೆ ಪಂದ್ಯದ ನಡುವೆ ಸೂರ್ಯ ಮಾಡಿಕೊಂಡ ಎಡವಟ್ಟಿನಿಂದ ದಂಡದ ಹೊರೆ ಹೊರಬೇಕಾಗಿ ಬಂದಿದೆ. ಸೂರ್ಯಕುಮಾರ್ ಮಾತ್ರವಲ್ಲದೆ ತಂಡದ ಮತ್ತೊಬ್ಬ ಆಟಗಾರ ಹೃತಿಕ್ ಶೋಕೀನ್​ಗೂ (Hrithik Shokeen) ದಂಡ ವಿಧಿಸಲಾಗಿದೆ. ಇವರೊಂದಿಗೆ ಕೆಕೆಆರ್ ನಾಯಕ ನಿತೀಶ್ ರಾಣಾ ( Nitish Rana) ಕೂಡ ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಶಿಕ್ಷೆಗೆ ಗುರಿಯಾಗಿದ್ದಾರೆ. ಪ್ರತಿಯೊಬ್ಬ ಆಟಗಾರನೂ ವಿಭಿನ್ನ ಶಿಕ್ಷೆಗೆ ಗುರಿಯಾಗಿದ್ದು, ಮ್ಯಾಚ್ ರೆಫರಿ ಮುಂದೆ ತಮ್ಮ ತಪ್ಪನ್ನು ಒಪ್ಪಿಕೊಂಡ ನಂತರ ಅವರಿಗೆ ಈ ಶಿಕ್ಷೆಯನ್ನು ನೀಡಲಾಗಿದೆ.

ಸೂರ್ಯನಿಗೆ 12 ಲಕ್ಷ ರೂ ದಂಡ

ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ಸೂರ್ಯಕುಮಾರ್ ಯಾದವ್ ಅವರು ನಿಧಾನಗತಿಯ ಓವರ್ ರೇಟ್‌ನಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಹೀಗಾಗಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರೊಂದಿಗೆ ಸೂರ್ಯ ಐಪಿಎಲ್​ನಲ್ಲಿ ನಿಧಾನಗತಿಯ ಓವರ್​ನಿಂದಾಗಿ ದಂಡನೆಗೆ ಒಳಗಾದ ನಾಲ್ಕನೇ ನಾಯಕರಾಗಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್ ಮತ್ತು ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೂ ದಂಡ ವಿಧಿಸಲಾಗಿದೆ.

IPL 2023: ಈ ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನ್ನು ಹೊಡೆಸಿಕೊಂಡಿರುವ ಬೌಲರ್​ಗಳಿವರು

ರಾಣಾಗೆ ಪಂದ್ಯ ಶುಲ್ಕದಲ್ಲಿ ಶೇ.25ರಷ್ಟು ಕಡಿತ

ಪಂದ್ಯದ ವೇಳೆ ಮೈದಾನದಲ್ಲಿ ಅಸಭ್ಯ ಭಾಷೆ ಬಳಸಿದ ಕೆಕೆಆರ್ ನಾಯಕ ನಿತೀಶ್ ರಾಣಾ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂದ್ಯದ ರೆಫರಿ, ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.21 ರ ಅಡಿಯಲ್ಲಿ ತಪ್ಪಿತಸ್ಥರೆಂದು ರಾಣಾ ವಿರುದ್ಧ ಆರೋಪ ಹೊರಿಸಿದ್ದಾರೆ. ಹೀಗಾಗಿ ಅವರ ಪಂದ್ಯದ ಶುಲ್ಕವನ್ನು ಶಿಕ್ಷೆಯಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗಿದೆ.

ಹೃತಿಕ್ ಶೋಕೀನ್​ಗೆ ಭಾರೀ ದಂಡ

ನಿತೀಶ್ ರಾಣಾ ಅಲ್ಲದೆ ಮುಂಬೈ ಇಂಡಿಯನ್ಸ್ ಬೌಲರ್ ಹೃತಿಕ್ ಶೋಕೀನ್ ಕೂಡ ನಿಯಮ ಉಲ್ಲಂಘನೆಗಾಗಿ ದಂಡ ಕಟ್ಟಬೇಕಾಗಿದೆ. ಪಂದ್ಯ ಶುಲ್ಕದ ಶೇ 10ರಷ್ಟನ್ನು ದಂಡವಾಗಿ ಕಡಿತಗೊಳಿಸಲಾಗಿದೆ. ಐಪಿಎಲ್‌ನ ನೀತಿ ಸಂಹಿತೆಯ ಸೆಕ್ಷನ್ 2.5 ರ ಅಡಿಯಲ್ಲಿ ಅವರನ್ನು ಹಂತ 1 ರ ತಪ್ಪಿತಸ್ಥರೆಂದು ಪರಿಗಣಿಸಲಾಗಿದೆ.

ವಾಸ್ತವವಾಗಿ, ನಿತೀಶ್ ಮತ್ತು ಹೃತಿಕ್ ಇಬ್ಬರ ನಡುವೆ ಮೈದಾನದಲ್ಲಿ ವಾಗ್ವಾದ ನಡೆದಿತ್ತು, ನಂತರ ಸಾಕಷ್ಟು ಗಲಾಟೆ ನಡೆದಿತ್ತು. ಕೆಕೆಆರ್ ಇನ್ನಿಂಗ್ಸ್‌ನ 9 ನೇ ಓವರ್‌ನಲ್ಲಿ ನಿತೀಶ್ ರಾಣಾ ಅವರ ವಿಕೆಟ್ ಅನ್ನು ಹೃತಿಕ್ ಶೋಕೀನ್ ಪಡೆದಾಗ ಈ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ವೆಂಕಟೇಶ್ ಅಯ್ಯರ್ ಅವರ ಬಿರುಸಿನ ಶತಕದ ಹಿನ್ನಲೆಯಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್​ಗೆ 186 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಮುಂಬೈ ಕಿಶನ್ ಅವರ ಅರ್ಧಶತಕದ ನೆರವಿನಿಂದ 17.4 ಓವರ್​ಗಳಲ್ಲಿ ಗುರಿ ಸಾಧಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Mon, 17 April 23

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​