Virat Kohli: ಹಸ್ತಲಾಘವ ಮಾಡದ ವಿರಾಟ್ ಕೊಹ್ಲಿ-ಗಂಗೂಲಿ: ಮುಂದುವರೆದ ಮುನಿಸು..?

Virat Kohli - Sourav Ganguly Handshake Video: ವಿರಾಟ್ ಕೊಹ್ಲಿಯನ್ನು ಭಾರತ ಏಕದಿನ ನಾಯಕತ್ವದಿಂದ ವಜಾಗೊಳಿಸಲಾಗಿತ್ತು. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದದ್ದು ಸೌರವ್ ಗಂಗೂಲಿ. ಅಂದು ನಾಯಕತ್ವದಿಂದ ಕೆಳಗಿಳಿಸುವ ತಮ್ಮ ನಿರ್ಧಾರವನ್ನು ಕೊಹ್ಲಿಗೆ ತಿಳಿಸಲಾಗಿದೆ ಎಂದು ಸೌರವ್ ಗಂಗೂಲಿ ಹೇಳಿದ್ದರು.

Virat Kohli: ಹಸ್ತಲಾಘವ ಮಾಡದ ವಿರಾಟ್ ಕೊಹ್ಲಿ-ಗಂಗೂಲಿ: ಮುಂದುವರೆದ ಮುನಿಸು..?
RCB vs DC
Follow us
TV9 Web
| Updated By: ಝಾಹಿರ್ ಯೂಸುಫ್

Updated on:Apr 15, 2023 | 10:20 PM

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡ 23 ರನ್​ಗಳಿಂದ ಜಯ ಸಾಧಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್ (David Warner) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಫಾಫ್ ಡುಪ್ಲೆಸಿಸ್ 22 ರನ್​ಗಳಿಸಿ ನಿರ್ಗಮಿಸಿದ್ದರು. ಇದಾಗ್ಯೂ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ (Virat Kohli) 34 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅರ್ಧಶತಕ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಮ್ಯಾಕ್ಸ್​ವೆಲ್ 14 ಎಸೆತಗಳಲ್ಲಿ 24 ರನ್​ ಬಾರಿಸಿದರೆ, ಮಹಿಪಾಲ್ ಲೋಮ್ರರ್ 18 ಎಸೆತಗಳಲ್ಲಿ 26 ರನ್ ಕಲೆಹಾಕಿದರು. ಹಾಗೆಯೇ ಅಂತಿಮ ಹಂತದಲ್ಲಿ ಶಹಬಾಝ್ ಅಹ್ಮದ್ 12 ಎಸೆತಗಳಲ್ಲಿ 20 ರನ್​ ಸಿಡಿಸುವ ಮೂಲಕ ತಂಡದ ಮೊತ್ತವನ್ನು 6 ವಿಕೆಟ್ ನಷ್ಟಕ್ಕೆ 174 ಕ್ಕೆ ತಂದು ನಿಲ್ಲಿಸಿದರು.

175 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಪೃಥ್ವಿ ಶಾ ರನೌಟ್ ಆದರೆ, ಮಿಚೆಲ್ ಮಾರ್ಷ್​ ಪಾರ್ನೆಲ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ಯಶ್ ಧುಲ್ ಸಿರಾಜ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು. ಇದಾಗ್ಯೂ ಕ್ರೀಸ್ ಕಚ್ಚಿ ನಿಂತಿದ್ದ ಡೇವಿಡ್ ವಾರ್ನರ್ ವಿಕೆಟ್ ಆರ್​ಸಿಬಿ ಪಾಲಿಗೆ ಅತ್ಯಗತ್ಯವಾಗಿತ್ತು. ಈ ಹಂತದಲ್ಲಿ ಐಪಿಎಲ್​ನ ಮೊದಲ ಓವರ್ ಎಸೆಯಲು ಬಂದ ಕನ್ನಡಿಗ ವೈಶಾಕ್ ತಮ್ಮ 4ನೇ ಎಸೆತದಲ್ಲಿ ಡೇವಿಡ್ ವಾರ್ನರ್ ಅವರ ವಿಕೆಟ್ ಪಡೆದರು. ಆನಂತರದ ಓವರ್​ಗಳಲ್ಲಿ ಡೇಂಜರಸ್ ಅಕ್ಷರ್ ಪಟೇಲ್ ಹಾಗೂ ಲಲಿತ್ ಯಾದವ್ ವಿಕೆಟ್ ಕಬಳಿಸಿ ಮಿಂಚಿದರು.

ಇದನ್ನೂ ಓದಿ
Image
IPL 2023: RCB ಅಭಿಮಾನಿಗಳಿಗೆ ಖಡಕ್ ಸೂಚನೆ ನೀಡಿದ ಗಂಭೀರ್..!
Image
IPL 2023: ಅಂಪೈರ್ ತಪ್ಪಿನಿಂದ RCB ಗೆ 5 ರನ್​ ನಷ್ಟ: ಮೋಸದಿಂದ ಗೆದ್ರಾ LSG?
Image
Virat Kohli: ವಿರಾಟ್ ಕೊಹ್ಲಿ ಆಡಿದ್ದೇ ದಾಖಲೆಗಾಗಿ ಎಂದ ಸೈಮನ್ ಡೌಲ್
Image
Virat Kohli: ವಿರಾಟ್ ಕೊಹ್ಲಿಯ ಅಬ್ಬರಕ್ಕೆ ಕೀರನ್ ಪೊಲಾರ್ಡ್ ದಾಖಲೆ ಉಡೀಸ್

ಇದಾಗ್ಯೂ ಮನೀಶ್ ಪಾಂಡೆ 38 ಎಸೆತಗಳಲ್ಲಿ 50 ರನ್ ಬಾರಿಸಿ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದ್ದರು. ಈ ಹಂತದಲ್ಲಿ ಹಸರಂಗ ಪಾಂಡೆಯನ್ನು ಪೆವಿಲಿಯನ್​ಗಟ್ಟುವ ಮೂಲಕ ಆರ್​ಸಿಬಿಗೆ ಮಹತ್ವದ ವಿಕೆಟ್ ತಂದುಕೊಟ್ಟರು. ಅಂತಿಮವಾಗಿ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 151 ರನ್​ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 23 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇತ್ತ ಗೆಲುವಿನ ಬಳಿಕ ಉಭಯ ತಂಡಗಳ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳು ಕ್ರೀಡಾಸ್ಫೂರ್ತಿ ತೋರಲು ಹಸ್ತಲಾಘವ ಮಾಡಿದರು. ಆದರೆ, ಈ ವೇಳೆ ವಿರಾಟ್ ಕೊಹ್ಲಿ ಮತ್ತು ಗಂಗೂಲಿ ಕೈಕುಲುಕದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಂಗೂಲಿ ಇತರ ಆಟಗಾರರನ್ನು ಭೇಟಿ ಮಾಡಲು ಸರದಿಯಲ್ಲಿ ಮುಂದೆ ಸಾಗಿದಾಗ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರೊಂದಿಗೆ ಸಂಭಾಷಣೆಯಲ್ಲಿ ತೊಡಗಿದ್ದರು. ಈ ವೇಳೆ ಗಂಗೂಲಿ ವಿರಾಟ್ ಕೊಹ್ಲಿಯನ್ನು ಬಿಟ್ಟು ಮುಂದೆ ಸಾಗಿ ಇತರೆ ಆಟಗಾರರಿಗೆ ಶೇಕ್ ಹ್ಯಾಂಡ್ ನೀಡಿದರು.

ಇದೀಗ ಈ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕೆಲವು ಅಭಿಮಾನಿಗಳು ಕೊಹ್ಲಿ ಉದ್ದೇಶಪೂರ್ವಕವಾಗಿ ಗಂಗೂಲಿಯನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರತಿಕ್ರಿಯಿಸಿದರೆ, ಇತರರು ಕೊಹ್ಲಿ ಪಾಂಟಿಂಗ್ ಅವರೊಂದಿಗೆ ಸಂಭಾಷಣೆಯಲ್ಲಿ ತೊಡಗಿಸಿಕೊಂಡಿದ್ದರಿಂದ ಕಾಕತಾಳೀಯವಾಗಿ ಮಿಸ್ ಆಗಿದೆ ಎಂದಿದ್ದಾರೆ.

ಒಟ್ಟಿನಲ್ಲಿ  ಈ ವೈರಲ್ ವಿಡಿಯೋ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವಣ ಶೀತಲ ಸಮರ ಇನ್ನೂ ಕೂಡ ಮುಂದುವರೆದಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟುಕೊಂಡಿದೆ.

ಇದನ್ನೂ ಓದಿ: IPL 2023: ಡೆಲ್ಲಿಗೆ ಶಾಕ್ ನೀಡಿ ಮೊದಲ ಪಂದ್ಯದಲ್ಲೇ ದಾಖಲೆ ಬರೆದ ಕನ್ನಡಿಗ ವೈಶಾಕ್

ಕೊಹ್ಲಿ-ದಾದಾ ಮುನಿಸು:

2021 ರಲ್ಲಿ ವಿರಾಟ್ ಕೊಹ್ಲಿಯನ್ನು ಭಾರತ ಏಕದಿನ ನಾಯಕತ್ವದಿಂದ ವಜಾಗೊಳಿಸಲಾಗಿತ್ತು. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದದ್ದು ಸೌರವ್ ಗಂಗೂಲಿ. ಅಂದು ನಾಯಕತ್ವದಿಂದ ಕೆಳಗಿಳಿಸುವ ತಮ್ಮ ನಿರ್ಧಾರವನ್ನು ವಿರಾಟ್ ಕೊಹ್ಲಿಗೆ ತಿಳಿಸಲಾಗಿದೆ ಎಂದು ಸೌರವ್ ಗಂಗೂಲಿ ತಿಳಿಸಿದ್ದರು. ಆದರೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ತಂಡದ ನಾಯಕತ್ವದಿಂದ ತೆಗೆದುಹಾಕುವ ಬಗ್ಗೆ ಮುಂಚಿತವಾಗಿ ತಿಳಿಸದೆ ಬಿಸಿಸಿಐ ಸುಳ್ಳು ಹೇಳಿದೆ ಎಂದು ಆರೋಪಿಸಿದ್ದರು.

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಒಂದೂವರೆ ಗಂಟೆಗಳ ಮೊದಲು ಚೇತನ್ ಶರ್ಮಾ ಅವರು ದೂರವಾಣಿ ಮೂಲಕ ಈ ಕ್ರಮದ ಬಗ್ಗೆ ತಿಳಿಸಿದ್ದರು ಎಂದು ಕೊಹ್ಲಿ ಹೇಳಿದ್ದರು. ಈ ಹೇಳಿಕೆಯ ಬಳಿಕ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವಿಚಾರ ಬಹಿರಂಗವಾಗಿತ್ತು.

ಇದೀಗ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿರುವ ಗಂಗೂಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರ ನಡುವೆ ಆರ್​ಸಿಬಿ-ಡೆಲ್ಲಿ ನಡುವಣ ಪಂದ್ಯದ ವೇಳೆ ಇಬ್ಬರು ಮತ್ತೆ ಮುಖಾಮುಖಿಯಾಗಿದ್ದು, ಇದಾಗ್ಯೂ ಕೊಹ್ಲಿ-ದಾದಾ ಹಸ್ತಲಾಘವ ಮಾಡದಿರುವುದು ಹೊಸ ಚರ್ಚಗೆ ಕಾರಣವಾಗಿದೆ.

Published On - 9:58 pm, Sat, 15 April 23

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್