IPL 2024: ಪಂಜಾಬ್ ವಿರುದ್ಧ ತಂಡ ಬದಲಿಸುತ್ತಾ ಆರ್​ಸಿಬಿ?

IPL 2024: ಈ ಪಂದ್ಯಕ್ಕೆ ಎರಡೂ ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ನೋಡುವುದಾದರೆ.. ಗೆಲುವಿನ ಲಯದಲ್ಲಿರುವ ಪಂಜಾಬ್ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ತರುವ ಸಾಧ್ಯತೆಗಳಿಲ್ಲ. ಆದರೆ ಸೋಲಿನೊಂದಿಗೆ ಟೂರ್ನಿ ಆರಂಭಿಸಿರುವ ಆರ್​ಸಿಬಿ ತನ್ನ ಪ್ಲೇಯಿಂಗ್ 11 ಬದಲಾವಣೆ ಮಾಡುವ ನಿರೀಕ್ಷೆ ಇದೆ.

IPL 2024: ಪಂಜಾಬ್ ವಿರುದ್ಧ ತಂಡ ಬದಲಿಸುತ್ತಾ ಆರ್​ಸಿಬಿ?
ಆರ್​ಸಿಬಿ
Follow us
|

Updated on:Mar 24, 2024 | 10:30 PM

ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ರ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಳೆ ಅಂದರೆ ಮಾರ್ಚ್​ 25 ರಂದು ಪಂಜಾಬ್ ಕಿಂಗ್ಸ್ ತಂಡವನ್ನು (RCB vs PBKS) ಎದುರಿಸಲಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್‌ಸಿಬಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಮತ್ತೊಂದೆಡೆ, ಐಪಿಎಲ್ 2024 ರ ಎರಡನೇ ಪಂದ್ಯದಲ್ಲಿ ಪಂಜಾಬ್, ಡೆಲ್ಲಿ ಕ್ಯಾಪಿಟಲ್ಸ್ ಅನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಹೀಗಾಗಿ ಒಂದು ತಂಡ ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದರೆ, ಇನ್ನೊಂದು ತಂಡ ಸತತ ಎರಡನೇ ಗೆಲುವಿನ ಇರಾದೆಯಲ್ಲಿದೆ. ಇನ್ನು ಈ ಪಂದ್ಯಕ್ಕೆ ಎರಡೂ ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ನೋಡುವುದಾದರೆ.. ಗೆಲುವಿನ ಲಯದಲ್ಲಿರುವ ಪಂಜಾಬ್ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ತರುವ ಸಾಧ್ಯತೆಗಳಿಲ್ಲ. ಆದರೆ ಸೋಲಿನೊಂದಿಗೆ ಟೂರ್ನಿ ಆರಂಭಿಸಿರುವ ಆರ್​ಸಿಬಿ ತನ್ನ ಪ್ಲೇಯಿಂಗ್ 11 ಬದಲಾವಣೆ ಮಾಡುವ ನಿರೀಕ್ಷೆ ಇದೆ.

ಆರ್​ಸಿಬಿಯಲ್ಲಿ ಬದಲಾವಣೆ?

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಬ್ಯಾಟಿಂಗ್ ಸ್ನೇಹಿ ಪಿಚ್‌ ಆಗಿರುವುದರಿಂದ ಪಂಜಾಬ್ ಕಿಂಗ್ಸ್ ಮುಲ್ಲನ್‌ಪುರದಲ್ಲಿ ಡೆಲ್ಲಿ ವಿರುದ್ಧ ಆಡಿದ ಅದೇ ತಂಡವನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ. ಆದರೆ ಆರ್​ಸಿಬಿ ತಂಡದಲ್ಲಿ ಬದಲಾವಣೆಗಳಾಗಲಿದ್ದು, ಸಿಎಸ್​ಕೆ ವಿರುದ್ಧ ಯಾವುದೇ ವಿಕೆಟ್ ಪಡೆಯದೆ ದುಬಾರಿಯಾಗಿದ್ದ ವೆಸ್ಟ್ ಇಂಡೀಸ್ ವೇಗದ ಬೌಲರ್ ಅಲ್ಜಾರಿ ಜೋಸೆಫ್​ ಆಡುವ ಹನ್ನೊಂದರ ಬಳಗದಿಂದ ಹೊರಹೊಗುವ ಸಾಧ್ಯತೆಗಳಿವೆ. ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಜೋಸೆಫ್ 3.4 ಓವರ್‌ಗಳಲ್ಲಿ 38 ರನ್ ನೀಡಿದರು. ಹೀಗಾಗಿ ಜೋಸೆಫ್ ಬದಲಾಗಿ ಲಾಕಿ ಫರ್ಗುಸನ್ ಮತ್ತು ರೀಸ್ ಟೋಪ್ಲಿ ಅವರಲ್ಲಿ ಒಬ್ಬರಿಗೆ ಅವಕಾಶ ಸಿಗುವುದು ಖಚಿತವಾಗಿದೆ.

IPL 2024: ಬೆಂಗಳೂರಿನಲ್ಲಿ ಆರ್​ಸಿಬಿ- ಪಂಜಾಬ್ ಫೈಟ್; ಉಭಯರಲ್ಲಿ ಯಾರದ್ದು ಮೇಲುಗೈ?

ಉಭಯ ಸಂಭಾವ್ಯ ತಂಡಗಳು

ಆರ್​ಸಿಬಿ ಸಂಭಾವ್ಯ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.

ಇಂಪ್ಯಾಕ್ಟ್ ಪ್ಲೇಯರ್: ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಮನೋಜ್ ಭಾಂಡಗೆ, ಸುಯ್ಯಶ್ ಪ್ರಭುದೇಸಾಯಿ, ಯಶ್ ದಯಾಳ್.

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್.

ಇಂಪ್ಯಾಕ್ಟ್ ಪ್ಲೇಯರ್: ರಿಲೆ ರೊಸೊವ್, ಪ್ರಭಾಸಿಮ್ರಾನ್ ಸಿಂಗ್, ವಿದ್ವತ್ ಕಾವೇರಪ್ಪ, ಸಿಕಂದರ್ ರಜಾ, ಕ್ರಿಸ್ ವೋಕ್ಸ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Sun, 24 March 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ