AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ‘ಆರ್​ಸಿಬಿ ಗೆಲ್ಲಬೇಕೆಂದರೆ..’; ಕಿಂಗ್ ಕೊಹ್ಲಿಗೆ ವಿಶೇಷ ಸಲಹೆ ನೀಡಿದ ಎಬಿ ಡಿವಿಲಿಯರ್ಸ್

IPL 2024: ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ತಂಡದ ಉತ್ತಮ ಪ್ರದರ್ಶನಕ್ಕೆ ಕೊಹ್ಲಿ ಬಹಳ ಮುಖ್ಯ ಎಂದು ಬಣ್ಣಿಸಿರುವ ಅವರು ಆರ್‌ಸಿಬಿ ಟೂರ್ನಿಯಲ್ಲಿ ಉಳಿಯಬೇಕಾದರೆ ಕೊಹ್ಲಿ ಮಧ್ಯಮ ಓವರ್‌ಗಳಲ್ಲಿ ಬ್ಯಾಟ್ ಬೀಸುವುದು ಬಹಳ ಮುಖ್ಯ ಎಂದಿದ್ದಾರೆ.

IPL 2024: ‘ಆರ್​ಸಿಬಿ ಗೆಲ್ಲಬೇಕೆಂದರೆ..’; ಕಿಂಗ್ ಕೊಹ್ಲಿಗೆ ವಿಶೇಷ ಸಲಹೆ ನೀಡಿದ ಎಬಿ ಡಿವಿಲಿಯರ್ಸ್
ಎಬಿ ಡಿವಿಲಿಯರ್ಸ್​, ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:Apr 04, 2024 | 10:11 PM

Share

ಐಪಿಎಲ್​ನ (IPL) ಪ್ರತಿ ಸೀಸನ್ ಆರಂಭವಾದಾಗಲೂ ಎಲ್ಲಾ ಕ್ರಿಕೆಟ್ ಅಭಿಮಾನಿಗಳಿಂದ ಕೇಳಿಬರುವ ಕೂಗೆಂದರೆ ಆರ್​ಸಿಬಿ (RCB) ಈ ಬಾರಿಯಾದರೂ ಕಪ್ ಗೆಲ್ಲಲಿ ಎಂಬುದು. ಆದರೆ ಬರೋಬ್ಬರಿ 16 ಆವೃತ್ತಿಗಳು ಮುಗಿದರೂ ಕೋಟ್ಯಾಂತರ ಅಭಿಮಾನಿಗಳ ಕನಸು ಇನ್ನು ನನಸಾಗಿಲ್ಲ. ಈ ಬಾರಿಯಾದರೂ ಆರ್​ಸಿಬಿ ಕಪ್ ಗೆಲ್ಲಲಿ ಎಂಬುದು ಎಲ್ಲರ ಆಶಯವಾಗಿದೆ. ಅದಾಗ್ಯೂ ಆರ್​​ಸಿಬಿ ಪ್ರಸ್ತುತ ಆಡಿರುವ 4 ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಸೋತಿದೆ. ಇದು ತಂಡವನ್ನು ಪ್ಲೇ ಆಫ್ ಹಂತಕ್ಕೆ ತಲುಪಲು ಹಿನ್ನಡೆಯನ್ನುಂಟು ಮಾಡಿದೆ. ಈ ನಡುವೆ ಆರ್​ಸಿಬಿಗೆ ಗೆಲುವಿನ ಮಂತ್ರವನ್ನು ವಿವರಿಸಿರುವ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ (AB de Villiers) ತಂಡದ ಆಧಾರಸ್ತಂಭ ವಿರಾಟ್ ಕೊಹ್ಲಿಗೆ (Virat Kohli) ವಿಶೇಷ ಸಲಹೆಯೊಂದನ್ನು ನೀಡಿದ್ದಾರೆ.

ಕೊಹ್ಲಿ ವಿಕೆಟ್ ಮುಖ್ಯ

ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ತಂಡದ ಉತ್ತಮ ಪ್ರದರ್ಶನಕ್ಕೆ ಕೊಹ್ಲಿ ಬಹಳ ಮುಖ್ಯ ಎಂದು ಬಣ್ಣಿಸಿರುವ ಅವರು ಆರ್‌ಸಿಬಿ ಟೂರ್ನಿಯಲ್ಲಿ ಉಳಿಯಬೇಕಾದರೆ ಕೊಹ್ಲಿ ಮಧ್ಯಮ ಓವರ್‌ಗಳಲ್ಲಿ ಬ್ಯಾಟ್ ಬೀಸುವುದು ಬಹಳ ಮುಖ್ಯ ಎಂದಿದ್ದಾರೆ. ಆರಂಭಿಕರಾಗಿ ಕಣಕ್ಕಿಳಿಯುವ ಕೊಹ್ಲಿ ಉತ್ತಮ ಆರಂಭ ಪಡೆದ ಬಳಿಕ ಪವರ್ ಪ್ಲೇಯಲ್ಲಿ ವಿಕೆಟ್ ಒಪ್ಪಿಸಬಾರದು. ಆದರೆ ಮತ್ತೊಬ್ಬ ಆರಂಭಿಕನಾಗಿ ಕಣಕ್ಕಿಳಿಯುವ ನಾಯಕ ಫಾಫ್ ಡುಪ್ಲೆಸಿಸ್ ಮಾತ್ರ ಆಕ್ರಮಣಕಾರಿ ಆಟಕ್ಕೆ ಮುಂದಾಗಬೇಕು ಎಂದಿದ್ದಾರೆ.

ಆದರೆ ಕೊಹ್ಲಿಗೆ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕು ಎಂದಿರುವ ಡಿವಿಲಿಯರ್ಸ್, ಕೊಹ್ಲಿ 6 ರಿಂದ 15 ಓವರ್‌ಗಳ ನಡುವೆ ಕ್ರೀಸ್‌ನಲ್ಲಿ ಇರಬೇಕು ಎಂದು ನಾನು ಬಯಸುತ್ತೇನೆ. ಕೊಹ್ಲಿ ಈ ರೀತಿ ಆಡುವುದನ್ನು ನೋಡಲು ನಾನು ಬಯಸುತ್ತೇನೆ. ಆಗ ಮಾತ್ರ ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ತನ್ನ ಸಂಪೂರ್ಣ ಶಕ್ತಿ ಪ್ರದರ್ಶಿಸಲು ಸಾಧ್ಯವಾಗುತ್ತದೆ. ಪ್ರಸ್ತುತ ಟೂರ್ನಿಯಲ್ಲಿ ಆರ್‌ಸಿಬಿ ಮಿಶ್ರ ಆರಂಭ ಪಡೆದಿದೆ. ಆದರೆ ತಂಡವು ಆವೇಗವನ್ನು ಮರಳಿ ಪಡೆಯಲು ಮತ್ತು ಪಾಯಿಂಟ್ ಪಟ್ಟಿಯಲ್ಲಿ ಮೇಲೆ ಬರಲು, ಎರಡು ದೊಡ್ಡ ಗೆಲುವುಗಳನ್ನು ದಾಖಲಿಸುವುದು ಅವಶ್ಯಕ.

ಈ ಸೀಸನ್​ನಲ್ಲಿ ಆರ್‌ಸಿಬಿಯ ಆರಂಭವು ಉತ್ತಮವಾಗಿಲ್ಲ. ಆದರೆ ಅಷ್ಟು ಕೆಟ್ಟದ್ದಾಗಿಯೂ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ತಂಡಕ್ಕೆ ಎರಡು ಉತ್ತಮ ಗೆಲುವಿನ ಅಗತ್ಯವಿದೆ. ತವರು ನೆಲ ಚಿನ್ನಸ್ವಾಮಿಗೆ ವಾಪಸಾಗುವ ಮುನ್ನ ತಂಡ ಎದುರಾಳಿ ತಂಡದ ತವರು ಮೈದಾನದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ ಎಂದಿದ್ದಾರೆ.

ಡಿವಿಲಿಯರ್ಸ್ ಮಾತಿನಲ್ಲಿದೆ ಸತ್ಯಾಂಶ

ವಾಸ್ತವವಾಗಿ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ತನ್ನ ಬಲಹೀನ ಬೌಲಿಂಗ್​ನಿಂದಾಗಿ ಟ್ರೋಲ್‌ಗೆ ಒಳಗಾಗುತ್ತಿತ್ತು. ಆದರೆ ಈ ಸೀಸನ್​ನಲ್ಲಿ ತಂಡದ ಬ್ಯಾಟಿಂಗ್ ಕೂಡ ಕಳಪೆ ಪ್ರದರ್ಶನ ನೀಡುತ್ತಿದೆ. ಅದರಲ್ಲೂ ಮಧ್ಯಮ ಕ್ರಮಾಂಕವು ಇಲ್ಲಿಯವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಕೊಹ್ಲಿ ಬಿಟ್ಟರೆ ಇದುವರೆಗೆ ಯಾವುದೇ ಬ್ಯಾಟ್ಸ್​ಮನ್ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಆರಂಭಿಕರು ಔಟಾಗುತ್ತಿದ್ದಂತೆಯೇ ವಿಕೆಟ್‌ಗಳ ಸುರಿಮಳೆಯಾಗುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ತಂಡ 4 ಓವರ್‌ಗಳಲ್ಲಿ 40 ರನ್ ಗಳಿಸಿತ್ತು. ಆದರೆ ಐದನೇ ಓವರ್​ನಲ್ಲಿ ಕೊಹ್ಲಿ ಔಟಾದ ಕೂಡಲೇ ಬ್ಯಾಟರ್​​ಗಳ ಪೆವಿಲಿಯನ್ ಪರೇಡ್ ಶುರುವಾಯಿತು. 8ನೇ ಓವರ್‌ನ ವೇಳೆಗೆ ಆರ್​ಸಿಬಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಪ್ರತಿ ಪಂದ್ಯದ ಪರಿಸ್ಥಿಯೂ ಇದಕ್ಕಿಂತ ಭಿನ್ನವಾಗಿಲ್ಲ.

ಕೊಹ್ಲಿ ಬಿಟ್ಟರೆ ಉಳಿದವರು ಫೇಲ್

ಕೊಹ್ಲಿಯನ್ನು ಹೊರತುಪಡಿಸಿ ಆರ್​ಸಿಬಿಯ ಅಗ್ರಕ್ರಮಾಂಕ ಕಳಪೆ ಫಾರ್ಮ್​ನಿಂದ ಬಳಲುತ್ತಿದೆ. ನಾಯಕ ಫಾಫ್ ಡುಪ್ಲೆಸಿಸ್, ರಜತ್ ಪಾಟಿದಾರ್, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಕ್ಯಾಮರೂನ್ ಗ್ರೀನ್ ಬ್ಯಾಟ್ ಮೌನಕ್ಕೆ ಶರಣಾಗಿದೆ. ಒಂದೆಡೆ ಕೊಹ್ಲಿ ಒಟ್ಟು ನಾಲ್ಕು ಪಂದ್ಯಗಳಲ್ಲಿ 203 ರನ್ ಗಳಿಸಿ ಆರೆಂಜ್ ಕ್ಯಾಪ್ ಧರಿಸಿ ಕುಳಿತಿದ್ದರೆ, ಮತ್ತೊಂದೆಡೆ ಆರ್‌ಸಿಬಿಯ ಎರಡನೇ ಆರಂಭಿಕ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ 4 ಪಂದ್ಯಗಳಲ್ಲಿ ಕೇವಲ 65 ರನ್ ಗಳಿಸಲು ಶಕ್ತರಾಗಿದ್ದಾರೆ. ಇವರಲ್ಲದೆ ರಜತ್ ಪಾಟಿದಾರ್ (50), ಅನುಜ್ ರಾವತ್ (73), ಗ್ಲೆನ್ ಮ್ಯಾಕ್ಸ್ ವೆಲ್ (31) ಮತ್ತು ಕ್ಯಾಮರೂನ್ ಗ್ರೀನ್ (63) ಕೂಡ ವಿಫಲರಾಗಿದ್ದಾರೆ.

ಆರ್​ಸಿಬಿಯ ಪ್ರಸ್ತುತ ಸ್ಥಿತಿ

ಐಪಿಎಲ್‌ನ ಆರಂಭಿಕ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಸೋಲಿನೊಂದಿಗೆ ಶುಭಾರಂಭ ಮಾಡಿತ್ತು. ಅಂದಿನಿಂದ ತಂಡವು 4 ಪಂದ್ಯಗಳಲ್ಲಿ 3 ರಲ್ಲಿ ಸೋತಿದ್ದು, 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿದೆ. ಇದಲ್ಲದೆ, ತಂಡದ ರನ್ ರೇಟ್ ಕೂಡ -0.876 ಆಗಿರುವುದರಿಂದ ಪಂದ್ಯಾವಳಿಯಲ್ಲಿ ಉಳಿಯಲು ಪರಿಸ್ಥಿತಿ ಹೆಚ್ಚು ಕಷ್ಟಕರವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 pm, Thu, 4 April 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!