AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಆಟಗಾರರ ಹರಾಜಿಗೆ ಡೇಟ್ ಫಿಕ್ಸ್

IPL 2024: ಮುಂಬರುವ ಐಪಿಎಲ್​ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗಳಿಗೆ 100 ಕೋಟಿಯ ಪರ್ಸ್ ನೀಡಲಾಗುತ್ತಿದೆ. ಕಳೆದ ಬಾರಿಯ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು 95 ಕೋಟಿಯೊಂದಿಗೆ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿತ್ತು. ಈ ಬಾರಿ 5 ಕೋಟಿ ರೂ. ಅನ್ನು ಹೆಚ್ಚಿಸಲಾಗಿದ್ದು, ಅದರಂತೆ 100 ಕೋಟಿಯೊಳಗೆ ಆಟಗಾರರನ್ನು ಖರೀದಿಸಬಹುದು.

IPL 2024: ಐಪಿಎಲ್ ಆಟಗಾರರ ಹರಾಜಿಗೆ ಡೇಟ್ ಫಿಕ್ಸ್
IPL 2024
TV9 Web
| Edited By: |

Updated on: Oct 26, 2023 | 10:01 PM

Share

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 17 ಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಐಪಿಎಲ್ ಹರಾಜಿಗಾಗಿ ಡೇಟ್ ಫಿಕ್ಸ್​ ಮಾಡಲಾಗಿದೆ. ಅದರಂತೆ ಡಿಸೆಂಬರ್ 19 ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ 10 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಲಾಗಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕು. ಇದಕ್ಕಾಗಿ ನವೆಂಬರ್ 15 ರವರೆಗೆ ಕಾಲಾವಕಾಶ ನೀಡಲಾಗಿದೆ.

100 ಕೋಟಿ ಪರ್ಸ್​:

ಮುಂಬರುವ ಐಪಿಎಲ್​ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗಳಿಗೆ 100 ಕೋಟಿಯ ಪರ್ಸ್ ನೀಡಲಾಗುತ್ತಿದೆ. ಕಳೆದ ಬಾರಿಯ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು 95 ಕೋಟಿಯೊಂದಿಗೆ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿತ್ತು. ಈ ಬಾರಿ 5 ಕೋಟಿ ರೂ. ಅನ್ನು ಹೆಚ್ಚಿಸಲಾಗಿದ್ದು, ಅದರಂತೆ 100 ಕೋಟಿಯೊಳಗೆ ಆಟಗಾರರನ್ನು ಖರೀದಿಸಬಹುದು.

ಮಿನಿ ಹರಾಜು:

ಐಪಿಎಲ್ 2023 ರಲ್ಲಿ ಮೆಗಾ ಹರಾಜು ನಡೆದಿದ್ದರಿಂದ ಈ ಬಾರಿ ಮಿನಿ ಹರಾಜು ನಡೆಯಲಿದೆ. ಹೀಗಾಗಿ ಈ ಬಾರಿ ಫ್ರಾಂಚೈಸಿಗಳಿಗೆ ಬೇಕಾದಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು. ಅಲ್ಲದೆ ಬಿಡುಗಡೆ ಮಾಡಲಾದ ಆಟಗಾರರ ಸ್ಥಾನಗಳಿಗಾಗಿ ಬಿಡ್ಡಿಂಗ್ ನಡೆಸಬಹುದು. ಹೀಗಾಗಿಯೇ ಈ ಬಾರಿಯ ಹರಾಜು ಪ್ರಕ್ರಿಯೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.

ಸ್ಟಾರ್ ಆಟಗಾರರ ಎಂಟ್ರಿ:

ಐಪಿಎಲ್ 2024 ರ ಹರಾಜಿನಲ್ಲಿ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದ ಪ್ಯಾಟ್ ಕಮಿನ್ಸ್, ಕ್ರಿಸ್ ವೋಕ್ಸ್, ಟ್ರಾವಿಸ್ ಹೆಡ್, ಅಲೆಕ್ಸ್ ಹೇಲ್ಸ್, ಸ್ಯಾಮ್ ಬಿಲ್ಲಿಂಗ್ಸ್​, ಜೆರಾಲ್ಡ್ ಕೊಯಟ್ಝಿ ಮತ್ತು ಮಿಚೆಲ್ ಸ್ಟಾರ್ಕ್​ ಮುಂಬರುವ ಐಪಿಎಲ್​ ಬಿಡ್ಡಿಂಗ್​ನಲ್ಲಿ ಕಾಣಿಸಿಕೊಳ್ಳುವುದನ್ನು ಖಚಿತಪಡಿಸಿದ್ದಾರೆ.

10 ತಂಡಗಳು:

ಮುಂಬರುವ ಐಪಿಎಲ್​ನಲ್ಲೂ 10 ತಂಡಗಳೇ ಮುಂದುವರೆಯಲಿದೆ. ಈ ಹಿಂದೆ ತಂಡಗಳ ಸಂಖ್ಯೆಯನ್ನು 12 ಕ್ಕೇರಿಸುವ ಪ್ರಸ್ತಾವನೆಗಳು ಬಂದಿದ್ದರೂ, ಸದ್ಯದ ಮಟ್ಟಿಗೆ ಬಿಸಿಸಿಐ ಹೆಚ್ಚುವರಿ ಟೀಮ್​ಗಳನ್ನು ಕಣಕ್ಕಿಳಿಸುವ ಇರಾದೆಯಲ್ಲಿಲ್ಲ. ಹೀಗಾಗಿ ಐಪಿಎಲ್​ ಸೀಸನ್ 17 ರಲ್ಲೂ 10 ತಂಡಗಳೇ ಕಣಕ್ಕಿಳಿಯಲಿದೆ.

ಇದನ್ನೂ ಓದಿ: IPL 2024: ಮತ್ತೆ ಬದಲಾಗಲಿದೆಯಾ RCB ತಂಡದ ನಾಯಕತ್ವ..?

ವುಮೆನ್ಸ್ ಪ್ರೀಮಿಯರ್ ಲೀಗ್​:

ಈ ಬಾರಿ ಕೂಡ ವುಮೆಮ್ಸ್​ ಪ್ರೀಮಿಯರ್ ಲೀಗ್ ನಡೆಯಲಿದ್ದು, ಈ ಲೀಗ್​ನ ಆಟಗಾರ್ತಿಯರ ಹರಾಜು ಪ್ರಕ್ರಿಯೆ ಡಿಸೆಂಬರ್ 9 ರಂದು ನಡೆಸಲು ಯೋಜನೆ ರೂಪಿಸಲಾಗಿದೆ. ಇದಾಗ್ಯೂ ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಯ ಸ್ಥಳವನ್ನು ಅಂತಿಮಗೊಳಿಸಲಾಗಿಲ್ಲ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ