ಐಪಿಎಲ್ 17 ನೇ (IPL 2024) ಸೀಸನ್ ಇಂದಿನಿಂದ ಪ್ರಾರಂಭವಾಗಿದೆ. ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Chennai Super Kings vs Royal Challengers Bengaluru) ನಡುವೆ ನಡೆಯುತ್ತಿದ್ದು, ಈ ಪಂದ್ಯಕ್ಕೆ ಎಂ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸುತ್ತಿದೆ. ಸಿಎಸ್‌ಕೆ ದಾಖಲೆಯ ಒಂಬತ್ತನೇ ಬಾರಿಗೆ ಐಪಿಎಲ್‌ನ ಆರಂಭಿಕ ಪಂದ್ಯವನ್ನು ಆಡುತ್ತಿದೆ. ಅದೇ ಸಮಯದಲ್ಲಿ, ಆರ್‌ಸಿಬಿ ಐದನೇ ಬಾರಿಗೆ ಸೀಸನ್ನ ಮೊದಲ ಪಂದ್ಯವನ್ನು ಆಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಯಾವಾಗಲೂ ಆರ್‌ಸಿಬಿ ವಿರುದ್ಧ ತವರಿನಲ್ಲಿ ಪ್ರಾಬಲ್ಯ ಹೊಂದಿದೆ. ಉಭಯ ತಂಡಗಳ ನಡುವೆ ನಡೆದ ಪಂದ್ಯಗಳ ಅಂಕಿಅಂಶಗಳೇ ಇದಕ್ಕೆ ಸಾಕ್ಷಿ. ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವೆ ಇದುವರೆಗೆ ಎಂಟು ಪಂದ್ಯಗಳು ನಡೆದಿವೆ. ಇದರಲ್ಲಿ ಹಾಲಿ ಚಾಂಪಿಯನ್ ಏಳು ಪಂದ್ಯಗಳನ್ನು ಗೆದ್ದಿದ್ದರೆ, ಆರ್‌ಸಿಬಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (Faf Du Plessis) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದೆ.
ಈ ಐಪಿಎಲ್ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಸ ನಾಯಕನೊಂದಿಗೆ ಮೈದಾನಕ್ಕಿಳಿದಿದೆ. ಈ ಸೀಸನ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎಂಎಸ್ ಧೋನಿ ಬದಲಿಗೆ ರುತುರಾಜ್ ಗಾಯಕ್ವಾಡ್ ಅವರನ್ನು ತಂಡದ ನಾಯಕನನ್ನಾಗಿ ಮಾಡಿತ್ತು. ರುತುರಾಜ್ ಗಾಯಕ್ವಾಡ್ ಈ ಹಿಂದೆಯೂ ಟೀಂ ಇಂಡಿಯಾದ ನಾಯಕರಾಗಿದ್ದರು. ರುತುರಾಜ್ ಗಾಯಕ್ವಾಡ್ ಏಷ್ಯನ್ ಗೇಮ್ಸ್ 2023 ರಲ್ಲಿ ಟೀಮ್ ಇಂಡಿಯಾದ ನಾಯಕತ್ವವಹಿಸಿಕೊಂಡು ತಂಡವನ್ನು ಚಿನ್ನದ ಪದಕಕ್ಕೆ ಮುನ್ನಡೆಸಿದ್ದರು.
🚨 Toss Update 🚨@RCBTweets won the toss and will bat first against @ChennaiIPL 🙌
Live 💻📱 https://t.co/4j6FaLF15Y#TATAIPL | #CSKvRCB pic.twitter.com/jQ9xljX0Px
— IndianPremierLeague (@IPL) March 22, 2024
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಾಹರ್, ಮಹೇಶ್ ತೀಕ್ಷಣ, ಮುಸ್ತಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ.
CSK vs RCB Live Score, IPL 2024: ಆರಂಭಿಕರಾಗಿ ಡುಪ್ಲೆಸಿಸ್- ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅನುಜ್ ರಾವತ್, ಕರ್ಣ್ ಶರ್ಮಾ, ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:42 pm, Fri, 22 March 24