AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್ ಸಿಡಿಲಬ್ಬರದ ಬ್ಯಾಟಿಂಗ್ ನೋಡಿ ಕಣ್ಣೀರಿಟ್ಟ ಚೆನ್ನೈನ ಪುಟ್ಟ ಫ್ಯಾನ್; ವಿಡಿಯೋ ನೋಡಿ

IPL 2024: ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಮೊದಲ ವಿಕೆಟ್​ಗೆ 210 ರನ್​ಗಳ ದಾಖಲೆಯ ಜೊತೆಯಾಟ ನಡೆಸಿದರು. ಈ ಇಬ್ಬರು ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ ಚೆನ್ನೈ ಪಾಳಯದಲ್ಲಿ ನಡುಕ ಹುಟ್ಟಿಸಿದಲ್ಲದೆ, ಮೈದಾನದಲ್ಲಿ ನೆರೆದಿದ್ದ ಚೆನ್ನೈನ ಪುಟ್ಟ ಅಭಿಮಾನಿ ಕಣ್ಣೀರಿಡುವಂತೆ ಮಾಡಿದರು.

IPL 2024: ಗುಜರಾತ್ ಸಿಡಿಲಬ್ಬರದ ಬ್ಯಾಟಿಂಗ್ ನೋಡಿ ಕಣ್ಣೀರಿಟ್ಟ ಚೆನ್ನೈನ ಪುಟ್ಟ ಫ್ಯಾನ್; ವಿಡಿಯೋ ನೋಡಿ
ಕಣ್ಣೀರಿಟ್ಟ ಚೆನ್ನೈನ ಪುಟ್ಟ ಫ್ಯಾನ್
ಪೃಥ್ವಿಶಂಕರ
|

Updated on:May 10, 2024 | 10:05 PM

Share

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್​ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ (Gujarat Titans vs Chennai Super Kings) ನಡುವಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಬರೋಬ್ಬರಿ 231 ರನ್ ಕಲೆಹಾಕಿದೆ. ತಂಡದ ಪರ ಆರಂಭಿಕರಾದ ನಾಯಕ ಶುಭ್​ಮನ್ ಗಿಲ್ (Shubman Gill) ಹಾಗೂ ಸಾಯಿ ಸುದರ್ಶನ್ (Sai Sudharsan) ತಲಾ ಒಂದೊಂದು ಶತಕ ಸಿಡಿಸಿ ತಂಡವನ್ನು ಈ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಈ ಇಬ್ಬರು ಮೊದಲ ವಿಕೆಟ್​ಗೆ 210 ರನ್​ಗಳ ದಾಖಲೆಯ ಜೊತೆಯಾಟ ನಡೆಸಿದರು. ಈ ಇಬ್ಬರು ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ ಚೆನ್ನೈ ಪಾಳಯದಲ್ಲಿ ನಡುಕ ಹುಟ್ಟಿಸಿದಲ್ಲದೆ, ಮೈದಾನದಲ್ಲಿ ನೆರೆದಿದ್ದ ಚೆನ್ನೈನ ಪುಟ್ಟ ಅಭಿಮಾನಿ ಕಣ್ಣೀರಿಡುವಂತೆ ಮಾಡಿದರು.

ಸ್ಫೋಟಕ ಆರಂಭ

ಮೇಲೆ ಹೇಳಿದಂತೆ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್​ ತನ್ನ ಆರಂಭಿಕ ಜೋಡಿಯಲ್ಲಿ ಬದಲಾವಣೆ ಮಾಡಿತ್ತು. ಅದರಂತೆ ನಾಯಕ ಶುಭ್​ಮನ್ ಗಿಲ್ ಜೊತೆ ಈ ಬಾರಿ ಸಾಯಿ ಸುದರ್ಶನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಇಡೀ ಆವೃತ್ತಿಯಲ್ಲಿ ಗುಜರಾತ್​ ತಂಡಕ್ಕೆ ಒಮ್ಮೆಯೂ ಉತ್ತಮ ಆರಂಭ ದೊರಕಿರಲಿಲ್ಲ. ಆದರೆ ಈಓ ಬಾರಿ ಮೊದಲ ಜೊತೆಯಾಟದಲ್ಲೇ ಗುಜರಾತ್ ಪರ ದಾಖಲೆಯ ಜೊತೆಯಾಟ ನಡೆಸಿದರು. ಈ ಇಬ್ಬರು ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದರು. ಹೀಗಾಗಿ ಗುಜರಾತ್ ತಂಡಕ್ಕೆ ಸ್ಫೋಟಕ ಆರಂಭ ಸಿಕ್ಕಿತು.

ಕಣ್ಣೀರಿಟ್ಟ ಪುಟ್ಟ ಅಭಿಮಾನಿ

ಈ ಆರಂಭಿಕ ಜೋಡಿ ಪವರ್ ಪ್ಲೇ ಅಂತ್ಯಕ್ಕೆ 58 ರನ್ ಕಲೆಹಾಕಿತ್ತು. ಆದರೆ ಇಲ್ಲಿಂದ ಗೇರ್ ಬದಲಿಸಿದ ಈ ಜೋಡಿ ಪ್ರತಿ ಓವರ್​ನಲ್ಲೂ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆಯಿತು. ಹೀಗಾಗಿ ತಂಡ 10 ಓವರ್​ಗಳಲ್ಲಿ ಶತಕದ ಗಡಿ ದಾಟಿತು. ನಂತರ 4 ಓವರ್​ಗಳಲ್ಲಿ ತಂಡ ಬರೋಬ್ಬರಿ 72 ರನ್ ಕಲೆಹಾಕಿತು. ಅದಾಗ್ಯೂ ಸಿಎಸ್​ಕೆ ತಂಡಕ್ಕೆ ಇಲ್ಲಿಯವರೆಗೆ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ. ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಆಟಕ್ಕೆ ಸಿಎಸ್​ಕೆ ಬೌಲರ್​ಗಳ ಬಳಿ ಎದುರುತ್ತರವೇ ಇರಲಿಲ್ಲ. ಹೀಗಾಗಿ ಮೈದಾನದಲ್ಲಿ ನೆರೆದಿದ್ದ ಸಿಎಸ್​ಕೆ ಅಭಿಮಾನಿಗಳ ಮೊಗದಲ್ಲಿ ನಿರವ ಮೌನವಿತ್ತು. ಈ ನಡುವೆ ತನ್ನ ತಂದೆಯೊಂದಿಗೆ ಪಂದ್ಯ ವೀಕ್ಷಿಸಲು ಬಂದಿದ್ದ ಸಿಎಸ್​ಕೆಯ ಪುಟ್ಟ ಅಭಿಮಾನಿಯೊಬ್ಬ ತಂದೆ ಬಳಿ ತನ್ನ ಅಸಹಾಯಕತೆಯನ್ನು ತೊಡಿಕೊಳ್ಳುತ್ತ ಕಣ್ಣೀರಿಡ ತೊಡಗಿದ. ಅದರ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ದಾಖಲೆಯ ಜೊತೆಯಾಟ

ಅಂತಿಮವಾಗಿ ಸಾಯಿ ಸುದರ್ಶನ್ ಹಾಗೂ ಶುಭ್​ಮನ್ ಗಿಲ್ ಜೋಡಿ 210 ರನ್​​ಗಳಿಗೆ ಮುರಿದುಬಿತ್ತು. ನಾಯಕ ಶುಭ್​ಮನ್ ಗಿಲ್ ತನ್ನ ಇನ್ನಿಂಗ್ಸ್​ನಲ್ಲಿ 55 ಎಸೆತಗಳಲ್ಲಿ 9 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 104 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ ಮತ್ತೊಬ್ಬ ಆರಂಭಿಕ ಸಾಯಿ ಸುದರ್ಶನ್ 51 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 103 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಇಬ್ಬರು ನಡೆಸಿದ 210 ರನ್​​ಗಳ ಜೊತೆಯಾಟ ಗುಜರಾತ್ ಪರ ಜೋಡಿಯೊಂದು ಕಲೆಹಾಕಿದ ಅತ್ಯಧಿಕ ಮೊತ್ತ ಎಂಬ ದಾಖಲೆ ಕೂಡ ಬರೆದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Fri, 10 May 24

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!