AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs KKR Head To Head: ಚೆಪಾಕ್ ಅಂಗಳದಲ್ಲಿ ಚೆನ್ನೈ- ಕೆಕೆಆರ್ ಆಟ ಹೇಗಿದೆ?

CSK vs KKR Head To Head: ಐಪಿಎಲ್ 2024 ರ 22 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಸೋಮವಾರ ಮುಖಾಮುಖಿಯಾಗಲಿವೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿನ ಮೇಲೆ ಕಣ್ಣಿಟ್ಟಿವೆ.

CSK vs KKR Head To Head: ಚೆಪಾಕ್ ಅಂಗಳದಲ್ಲಿ ಚೆನ್ನೈ- ಕೆಕೆಆರ್ ಆಟ ಹೇಗಿದೆ?
ಸಿಎಸ್​ಕೆ- ಕೆಕೆಆರ್
ಪೃಥ್ವಿಶಂಕರ
|

Updated on: Apr 07, 2024 | 10:41 PM

Share

ಐಪಿಎಲ್ 2024 (IPL 2024) ರ 22 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (CSK vs KKR) ಸೋಮವಾರ ಮುಖಾಮುಖಿಯಾಗಲಿವೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿನ ಮೇಲೆ ಕಣ್ಣಿಟ್ಟಿವೆ. ಸಿಎಸ್​ಕೆ ತನ್ನ ಕೊನೆಯ 2 ಪಂದ್ಯಗಳಲ್ಲಿ ಸೋತಿದೆ. ಇಂತಹ ಪರಿಸ್ಥಿತಿಯಲ್ಲಿ ರುತುರಾಜ್ ಗಾಯಕ್ವಾಡ್ ಪಡೆ ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿದೆ. ಇತ್ತ ಕೆಕೆಆರ್ ಆಡಿರುವ ಎಲ್ಲಾ 3 ಪಂದ್ಯಗಳನ್ನು ಗೆದ್ದಿದ್ದು ಶ್ರೇಯಸ್ ಅಯ್ಯರ್ ಪಡೆ ಗೆಲುವಿನ ಫೋರ್ ಹೊಡೆಯಲು ಪ್ರಯತ್ನಿಸಲಿದೆ.

ಚೆನ್ನೈಗೆ 18 ಪಂದ್ಯಗಳಲ್ಲಿ ಗೆಲುವು

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಮುಖಾಮುಖಿ ಅಂಕಿಅಂಶಗಳನ್ನು ನಾವು ನೋಡುವುದಾದರೆ, ಇದರಲ್ಲಿ ಸಿಎಸ್‌ಕೆ ಮೇಲುಗೈ ಸಾಧಿಸಿದೆ. ಎರಡೂ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 28 ​​ಬಾರಿ ಮುಖಾಮುಖಿಯಾಗಿವೆ. ಈ ಅವಧಿಯಲ್ಲಿ ಚೆನ್ನೈ 18 ಪಂದ್ಯಗಳನ್ನು ಗೆದ್ದಿದ್ದರೆ, ಕೋಲ್ಕತ್ತಾ 9 ಪಂದ್ಯಗಳನ್ನು ಗೆದ್ದಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

IPL 2024: 4 6 6 6 4 6…! ಒಂದೇ ಓವರ್​ನಲ್ಲಿ 32 ರನ್ ಚಚ್ಚಿದ ವಿಂಡೀಸ್ ವೇಗಿ

ಚೆಪಾಕ್‌ನಲ್ಲಿ ಎರಡೂ ತಂಡಗಳ ಪ್ರದರ್ಶನ

ಚೆನ್ನೈ ಮತ್ತು ಕೆಕೆಆರ್ ನಡುವಿನ ಪಂದ್ಯಗಳಲ್ಲಿ, ಚೆನ್ನೈ ಮೊದಲು ಬ್ಯಾಟಿಂಗ್ ಮಾಡಿದ ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಸಾಧಿಸಿದ್ದರೆ, ಗುರಿಯನ್ನು ಬೆನ್ನಟ್ಟಿದ 10 ಪಂದ್ಯಗಳನ್ನು ಗೆಲುವು ಸಾಧಿಸಿದೆ. ಮತ್ತೊಂದೆಡೆ, ಕೋಲ್ಕತ್ತಾ ಮೊದಲು ಬ್ಯಾಟಿಂಗ್‌ ಮಾಡಿದ ಪಂದ್ಯಗಳಲ್ಲಿ 1 ಬಾರಿ ಮತ್ತು ಚೇಸಿಂಗ್‌ನಲ್ಲಿ 9 ಪಂದ್ಯಗಳನ್ನು ಗೆದ್ದಿದೆ. ಇನ್ನು ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಉಭಯ ತಂಡಗಳು 10 ಬಾರಿ ಮುಖಾಮುಖಿಯಾಗಿವೆ. ಈ ಅವಧಿಯಲ್ಲಿ ಸಿಎಸ್​ಕೆ 7 ಹಾಗೂ ಕೆಕೆಆರ್ 3 ಪಂದ್ಯಗಳನ್ನು ಗೆದ್ದಿದೆ. ತವರು ನೆಲದಲ್ಲಿ, ಚೆನ್ನೈ ಮೊದಲು ಬ್ಯಾಟಿಂಗ್ ಮಾಡುವ ಮೂಲಕ ಕೋಲ್ಕತ್ತಾ ವಿರುದ್ಧ 3 ಮತ್ತು ಗುರಿಯನ್ನು ಬೆನ್ನಟ್ಟಿದ ವೇಳೆ 3 ಪಂದ್ಯಗಳನ್ನು ಗೆದ್ದಿದೆ. ಚೆಪಾಕ್‌ನಲ್ಲಿ ಕೋಲ್ಕತ್ತಾ ಚೆನ್ನೈ ವಿರುದ್ಧ ಚೇಸಿಂಗ್‌ನಲ್ಲಿ 3 ಪಂದ್ಯಗಳನ್ನು ಗೆದ್ದಿದೆ.

ತವರು ನೆಲದಲ್ಲಿ ಚೆನ್ನೈ ಪ್ರದರ್ಶನ

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಂಕಿಅಂಶಗಳನ್ನು ಗಮನಿಸಿದರೆ, ತಂಡವು ತನ್ನ ತವರು ನೆಲದಲ್ಲಿ 66 ಪಂದ್ಯಗಳನ್ನು ಆಡಿದೆ. ಈ ಪೈಕಿ ಸಿಎಸ್‌ಕೆ 48ರಲ್ಲಿ ಗೆದ್ದು 18ರಲ್ಲಿ ಸೋತಿದೆ. ತಂಡವು ಮೊದಲು ಬ್ಯಾಟಿಂಗ್ ಮಾಡಿದ 30 ಪಂದ್ಯಗಳಲ್ಲಿ ಮತ್ತು ಚೇಸಿಂಗ್ ಮಾಡುವಾಗ 18 ಪಂದ್ಯಗಳನ್ನು ಗೆದ್ದಿದೆ. ತವರು ನೆಲದಲ್ಲಿ ಚೆನ್ನೈನ ಗರಿಷ್ಠ ಸ್ಕೋರ್ 246 ರನ್ ಮತ್ತು ಕಡಿಮೆ ಸ್ಕೋರ್ 109 ರನ್ ಆಗಿದೆ. ಇದಲ್ಲದೇ ಕೋಲ್ಕತ್ತಾ ಚೆಪಾಕ್‌ನಲ್ಲಿ 13 ಪಂದ್ಯಗಳನ್ನು ಆಡಿದ್ದು, 4ರಲ್ಲಿ ಜಯ ಸಾಧಿಸಿದ್ದು, 9ಪಂದ್ಯಗಳಲ್ಲಿ ತಂಡ ಸೋತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ