IPL 2024: ದಿನೇಶ್ ಕಾರ್ತಿಕ್​ಗೆ ನೋವಿನ ವಿದಾಯ: DKಯ ಮುಂದಿನ ನಡೆಯೇನು?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ಮತ್ತು ಆರ್​ಆರ್​ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 172 ರನ್ ಕಲೆಹಾಕಿತು. ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ.

IPL 2024: ದಿನೇಶ್ ಕಾರ್ತಿಕ್​ಗೆ ನೋವಿನ ವಿದಾಯ: DKಯ ಮುಂದಿನ ನಡೆಯೇನು?
Dinesh Karthik
Follow us
ಝಾಹಿರ್ ಯೂಸುಫ್
|

Updated on: May 23, 2024 | 10:28 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ ಎಲಿಮಿನೇಟರ್​ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ (Dinesh Karthik) ಐಪಿಎಲ್​ ಕೆರಿಯರ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ಹೊರಗುಳಿಯುವುದು ಕೂಡ ಖಚಿತವಾಗಿದೆ. 38 ವರ್ಷದ ಡಿಕೆ ಇನ್ನೂ ಸಹ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿಲ್ಲ. ಇದಾಗ್ಯೂ 2022 ರಿಂದ ಅವರು ಭಾರತ ತಂಡವನ್ನು ಪ್ರತಿನಿಧಿಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಅವರಿಗೆ ಮತ್ತೆ ಟೀಮ್ ಇಂಡಿಯಾದಲ್ಲಿ ಚಾನ್ಸ್​ ಸಿಗುವುದಿಲ್ಲ ಎಂದೇ ಹೇಳಬಹುದು.

ಮತ್ತೊಂದೆಡೆ ದೇಶೀಯ ಅಂಗಳದಲ್ಲಿ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಡಿಕೆ ಇನ್ಮುಂದೆ ಆ ಟೂರ್ನಿಯಿಂದಲೂ ಹೊರಗುಳಿಯಲಿದ್ದಾರೆ. ಏಕೆಂದರೆ ಐಪಿಎಲ್​ನಲ್ಲಿ ಕೆರಿಯರ್ ಮುಗಿಸಿರುವ ಕಾರಣ ದಿನೇಶ್ ಕಾರ್ತಿಕ್ ಮತ್ತೆ ದೇಶೀಯ ಅಂಗಳದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ.

ಡಿಕೆಯ ಮುಂದಿನ ನಡೆಯೇನು?

ಈ ಹಿಂದೆಯೇ ದಿನೇಶ್ ಕಾರ್ತಿಕ್ ಕಾಮೆಂಟೇಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಸಂಪೂರ್ಣವಾಗಿ ಕ್ರಿಕೆಟ್​ನಿಂದ ಹೊರಗುಳಿದಿರುವ ಕಾರಣ ಅವರು ಮುಂಬರುವ ದಿನಗಳಲ್ಲಿ ಸ್ಟಾರ್ ಸ್ಪೋರ್ಟ್ಸ್ ಜೊತೆ ಕೈ ಜೋಡಿಸುವ ಸಾಧ್ಯತೆಯಿದೆ. ಏಕೆಂದರೆ ಜೂನ್ 2 ರಿಂದ ಟಿ20 ವಿಶ್ವಕಪ್ ಶುರುವಾಗಲಿದ್ದು, ಈ ವೇಳೆ ಅವರು ಕಾಮೆಂಟರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳಬಹುದು.

ಹಾಗೆಯೇ ಈ ಹಿಂದೆ ಸ್ಕೈ ಸ್ಪೋರ್ಟ್ಸ್ ಜೊತೆಗೂ ಕಾರ್ಯ ನಿರ್ವಹಿಸಿರುವ ಕಾರಣ ವಿದೇಶಿ ಚಾನೆಲ್​ಗಳಲ್ಲೂ ಕಾಮೆಂಟೇಟರ್​ ಆಗಿ ಕಾಣಿಸಿಕೊಳ್ಳಬಹುದು. ಅಂದರೆ ಕ್ರಿಕೆಟ್ ವೃತ್ತಿಜೀವನದ ಜೊತೆಗೆ ಕಾಮೆಂಟೇಟರ್ ಆಗಿ ಗಮನ ಸೆಳೆದಿರುವ ದಿನೇಶ್ ಕಾರ್ತಿಕ್ ಮುಂಬರುವ ದಿನಗಳಲ್ಲಿ ಅದೇ ವೃತ್ತಿಯನ್ನು ಸ್ವೀಕರಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಐಸಿಸಿ ಟೂರ್ನಿಗಳಲ್ಲಿ ಮತ್ತು ಇತರೆ ಸರಣಿಗಳಲ್ಲಿ ಡಿಕೆ ಕಾಮೆಂಟೇಟರ್ ಆಗಿ ಕಾಣಿಸಿಕೊಂಡರೂ ಅಚ್ಚರಿ ಪಡಬೇಕಿಲ್ಲ.

ಇದನ್ನೂ ಓದಿ: IPL 2024: ಬೆಂಗಳೂರಿಗೆ ಸಾಧ್ಯವಿಲ್ಲ… RCB ತಂಡದ ಸೋಲನ್ನು ಸಂಭ್ರಮಿಸಿದ CSK ಬೌಲರ್​..!

ಐಪಿಎಲ್ ವೃತ್ತಿಜೀವನ:

ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಈ ಎಲ್ಲಾ ದಾಖಲೆಗಳೊಂದಿಗೆ ಇದೀಗ ಡಿಕೆ ಐಪಿಎಲ್​ಗೆ ವಿದಾಯ ಹೇಳಿದ್ದಾರೆ.

ಡಿಕೆ ಪ್ರತಿನಿಧಿಸಿದ ಐಪಿಎಲ್​ ತಂಡಗಳು:

  • 2008-2011- ಡೆಲ್ಲಿ ಡೇರ್ ಡೆವಿಲ್ಸ್​ (ಈಗಿನ ಡೆಲ್ಲಿ ಕ್ಯಾಪಿಟಲ್ಸ್)
  • 2011- ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​)
  • 2012- ಮುಂಬೈ ಇಂಡಿಯನ್ಸ್
  • 2014- ಡೆಲ್ಲಿ ಡೇರ್ ಡೆವಿಲ್ಸ್​ (ಈಗಿನ ಡೆಲ್ಲಿ ಕ್ಯಾಪಿಟಲ್ಸ್)
  • 2015- ರಾಯಲ್ ಚಾಲೆಂಜರ್ಸ್ ಬೆಂಗಳೂರು
  • 2016-2017- ಗುಜರಾತ್ ಲಯನ್ಸ್
  • 2018-2021- ಕೊಲ್ಕತ್ತಾ ನೈಟ್ ರೈಡರ್ಸ್​
  • 2022-2024- ರಾಯಲ್ ಚಾಲೆಂಜರ್ಸ್ ಬೆಂಗಳೂರು.

ನೋವಿನ ವಿದಾಯ:

ಆರ್​ಸಿಬಿ ತಂಡಕ್ಕೆ ಕಪ್ ಗೆಲ್ಲಿಸಿಕೊಡುವ ಮೂಲಕ ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದ ದಿನೇಶ್ ಕಾರ್ತಿಕ್ ಅವರು ಕನಸು ಕಮರಿದೆ. ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಮುಗ್ಗರಿಸುವ ಮೂಲಕ ಆರ್​ಸಿಬಿ 4 ವಿಕೆಟ್​ಗಳ ಸೋಲನುಭವಿಸಿದೆ.

ಈ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್​ನಿಂದ ಹೊರಬಿದ್ದಿದ್ದು, ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಮೇ 24 ರಂದು ಚೆನ್ನೈನಲ್ಲಿ ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ