AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Final: ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಕಿರೀಟ ತೊಟ್ಟ ಕೆಕೆಆರ್​..!

IPL 2024 Final: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ 17ನೇ ಆವೃತ್ತಿಯ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಏಕಪಕ್ಷೀಯವಾಗಿ ಹೈದರಾಬಾದ್ ತಂಡವನ್ನು ಮಣಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್​ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್​ ಪಟ್ಟಕ್ಕೇರಿದೆ.

IPL 2024 Final: ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಕಿರೀಟ ತೊಟ್ಟ ಕೆಕೆಆರ್​..!
ಕೆಕೆಆರ್
ಪೃಥ್ವಿಶಂಕರ
|

Updated on:May 26, 2024 | 10:49 PM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ (MA Chidambaram Stadium) ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ (Kolkata Knight Riders vs Sunrisers Hyderabad) ನಡುವಿನ 17ನೇ ಆವೃತ್ತಿಯ ಐಪಿಎಲ್​ನ ಫೈನಲ್ (IPL 2024 Final) ಪಂದ್ಯದಲ್ಲಿ ಏಕಪಕ್ಷೀಯವಾಗಿ ಹೈದರಾಬಾದ್ ತಂಡವನ್ನು ಮಣಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್​ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್​ ಪಟ್ಟಕ್ಕೇರಿದೆ. ಈ ಮೂಲಕ ಅಧಿಕ ಐಪಿಎಲ್ ಪ್ರಶಸ್ತಿಗಳನ್ನು ಗೆದ್ದ ತಂಡಗಳ ಪೈಕಿ ಕೆಕೆಆರ್​ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ ತಲಾ 5 ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಜಂಟಿಯಾಗಿ ಮೊದಲ ಸ್ಥಾನ ಪಡೆದುಕೊಂಡಿವೆ. ಫೈನಲ್ ಪಂದ್ಯದಲ್ಲಿ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದನ್ನು ಬಿಟ್ಟರೆ, ಉಳಿದಂತೆ ಇಡೀ ಪಂದ್ಯದಲ್ಲಿ ಎಲ್ಲಿಯೂ ಗೆಲುವಿಗಾಗಿ ಹೋರಾಟ ನೀಡಲಿಲ್ಲ. ಹೀಗಾಗಿ ಕೆಕೆಆರ್ ತಂಡ ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ದಾಖಲಿಸಿತು.

ಹೈದರಾಬಾದ್​ಗೆ ಕಳಪೆ ಆರಂಭ

ಮೇಲಿ ಹೇಳಿದಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಹೈದರಾಬಾದ್ ನಾಯಕನ ನಿರ್ಧಾರ ತಪ್ಪು ಎಂಬುದನ್ನು ಕೆಕೆಆರ್​ ವೇಗಿಗಳು ಸಾಭೀತು ಪಡಿಸಿದರು. ಮೊದಲ ಓವರ್​ನಲ್ಲೇ ವೇಗಿ ಮಿಚೆಲ್ ಸ್ಟಾರ್ಕ್, ಅಭಿಷೇಕ್ ಶರ್ಮಾರ ವಿಕೆಟ್ ಉರುಳಿಸಿದರು. ಮತ್ತೊಬ್ಬ ಸ್ಫೋಟಕ ಬ್ಯಾಟರ್ ಟ್ರಾವಿಸ್​ ಹೆಡ್​ಗೆ ಈ ಪಂದ್ಯದಲ್ಲೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡ ಪಂದ್ಯದ ಮೊದಲ 6 ಓವರ್‌ಗಳ ಅಂತ್ಯಕ್ಕೆ 3 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

IPL: ಅತಿ ಹೆಚ್ಚು ಐಪಿಎಲ್ ಫೈನಲ್‌ಗಳನ್ನು ಆಡಿದ ಆಟಗಾರ ಯಾರು ಗೊತ್ತಾ?

113 ರನ್​​ಗಳಿಗೆ ಹೈದರಾಬಾದ್ ಆಲೌಟ್

ಇದಾದ ಬಳಿಕ ಸ್ಕೋರ್ 62 ರನ್ ಆಗುವಷ್ಟರಲ್ಲಿ ಅರ್ಧದಷ್ಟು ತಂಡ ಪೆವಿಲಿಯನ್ ಸೇರಿಕೊಂಡಿತ್ತು. ಇಲ್ಲಿಂದ ಹೈದರಾಬಾದ್​ ತಂಡಕ್ಕೆ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸುವುದು ಅಸಾಧ್ಯವೆನಿಸಿತು. ಇಡೀ ಪಂದ್ಯದಲ್ಲಿ ಹೈದರಾಬಾದ್​ ಬ್ಯಾಟರ್​ಗಳ ಮೇಲೆ ಸವಾರಿ ಮಾಡಿದ ಕೆಕೆಆರ್ ಬೌಲರ್‌ಗಳು ಹೈದರಾಬಾದ್ ಇನ್ನಿಂಗ್ಸ್ ಅನ್ನು ಕೇವಲ 113 ರನ್‌ಗಳಿಗೆ ಸೀಮಿತಗೊಳಿಸಿದರು. ಕೆಕೆಆರ್ ಪರ ಬೌಲಿಂಗ್​ನಲ್ಲಿ ಆಂಡ್ರೆ ರಸೆಲ್ ಗರಿಷ್ಠ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ ಮತ್ತು ಹರ್ಷಿತ್ ರಾಣಾ ತಲಾ 2 ವಿಕೆಟ್ ಪಡೆದರು. ಉಳಿದಂತೆ ವೈಭವ್ ಅರೋರಾ, ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ತಲಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಅಲ್ಪಮೊತ್ತಕೆ ನರೈನ್ ಔಟ್

ಹೈದರಾಬಾದ್ ತಂಡವನ್ನು ಕೇವಲ 113 ರನ್​ಗಳಿಗೆ ಸೀಮಿತಗೊಳಿಸುವಲ್ಲಿ ಕೆಕೆಆರ್ ತಂಡದ ಬೌಲರ್‌ಗಳು ಯಶಸ್ವಿಯಾದರೆ, ಆ ನಂತರ ಗುರಿ ಬೆನ್ನಟ್ಟಿದ ವೇಳೆ ತಂಡದ ಬ್ಯಾಟರ್​​ಗಳಿಂದಲೂ ಅದ್ಭುತ ಪ್ರದರ್ಶನ ಕಂಡುಬಂತು. ಆದರೆ ಇಡೀ ಲೀಗ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದ ಸುನಿಲ್ ನರೈನ್ ಕೇವಲ 6 ರನ್‌ಗಳಿಗೆ ಪ್ಯಾಟ್ ಕಮಿನ್ಸ್‌ಗೆ ಬಲಿಯಾದರು. ಇದಾದ ಬಳಿಕ ಬ್ಯಾಟಿಂಗ್​ಗೆ ಬಂದ ವೆಂಕಟೇಶ್ ಅಯ್ಯರ್ ರಹಮಾನುಲ್ಲಾ ಗುರ್ಬಾಜ್ ಜತೆಗೂಡಿ ಆಕ್ರಮಣಕಾರಿ ಆಟ ಪ್ರದರ್ಶಿಸಿ ತಂಡದ ಸ್ಕೋರ್ ಅನ್ನು ಮೊದಲ 6 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 72 ರನ್​ಗಳಿಗೆ ಕೊಂಡೊಯ್ದರು.

ಗೆಲುವಿನ ಅರ್ಧಶತಕ ಸಿಡಿಸಿದ ವೆಂಕಟೇಶ್

ಇವರಿಬ್ಬರು ಎರಡನೇ ವಿಕೆಟ್‌ಗೆ 45 ಎಸೆತಗಳಲ್ಲಿ 91 ರನ್‌ಗಳ ಜೊತೆಯಾಟವನ್ನು ಮಾಡುವ ಮೂಲಕ ಪಂದ್ಯವನ್ನು ಸಂಪೂರ್ಣ ಏಕಪಕ್ಷೀಯವಾಗಿಸಿದರು. ಗುರ್ಬಾಜ್ 39 ರನ್‌ಗಳಿಸಿ ವಿಕೆಟ್ ಒಪ್ಪಿಸಿದರೆ, ವೆಂಕಟೇಶ್ ಅಯ್ಯರ್ 52 ರನ್‌ಗಳ ಅಜೇಯ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಹೈದರಾಬಾದ್ ಪರ ಈ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್ ಮತ್ತು ಶಹಬಾಜ್ ಅಹ್ಮದ್ ತಲಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 pm, Sun, 26 May 24

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ