AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ ಇತಿಹಾಸದಲ್ಲೇ ಸಾರ್ವಕಾಲಿಕ ಅನಗತ್ಯ ದಾಖಲೆ ಬರೆದ ಸನ್‌ರೈಸರ್ಸ್ ಹೈದರಾಬಾದ್​ ತಂಡ

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡ ನಾಯಕ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್​ನ ವೇಗಿ ಮಿಚೆಲ್ ಸ್ಟಾರ್ಕ್ ಅವರ ಪವರ್‌ಪ್ಲೇಯ ಆರಂಭದಲ್ಲಿ ಆಘಾತಕ್ಕೊಳಗಾಯಿತು ಮತ್ತು ಕೇವಲ 113 ರನ್‌ಗಳಿಗೆ ಆಲೌಟ್ ಆಯಿತು.

ಐಪಿಎಲ್​ ಇತಿಹಾಸದಲ್ಲೇ ಸಾರ್ವಕಾಲಿಕ ಅನಗತ್ಯ ದಾಖಲೆ ಬರೆದ ಸನ್‌ರೈಸರ್ಸ್ ಹೈದರಾಬಾದ್​ ತಂಡ
ಐಪಿಎಲ್​ ಇತಿಹಾಸದಲ್ಲೇ ಸಾರ್ವಕಾಲಿಕ ಅನಗತ್ಯ ದಾಖಲೆ ಬರೆದ ಸನ್‌ರೈಸರ್ಸ್ ಹೈದರಾಬಾದ್​ ತಂಡ
ಗಂಗಾಧರ​ ಬ. ಸಾಬೋಜಿ
|

Updated on: May 26, 2024 | 11:05 PM

Share

ಮೇ 26 ರಂದು ಚೆನ್ನೈನಲ್ಲಿ ನಡೆದ ಐಪಿಎಲ್ 2024 ರ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR)​​ ತಂಡವು ಅದ್ಭುತ ಬೌಲಿಂಗ್​​ ಪ್ರದರ್ಶನದ ಮೂಲಕ ಸನ್‌ರೈಸರ್ಸ್ ಹೈದರಾಬಾದ್ (SRH) ​​ ತಂಡವನ್ನು ಕೇವಲ 113 ರನ್​ಗಳಿಗೆ ಕಟ್ಟಿಹಾಕಿತು. ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಸಾಲು ಸಾಲು ವಿಕೆಟ್​ ನಷ್ಟದಿಂದ ನಾಯಕ ಪ್ಯಾಟ್ ಕಮಿನ್ಸ್ ತಂಡವು ಐಪಿಎಲ್ ಫೈನಲ್ಸ್ ಇತಿಹಾಸದಲ್ಲಿ ಸಾರ್ವಕಾಲಿಕ ಅನಗತ್ಯ ದಾಖಲೆಯನ್ನು ಬರೆದಿದೆ.

ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ಮಾಡುವ ಮೂಲಕ ಅತ್ಯಂತ ಕಡಿಮೆ ರನ್​ಗಳನ್ನು ದಾಖಲಿಸಿತು. 2024ರ 17ನೇ ಆವೃತ್ತಿಯ ಐಪಿಎಲ್​ನ ಪಂದ್ಯದಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ಮೂರು ಬಾರಿ 250ಕ್ಕೂ ಹೆಚ್ಚು ಮೊತ್ತಗಳೊಂದಿಗೆ ಪ್ರಾಬಲ್ಯ ಸಾಧಿಸಿದ ಬಳಿಕ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ರೋಚಕ ಕದನದಲ್ಲಿ ಸನ್‌ರೈಸರ್ಸ್ ಹೈದರಾಬಾದ್​ ತಂಡವು ತಮ್ಮ ಫಾರ್ಮ್ ಅನ್ನು ಪುನರಾವರ್ತಿಸಲು ಹೆಣಗಾಡಿತು.

ಇದನ್ನೂ ಓದಿ: “ಅಭಿನಂದನೆ ಕೆಕೆಆರ್​​” ಸಾಲು ಸಾಲು ವಿಕೆಟ್​ನಿಂದ ತತ್ತರಿಸಿದ ಎಸ್‌ಆರ್‌ಹೆಚ್​​: ಕೋಲ್ಕತ್ತಾ ವಿನ್​ ಎಂದ ನೆಟ್ಟಿಗರು

ಈ ಹಿಂದೆ ಐಪಿಎಲ್ 2017 ರ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ರೈಸಿಂಗ್ ಪುಣೆ ಸೂಪರ್‌ಜೈಂಟ್ ವಿರುದ್ಧ 129/8 ಮೊತ್ತಕ್ಕೆ ಸೀಮಿತವಾದಾಗ ಐಪಿಎಲ್ ಫೈನಲ್‌ನಲ್ಲಿ ಕಡಿಮೆ ಮೊತ್ತದ ದಾಖಲೆಯನ್ನು ಹೊಂದಿತ್ತು. ಮುಖ್ಯವಾಗಿ ಐದು ಬಾರಿ ಚಾಂಪಿಯನ್‌ಗಳು ತಮ್ಮ ಎದುರಾಳಿಯನ್ನು ಕೇವಲ 125 ರನ್‌ಗಳಿಂದ ಕಟ್ಟಿಹಾಕಲಾಗಿತ್ತು.

ನಾಯಕ ಪ್ಯಾಟ್ ಕಮ್ಮಿನ್ಸ್ 19 ಎಸೆತಗಳಲ್ಲಿ 24 ರನ್ ಗಳಿಸಿ ತಮ್ಮ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು. ಇನ್-ಫಾರ್ಮ್ ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಏಕ-ಅಂಕಿಯ ಸ್ಕೋರ್‌ಗಳೊಂದಿಗೆ ಕೊಡುಗೆ ನೀಡಲು ಹೆಣಗಾಡಿದರು. ಆದರೆ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ 17 ಎಸೆತಗಳಲ್ಲಿ 16 ರನ್​ ಕಬಳಿಸಿದರು.

ಇದನ್ನೂ ಓದಿ: IPL 2024 Final: ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಕಿರೀಟ ತೊಟ್ಟ ಕೆಕೆಆರ್​..!

ಮಿಚೆಲ್ ಸ್ಟಾರ್ಕ್ ಮೊದಲ ಓವರ್‌ನಲ್ಲಿಯೇ ಅಭಿಷೇಕ್‌ರನ್ನು ಔಟ್ ಮಾಡಿದರು. ಬಳಿಕ ರಾಹುಲ್ ತ್ರಿಪಾಠಿ  ವಿಕೆಟ್ ಪಡೆದುಕೊಳ್ಳುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್​​ ತಂಡವನ್ನು ಒತ್ತಡಕ್ಕೆ ತಳ್ಳಿದರು. ಆಂಡ್ರೆ ರಸೆಲ್ 19 ರನ್‌ಗೆ ಮೂರು ವಿಕೆಟ್‌ಗಳನ್ನು ಕಬಳಿಸಿದರೆ, ಹರ್ಷಿತ್ ರಾಣಾ 2 ವಿಕೆಟ್‌ಗಳನ್ನು ಪಡೆದುಕೊಂಡರು.

ಐಪಿಎಲ್ ಫೈನಲ್‌ನಲ್ಲಿ ಅತಿ ಕಡಿಮೆ ಮೊತ್ತ ಪಡೆದ ತಂಡಗಳು ಹೀಗಿವೆ

  • 113 – ಐಪಿಎಲ್ 2024 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್
  • 129 – ಐಪಿಎಲ್ 2017 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರೈಸಿಂಗ್ ಪುಣೆ ಸೂಪರ್ ಜೈಂಟ್
  • 130 – ಐಪಿಎಲ್ 2022 ರಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್
  • 143 – 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು
  • 148 – ಐಪಿಎಲ್ 2013 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ