AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹರಾಜಿಗೂ ಮುನ್ನ ಎಲ್ಲಾ 10 ತಂಡಗಳು ಉಳಿಸಿಕೊಂಡ, ಬಿಡುಗಡೆಗೊಳಿಸಿದ ಆಟಗಾರರ ಪೂರ್ಣ ಪಟ್ಟಿ ಇಲ್ಲಿದೆ

IPL 2024: 2024 ರ ಐಪಿಎಲ್ ಮಿನಿ ಹರಾಜಿಗೂ ಮೊದಲು ಎಲ್ಲಾ 10 ತಂಡಗಳು ತಮಗೆ ಬೇಕಾದ ಆಟಗಾರರನ್ನು ಉಳಿಸಿಕೊಳ್ಳಲು ಮತ್ತು ಬೇಡವಾದ ಆಟಗಾರರನ್ನು ಬಿಡುಗಡೆ ಮಾಡಲು ಇಂದು ಕೊನೆಯ ದಿನವಾಗಿದ್ದು, ಅದರಂತೆ ಎಲ್ಲಾ ತಂಡಗಳು ತಮ್ಮ ತಮ್ಮ ಪಟ್ಟಿಯನ್ನು ಬಿಡುಗಡೆಗೊಳಿಸಿವೆ

IPL 2024: ಹರಾಜಿಗೂ ಮುನ್ನ ಎಲ್ಲಾ 10 ತಂಡಗಳು ಉಳಿಸಿಕೊಂಡ, ಬಿಡುಗಡೆಗೊಳಿಸಿದ ಆಟಗಾರರ ಪೂರ್ಣ ಪಟ್ಟಿ ಇಲ್ಲಿದೆ
ಐಪಿಎಲ್ 2024
ಪೃಥ್ವಿಶಂಕರ
|

Updated on:Nov 26, 2023 | 6:08 PM

Share

2024 ರ ಐಪಿಎಲ್ (IPL 2024) ಮಿನಿ ಹರಾಜಿಗೂ ಮೊದಲು ಎಲ್ಲಾ 10 ತಂಡಗಳು ತಮಗೆ ಬೇಕಾದ ಆಟಗಾರರನ್ನು ಉಳಿಸಿಕೊಳ್ಳಲು ಮತ್ತು ಬೇಡವಾದ ಆಟಗಾರರನ್ನು ಬಿಡುಗಡೆ ಮಾಡಲು ಇಂದು ಕೊನೆಯ ದಿನವಾಗಿದ್ದು, ಅದರಂತೆ ಎಲ್ಲಾ ತಂಡಗಳು ತಮ್ಮ ತಮ್ಮ ಪಟ್ಟಿಯನ್ನು ಬಿಡುಗಡೆಗೊಳಿಸಿವೆ. ಹಾಗಿದ್ದರೆ ಎಲ್ಲಾ 10 ತಂಡಗಳು ಎಷ್ಟು ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಿವೆ? ಹಾಗೂ ಎಷ್ಟು ಆಟಗಾರರನ್ನು ತಮ್ಮ ಬಳಿಯೇ ಉಳಿಸಿಕೊಂಡಿವೆ ಎಂಬ ಪಟ್ಟಿಯನ್ನು ನೋಡುವುದಾದರೆ..

ಚೆನ್ನೈ ಸೂಪರ್ ಕಿಂಗ್ಸ್

ಬಿಡುಗಡೆ ಮಾಡಿದ ಆಟಗಾರರು: ಬೆನ್ ಸ್ಟೋಕ್ಸ್, ಡ್ವೈನ್ ಪ್ರಿಟೋರಿಯಸ್, ಕೈಲ್ ಜೇಮಿಸನ್, ಆಕಾಶ್ ಸಿಂಗ್, ಅಂಬಟಿ ರಾಯುಡು, ಸಿಸಂದ ಮಗಲಾ, ಭಗತ್ ವರ್ಮ, ಸುಭ್ರಾಂಶು ಸೇನಾಪತಿ

ಉಳಿಸಿಕೊಂಡ ಆಟಗಾರರ ಪಟ್ಟಿ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾನ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್.

ಕೋಲ್ಕತ್ತಾ ನೈಟ್ ರೈಡರ್ಸ್​

ಬಿಡುಗಡೆ ಮಾಡಿದ ಆಟಗಾರರು: ಶಾಕಿಬ್ ಅಲ್ ಹಸನ್, ಲಿಟ್ಟನ್ ದಾಸ್, ಆರ್ಯ ದೇಸಾಯಿ, ಡೇವಿಡ್ ವೈಸ್, ನಾರಾಯಣ ಜಗದೀಸನ್, ಮನದೀಪ್ ಸಿಂಗ್, ಕುಲ್ವಂತ್ ಖೆಜ್ರೋಲಿಯಾ, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಜಾನ್ಸನ್ ಚಾರ್ಲ್ಸ್.

ಉಳಿಸಿಕೊಂಡ ಆಟಗಾರರ ಪಟ್ಟಿ: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ವೈಭವ್ ಅರೋರಾ, ಸುಯಶ್ ಶರ್ಮಾ, ಕುಲ್ವಂತ್ ಖೆಜ್ರೋಲಿಯಾ, ಮನ್‌ದೀಪ್ ಸಿಂಗ್, ಜೇಸನ್ ರಾಯ್.

ರಾಜಸ್ಥಾನ್ ರಾಯಲ್ಸ್

ಬಿಡುಗಡೆ ಮಾಡಿದ ಆಟಗಾರರು: ಜೋ ರೂಟ್, ಅಬ್ದುಲ್ ಬಸಿತ್, ಆಕಾಶ್ ವಶಿಷ್ಟ, ಕುಲದೀಪ್ ಯಾದವ್, ಒಬೆಡ್ ಮೆಕಾಯ್, ಮುರುಗನ್ ಅಶ್ವಿನ್, ಕೆ ಸಿ ಕಾರಿಯಪ್ಪ, ಕೆ ಎಂ ಆಸಿಫ್.

ಉಳಿಸಿಕೊಂಡ ಆಟಗಾರರ ಪಟ್ಟಿ: ಸಂಜು ಸ್ಯಾಮ್ಸನ್ (ನಾಯಕ), ಶಿಮ್ರೋನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಕುನಾಲ್ ಸಿಂಗ್ ರಾಥೋಡ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಜೋಸ್ ಬಟ್ಲರ್, ಡೊನೊವನ್ ಫೆರೇರಾ, ಧ್ರುವ್ ಜುರೆಲ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ನವದೀಪ್ ಸೈನಿ, ಕುಲದೀಪ್ ಸೇನ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಆವೇಶ್ ಖಾನ್ (ಲಕ್ನೋ ತಂಡದಿಂದ ಖರೀದಿ).

ದೆಹಲಿ ಕ್ಯಾಪಿಟಲ್ಸ್

ಬಿಡುಗಡೆ ಮಾಡಿದ ಆಟಗಾರರು: ರಿಲೀ ರೋಸೌವ್, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಫಿಲ್ ಸಾಲ್ಟ್, ಮುಸ್ತಫಿಜುರ್ ರೆಹಮಾನ್, ಚೇತನ್ ಸಕರಿಯಾ, ಸರ್ಫರಾಜ್ ಖಾನ್, ಕಮಲೇಶ ನಾಗರಕೋಟಿ, ರಿಪಾಲ್ ಪಟೇಲ್, ಅಮನ್ ಖಾನ್, ಪ್ರಿಯಮ್ ಗಾರ್ಗ್.

ಉಳಿಸಿಕೊಂಡ ಆಟಗಾರರ ಪಟ್ಟಿ: ಡೇವಿಡ್ ವಾರ್ನರ್, ಪೃಥ್ವಿ ಶಾ, ಅನ್ರಿಚ್ ನೋಕಿಯಾ,ಕುಲ್ದೀಪ್ ಯಾದವ್, ಲುಂಗಿ ಎನ್ಗಿಡಿ, ಅಕ್ಷರ್ ಪಟೇಲ್, ಮಿಚೆಲ್ ಮಾರ್ಷ್, ಅಭಿಷೇಕ್ ಪೊರೆಲ್, ಇಶಾಂತ್ ಶರ್ಮಾ, ರಿಷಬ್ ಪಂತ್, ಲಲಿತ್ ಯಾದವ್, ಮುಖೇಶ್ ಕುಮಾರ್, ಯಶ್ ಧುಲ್.

ಸನ್​ರೈಸರ್ಸ್​ ಹೈದರಾಬಾದ್

ಬಿಡುಗಡೆಯಾದ ಆಟಗಾರರು: ಹ್ಯಾರಿ ಬ್ರೂಕ್, ಸಮರ್ಥ ವ್ಯಾಸ್, ಕಾರ್ತಿಕ್ ತ್ಯಾಗಿ, ವಿವ್ರಾಂತ್ ಶರ್ಮಾ, ಅಕೇಲ್ ಹೊಸೈನ್ ಮತ್ತು ಆದಿಲ್ ರಶೀದ್.

ಉಳಿಸಿಕೊಂಡ ಆಟಗಾರರ ಪಟ್ಟಿ: ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಸಂವಿರ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಾಹುಲ್ ತ್ರಿಪಾಠಿ, ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಅನ್ಮೋಲ್‌ಪ್ರೀತ್ ಸಿಂಗ್, ಐಡೆನ್ ಮರ್ಕ್ರಾಮ್, ಗ್ಲೆನ್ ಫಿಲಿಪ್ಸ್, ಫಜಲ್‌ಹಕ್ ಫಾರೂಕಿ, ಮಯಾಂಕ್ ಮಾರ್ಕಾಂಡೆ, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಹೆನ್ರಿಚ್ ಕ್ಲಾಸೆನ್, ಉಪೇಂದ್ರ ಸಿಂಗ್ ಯಾದವ್.

ಪಂಜಾಬ್ ಕಿಂಗ್ಸ್

ಬಿಡುಗಡೆಯಾದ ಆಟಗಾರರು: ಭಾನುಕಾ ರಾಜಪಕ್ಸೆ, ಮೋಹಿತ್ ರಾಥೀ, ಬಲ್ತೇಜ್ ಧಂಡಾ, ರಾಜ್ ಬಾವಾ, ಶಾರುಖ್ ಖಾನ್.

ಉಳಿಸಿಕೊಂಡ ಆಟಗಾರರ ಪಟ್ಟಿ:  ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭಾಸಿಮ್ರಾನ್ ಸಿಂಗ್, ಹರ್‌ಪ್ರೀತ್ ಭಾಟಿಯಾ, ಜಿತೇಶ್ ಶರ್ಮಾ, ಶಿವಂ ಸಿಂಗ್, ಅಥರ್ವ ಟೈಡೆ, ಸಿಕಂದರ್ ರಾಝಾ, ರಿಷಿ ಧವನ್, ಹರ್‌ಪ್ರೀತ್ ಬ್ರಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕಗಿಸೊ ರಬಾಡ, ರಾಹುಲ್ ಚಾಹರ್, ನಾಥನ್ ಎಲ್ಲಿಸ್, ವಿದ್ವತ್ ಕಾವೇರಪ್ಪ.

ಲಕ್ನೋ ಸೂಪರ್​ ಜೈಂಟ್ಸ್

ಬಿಡುಗಡೆಯಾದ ಆಟಗಾರರು: ಜಯದೇವ್ ಉನದ್ಕಟ್, ಡೇನಿಯಲ್ ಸ್ಯಾಮ್ಸ್, ಮನನ್ ವೋಹ್ರಾ, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಅರ್ಪಿತ್ ಗುಲೇರಿಯಾ, ಸೂರ್ಯಾಂಶ್ ಶೆಡ್ಗೆ, ಕರುಣ್ ನಾಯರ್.

ಉಳಿಸಿಕೊಂಡ ಆಟಗಾರರ ಪಟ್ಟಿ: ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೆ ಗೌತಮ್, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ಪ್ರೇರಕ್ ಮಂಕಡ್, ಯುಧ್ವೀರ್ ಸಿಂಗ್, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯಿ, ಯಾಶ್ ಥಾಕಿ , ಅಮಿತ್ ಮಿಶ್ರಾ, ನವೀನ್-ಉಲ್-ಹಕ್.

ಗುಜರಾತ್ ಟೈಟಾನ್ಸ್

ಬಿಡುಗಡೆಯಾದ ಆಟಗಾರರು:  ಯಶ್ ದಯಾಳ್, ಕೆಎಸ್ ಭರತ್, ಶಿವಂ ಮಾವಿ, ಉರ್ವಿಲ್ ಪಟೇಲ್, ಪ್ರದೀಪ್ ಸಾಂಗ್ವಾನ್, ಒಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ದಸುನ್ ಶನಕ.

ಉಳಿಸಿಕೊಂಡ ಆಟಗಾರರ ಪಟ್ಟಿ: ಡೇವಿಡ್ ಮಿಲ್ಲರ್, ಶುಭ್​ಮನ್ ಗಿಲ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ರಶೀದ್ ಖಾನ್, ಜೋಶ್ ಲಿಟಲ್, ಮೋಹಿತ್ ಶರ್ಮಾ.

ಮುಂಬೈ ಇಂಡಿಯನ್ಸ್

ಬಿಡುಗಡೆಯಾದ ಆಟಗಾರರು:  ಅರ್ಷದ್ ಖಾನ್, ರಮಣದೀಪ್ ಸಿಂಗ್, ಹೃತಿಕ್ ಶೋಕೀನ್, ರಾಘವ್ ಗೋಯಲ್, ಜೋಫ್ರಾ ಆರ್ಚರ್, ಟ್ರಿಸ್ಟಾನ್ ಸ್ಟಬ್ಸ್, ಡುವಾನ್ ಯಾನ್ಸೆನ್.

ಉಳಿಸಿಕೊಂಡ ಆಟಗಾರರ ಪಟ್ಟಿ: ರೋಹಿತ್ ಶರ್ಮಾ (ನಾಯಕ), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಕ್ಯಾಮರೂನ್ ಗ್ರೀನ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್‌ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್, ರೊಮಾರಿಯೋ ಶೆಫರ್ಡ್ (ಖರೀದಿಸಲಾಗಿದೆ).

ರಾಯಲ್ ಚಾಲೆಂಜರ್ಸ್​ ಬೆಂಗಳೂರು

ಬಿಡುಗಡೆಯಾದ ಆಟಗಾರರು: ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾದವ್.

ಉಳಿಸಿಕೊಂಡ ಆಟಗಾರರ ಪಟ್ಟಿ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ (ಟ್ರೆಡಿಂಗ್), ವೈಶಾಕ್ ವಿಜಯ್‌ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:59 pm, Sun, 26 November 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More