AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ವದಂತಿಗಳೆಲ್ಲ ಸುಳ್ಳು; ಗುಜರಾತ್ ತಂಡದಲ್ಲೇ ಉಳಿದ ಹಾರ್ದಿಕ್ ಪಾಂಡ್ಯ

Hardik Pandya: ಕಳೆದ ಎರಡು ಆವೃತ್ತಿಗಳಲ್ಲಿ ಗುಜರಾತ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ, ಈ ಆವೃತ್ತಿಯಿಂದ ಮತ್ತೊಮ್ಮೆ ತಮ್ಮ ಹಳೆಯ ಫ್ರಾಂಚೈಸಿಯಾದ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಊಹಪೋಹಾಗಳು ಎದ್ದಿದ್ದವು. ಆದರೆ ಇದೀಗ ಗುಜರಾತ್ ಫ್ರಾಂಚೈಸಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಹಾರ್ದಿಕ್​ರನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಫ್ರಾಂಚೈಸ್ ಯಶಸ್ವಿಯಾಗಿದೆ.

Breaking: ವದಂತಿಗಳೆಲ್ಲ ಸುಳ್ಳು; ಗುಜರಾತ್ ತಂಡದಲ್ಲೇ ಉಳಿದ ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ
ಪೃಥ್ವಿಶಂಕರ
|

Updated on:Nov 26, 2023 | 6:23 PM

Share

ಹಾರ್ದಿಕ್ ಪಾಂಡ್ಯ (Hardik Pandya) ವಿಚಾರದಲ್ಲಿ ಕೆಲವು ದಿನಗಳಿಂದ ಹರಿದಾಡುತ್ತಿದ್ದ ವದಂತಿಗಳಿಗೆಲ್ಲ ತೆರೆ ಬಿದ್ದಿದೆ. ಕಳೆದ ಎರಡು ಆವೃತ್ತಿಗಳಲ್ಲಿ ಗುಜರಾತ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ, ಈ ಆವೃತ್ತಿಯಿಂದ ಮತ್ತೊಮ್ಮೆ ತಮ್ಮ ಹಳೆಯ ಫ್ರಾಂಚೈಸಿಯಾದ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಊಹಪೋಹಾಗಳು ಎದ್ದಿದ್ದವು. ಆದರೆ ಇದೀಗ ಗುಜರಾತ್ ಫ್ರಾಂಚೈಸಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಹಾರ್ದಿಕ್​ರನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಫ್ರಾಂಚೈಸ್ ಯಶಸ್ವಿಯಾಗಿದೆ.

ಮುಂಬೈಗೆ ಇನ್ನೂ ಇದೆ ಅವಕಾಶ

ಆದರೆ ಹಾರ್ದಿಕ್​ ಮುಂಬೈ ಸೇರಲು ಇನ್ನು ಅವಕಾಶವಿದೆ. ವಾಸ್ತವವಾಗಿ ಇಂದು ಆಟಗಾರರನ್ನು ಉಳಿಸಿಕೊಳ್ಳಲು ಹಾಗೂ ತಂಡದಿಂದ ಬಿಡುಗಡೆ ಮಾಡಲು ಎಲ್ಲಾ ತಂಡಗಳಿಗೆ ಕೊನೆಯ ದಿನ. ಆದರೆ ಆಟಗಾರರ ಟ್ರೇಡ್ ವಿಂಡೋ ಇನ್ನು ಡಿಸೆಂಬರ್ 12 ರವರೆಗೆ ಸಕ್ರಿಯವಾಗಿರಲಿದೆ. ಹೀಗಾಗಿ ಹಾರ್ದಿಕ್ ಅವರನ್ನು ವ್ಯಾಪಾರದ ಮೂಲಕ ಖರೀದಿಸುವ ಅವಕಾಶ ಮುಂಬೈ ತಂಡಕ್ಕೆ ಇನ್ನೂ ಇದೆ. ಹೀಗಾಗಿ ಟ್ರೇಡಿಂಗ್ ಅವದಿ ಮುಗಿಯುವವರೆಗು ಹಾರ್ದಿಕ್ ವಿಚಾರದಲ್ಲಿ ಏನನ್ನು ಹೇಳಲು ಸಾಧ್ಯವಿಲ್ಲ.

ತಂಡದಿಂದ ಬಿಡುಗಡೆಯಾದ ಆಟಗಾರರು:  ಯಶ್ ದಯಾಳ್, ಕೆಎಸ್ ಭರತ್, ಶಿವಂ ಮಾವಿ, ಉರ್ವಿಲ್ ಪಟೇಲ್, ಪ್ರದೀಪ್ ಸಾಂಗ್ವಾನ್, ಒಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ದಸುನ್ ಶನಕ.

ಉಳಿಸಿಕೊಂಡ ಆಟಗಾರರ ಪಟ್ಟಿ: ಡೇವಿಡ್ ಮಿಲ್ಲರ್, ಶುಭ್​ಮನ್ ಗಿಲ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ರಶೀದ್ ಖಾನ್, ಜೋಶ್ ಲಿಟಲ್, ಮೋಹಿತ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:39 pm, Sun, 26 November 23

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR