AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RCB, IPL 2024: ಗುಜರಾತ್ ವಿರುದ್ಧ 1 ಬದಲಾವಣೆ ಮಾಡಿದ ಆರ್​ಸಿಬಿ

GT vs RCB, IPL 2024: ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

GT vs RCB, IPL 2024: ಗುಜರಾತ್ ವಿರುದ್ಧ 1 ಬದಲಾವಣೆ ಮಾಡಿದ ಆರ್​ಸಿಬಿ
ಫಾಫ್ ಡುಪ್ಲೆಸಿಸ್
ಪೃಥ್ವಿಶಂಕರ
|

Updated on:Apr 28, 2024 | 3:23 PM

Share

ಐಪಿಎಲ್ 2024 ರ (IPL 2024) 45 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Gujarat Titans vs Royal Challengers Bengaluru) ನಡುವೆ ಬಹಳ ಮಹತ್ವದ ಪಂದ್ಯ ನಡೆಯುತ್ತಿದೆ. ಏಕೆಂದರೆ ಪ್ಲೇ ಆಫ್ ಹಾದಿಯನ್ನು ಜೀವಂತವಾಗಿರಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದ ಗೆಲುವು ಅವಶ್ಯಕವಾಗಿದೆ. ಆರ್​ಸಿಬಿ ಇದುವರೆಗೆ ಆಡಿರುವ 9 ಪಂದ್ಯಗಳ ಪೈಕಿ 2 ರಲ್ಲಿ ಗೆಲುವು ಸಾಧಿಸಿ 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಆರ್​ಸಿಬಿ ಪಯಣ ಲೀಗ್​ ಹಂತದಲ್ಲೇ ಕೊನೆಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ. ಅದಾಗ್ಯೂ ಲೆಕ್ಕಾಚಾರಗಳ ಪ್ರಕಾರ ಪ್ಲೇ ಆಫ್​ಗೇರಲು ಆರ್​ಸಿಬಿಗೆ ಈಗಲೂ ಅವಕಾಶವಿದೆ. ಇದಕ್ಕಾಗಿ ತಂಡ ಉಳಿದ ಎಲ್ಲಾ ಪಂದ್ಯಗಳನ್ನು ಭಾರಿ ಅಂತರದಿಂದ ಗೆಲ್ಲಬೇಕಾಗಿದೆ. ಇತ್ತ ಗುಜರಾತ್ ಟೈಟಾನ್ಸ್ ತಂಡ ಆಡಿರುವ 9 ಪಂದ್ಯಗಳಲ್ಲಿ 4ರಲ್ಲಿ ಗೆದ್ದು 8 ಅಂಕಗಳೊಂದಿಗೆ ಪ್ಲೇಆಫ್​ ರೇಸ್​ನಲ್ಲಿ ತನ್ನ ಸವಾಲನ್ನು ಇನ್ನು ಜೀವಂತವಾಗಿರಿಸಿದೆ. ಹೀಗಾಗಿ ಎರಡೂ ತಂಡಗಳ ನಡುವೆ ಇಂದು ಜಿದ್ದಾಜಿದ್ದಿನ ಹೋರಾಟ ನಡೆಯುವುದು ಖಚಿತ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (Faf du Plessis) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಮುಖಾಮುಖಿ ವರದಿ

ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ದಾಖಲೆಯ ಬಗ್ಗೆ ನಾವು ಮಾತನಾಡುವುದಾದರೆ, ಎರಡೂ ತಂಡಗಳು ಇಲ್ಲಿಯವರೆಗೆ 3 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಗುಜರಾತ್ ತಂಡವು 2 ಬಾರಿ ಗೆದ್ದಿದ್ದರೆ, ಆರ್​ಸಿಬಿ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ, ಎಲ್ಲಾ ಕಣ್ಣುಗಳು ವಿರಾಟ್ ಕೊಹ್ಲಿಯತ್ತ ನೆಟ್ಟಿದ್ದರೆ, ಶುಭಮನ್ ಗಿಲ್ ಅವರಿಂದ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಲಾಗಿದೆ.

GT vs RCB Live Score, IPL 2024: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜಾಕ್ವೆಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಇಂಪ್ಯಾಕ್ಟ್ ಪ್ಲೇಯರ್: ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಹಿಮಾಂಶು ಶರ್ಮಾ, ಆಕಾಶ್ ದೀಪ್, ವೈಶಾಕ್ ವಿಜಯ್​ಕುಮಾರ್.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ.

ಇಂಪ್ಯಾಕ್ಟ್ ಪ್ಲೇಯರ್: ಸಂದೀಪ್ ವಾರಿಯರ್, ಶರತ್ ಬಿಆರ್, ಮಾನವ್ ಸುತಾರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Sun, 28 April 24

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!