AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬುಮ್ರಾ, ರೋಹಿತ್​ ಸಲಹೆಗೆ ಕ್ಯಾರೆ ಅನ್ನದ ಕ್ಯಾಪ್ಟನ್ ಪಾಂಡ್ಯ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 5ನೇ ಪಂದ್ಯದ ಮೂಲಕ ನಾಯಕರಾಗಿ ಪಾದಾರ್ಪಣೆ ಮಾಡಿರುವ ಹಾರ್ದಿಕ್ ಪಾಂಡ್ಯ ಸೋಲಿನ ರುಚಿ ನೋಡಿದರೆ, ಶುಭ್​ಮನ್ ಗಿಲ್ ಗೆಲುವಿನ ಸಿಹಿಯುಂಡಿದ್ದಾರೆ. ಈ ಮೂಲಕ ಐಪಿಎಲ್ 2024 ರಲ್ಲಿ ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡವು ಶುಭಾರಂಭ ಮಾಡಿದೆ.

IPL 2024: ಬುಮ್ರಾ, ರೋಹಿತ್​ ಸಲಹೆಗೆ ಕ್ಯಾರೆ ಅನ್ನದ ಕ್ಯಾಪ್ಟನ್ ಪಾಂಡ್ಯ..!
Mumbai Indians
TV9 Web
| Updated By: ಝಾಹಿರ್ ಯೂಸುಫ್|

Updated on: Mar 25, 2024 | 7:59 AM

Share

ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಮೂಲಕ ಹಾರ್ದಿಕ್ ಪಾಂಡ್ಯ (Hardik Pandya) ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡದ ಪರ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಉತ್ತಮ ಪ್ರದರ್ಶನ ನೀಡಿದ್ದರು. ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಸಾಯಿ 39 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 45 ರನ್ ಬಾರಿಸಿದರು.

ಇನ್ನು ಅಂತಿಮ ಹಂತದಲ್ಲಿ ರಾಹುಲ್ ತಿವಾಠಿಯಾ 22 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು.

ಗುಜರಾತ್ ಟೈಟಾನ್ಸ್ ತಂಡದ ಇನಿಂಗ್ಸ್ ಮುಕ್ತಾಯವಾಗುತ್ತಿದ್ದಂತೆ ಮೈದಾನದಲ್ಲಿ ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಚರ್ಚಿಸುತ್ತಿರುವುದು ಕಾಣಿಸಿತು. ಮೇಲ್ನೋಟಕ್ಕೆ ಪಿಚ್​ ಬಗ್ಗೆಗಿನ ಕುರಿತು ಬುಮ್ರಾ ಹಿಟ್​ಮ್ಯಾನ್ ಹಾಗೂ ಪಾಂಡ್ಯಗೆ ಸಲಹೆ ನೀಡುತ್ತಿದ್ದರು.

ಆದರೆ ಜಸ್​ಪ್ರೀತ್ ಬುಮ್ರಾ ಅವರ ಮಾತುಗಳನ್ನು ರೋಹಿತ್ ಶರ್ಮಾ ತದೇಕಚಿತ್ತದಿಂದ ಆಲಿಸುತ್ತಿದ್ದರೆ, ಇತ್ತ ನಾಯಕ ಹಾರ್ದಿಕ್ ಪಾಂಡ್ಯ ಕ್ಯಾರೆ ಅನ್ನದೇ ಹೊರ ನಡೆದರು. ಇದೀಗ ಕ್ಯಾಪ್ಟನ್ ಪಾಂಡ್ಯರ ಈ ನಡೆಯ ವಿಡಿಯೋ ವೈರಲ್ ಆಗಿದೆ, ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಂದೇ ಆಕ್ರೋಶ ವ್ಯಕ್ತವಾಗುತ್ತಿದೆ.

ಜಸ್​ಪ್ರೀತ್ ಬುಮ್ರಾ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ವಿಡಿಯೋ:

ಸೋತ ಮುಂಬೈ ಇಂಡಿಯನ್ಸ್:

ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ನೀಡಿದ 169 ರನ್​ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ 43 ರನ್ ಬಾರಿಸಿದರೆ, ಯುವ ದಾಂಡಿಗ ಡೆವಾಲ್ಡ್ ಬ್ರೆವಿಸ್ 46 ರನ್​ ಚಚ್ಚಿದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಮುಂಬೈ ಇಂಡಿಯನ್ಸ್​ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್​ಗಳಿಸಿ 6 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: Hardik Pandya: ಹೋಗಿ ಬೌಂಡರಿ ಲೈನ್​ನಲ್ಲಿ ನಿಲ್ಲು: ನಾನಾ? ಹೌದು, ನೀನೇ..!

ಪಾಂಡ್ಯಗೆ ಮೊದಲ ಸೋಲು:

ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಸೋಲಿನೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅತ್ತ ಇದೇ ಪಂದ್ಯದ ಮುಖಾಂತರ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಕಣಕ್ಕಿಳಿದ ಶುಭ್​ಮನ್ ಗಿಲ್ ಗೆಲುವಿನ ಶುಭಾರಂಭ ಮಾಡಿದ್ದಾರೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ