ಅಹದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಮೂಲಕ ಹಾರ್ದಿಕ್ ಪಾಂಡ್ಯ (Hardik Pandya) ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡದ ಪರ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಉತ್ತಮ ಪ್ರದರ್ಶನ ನೀಡಿದ್ದರು. ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಸಾಯಿ 39 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 45 ರನ್ ಬಾರಿಸಿದರು.
ಇನ್ನು ಅಂತಿಮ ಹಂತದಲ್ಲಿ ರಾಹುಲ್ ತಿವಾಠಿಯಾ 22 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು.
ಗುಜರಾತ್ ಟೈಟಾನ್ಸ್ ತಂಡದ ಇನಿಂಗ್ಸ್ ಮುಕ್ತಾಯವಾಗುತ್ತಿದ್ದಂತೆ ಮೈದಾನದಲ್ಲಿ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಚರ್ಚಿಸುತ್ತಿರುವುದು ಕಾಣಿಸಿತು. ಮೇಲ್ನೋಟಕ್ಕೆ ಪಿಚ್ ಬಗ್ಗೆಗಿನ ಕುರಿತು ಬುಮ್ರಾ ಹಿಟ್ಮ್ಯಾನ್ ಹಾಗೂ ಪಾಂಡ್ಯಗೆ ಸಲಹೆ ನೀಡುತ್ತಿದ್ದರು.
ಆದರೆ ಜಸ್ಪ್ರೀತ್ ಬುಮ್ರಾ ಅವರ ಮಾತುಗಳನ್ನು ರೋಹಿತ್ ಶರ್ಮಾ ತದೇಕಚಿತ್ತದಿಂದ ಆಲಿಸುತ್ತಿದ್ದರೆ, ಇತ್ತ ನಾಯಕ ಹಾರ್ದಿಕ್ ಪಾಂಡ್ಯ ಕ್ಯಾರೆ ಅನ್ನದೇ ಹೊರ ನಡೆದರು. ಇದೀಗ ಕ್ಯಾಪ್ಟನ್ ಪಾಂಡ್ಯರ ಈ ನಡೆಯ ವಿಡಿಯೋ ವೈರಲ್ ಆಗಿದೆ, ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಂದೇ ಆಕ್ರೋಶ ವ್ಯಕ್ತವಾಗುತ್ತಿದೆ.
Hardik Pandya gave some advice to Jasprit Bumrah, bumrah asked rohit sharma that this advice is correct or not.🤣🤣💉
Hardik Pandya thinks he’s the captain.!!🤣😭😭#GTvsMI pic.twitter.com/IZFyyBGQPN
— Mehak (@JaatMehak) March 24, 2024
ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ನೀಡಿದ 169 ರನ್ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ 43 ರನ್ ಬಾರಿಸಿದರೆ, ಯುವ ದಾಂಡಿಗ ಡೆವಾಲ್ಡ್ ಬ್ರೆವಿಸ್ 46 ರನ್ ಚಚ್ಚಿದರು. ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ಗಳಿಸಿ 6 ರನ್ಗಳಿಂದ ಸೋಲೊಪ್ಪಿಕೊಂಡಿತು.
ಇದನ್ನೂ ಓದಿ: Hardik Pandya: ಹೋಗಿ ಬೌಂಡರಿ ಲೈನ್ನಲ್ಲಿ ನಿಲ್ಲು: ನಾನಾ? ಹೌದು, ನೀನೇ..!
ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಸೋಲಿನೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅತ್ತ ಇದೇ ಪಂದ್ಯದ ಮುಖಾಂತರ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಕಣಕ್ಕಿಳಿದ ಶುಭ್ಮನ್ ಗಿಲ್ ಗೆಲುವಿನ ಶುಭಾರಂಭ ಮಾಡಿದ್ದಾರೆ.