AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂಬೈ ತಂಡ ಸೇರಿಕೊಂಡ ಹಾರ್ದಿಕ್​; ಕಿಡಿಕಾರಿದ ರೋಹಿತ್ ಫ್ಯಾನ್ಸ್

IPL 2024: ಏಕದಿನ ವಿಶ್ವಕಪ್ ವೇಳೆ ಇಂಜುರಿಗೊಂಡು ಕ್ರಿಕೆಟ್​ನಿಂದ ದೂರ ಉಳಿದಿದ್ದ ಟೀಂ ಇಂಡಿಯಾದ ಆಲ್​ರೌಂಡರ್ ಹಾಗೂ ಮುಂಬೈ ಇಂಡಿಯನ್ಸ್‌ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಐಪಿಎಲ್‌ನಲ್ಲಿ ಸಮರಾಭ್ಯಾಸ ಶುರು ಮಾಡುವ ಸಲುವಾಗಿ ಇಂದು ತನ್ನ ತಂಡವನ್ನು ಕೂಡಿಕೊಂಡಿದ್ದಾರೆ.

IPL 2024: ಮುಂಬೈ ತಂಡ ಸೇರಿಕೊಂಡ ಹಾರ್ದಿಕ್​; ಕಿಡಿಕಾರಿದ ರೋಹಿತ್ ಫ್ಯಾನ್ಸ್
ಹಾರ್ದಿಕ್ ಪಾಂಡ್ಯ
ಪೃಥ್ವಿಶಂಕರ
|

Updated on:Mar 11, 2024 | 7:50 PM

Share

ಏಕದಿನ ವಿಶ್ವಕಪ್ ವೇಳೆ ಇಂಜುರಿಗೊಂಡು ಕ್ರಿಕೆಟ್​ನಿಂದ ದೂರ ಉಳಿದಿದ್ದ ಟೀಂ ಇಂಡಿಯಾದ ಆಲ್​ರೌಂಡರ್ ಹಾಗೂ ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಇದೀಗ ಐಪಿಎಲ್‌ನಲ್ಲಿ (IPL 2024) ಸಮರಾಭ್ಯಾಸ ಶುರು ಮಾಡುವ ಸಲುವಾಗಿ ಇಂದು ತನ್ನ ತಂಡವನ್ನು ಕೂಡಿಕೊಂಡಿದ್ದಾರೆ. ತಂಡದ ಹೊಸ ನಾಯಕನನ್ನು ಫ್ರಾಂಚೈಸಿ ಅದ್ಧೂರಿಯಾಗಿ ಸ್ವಾಗತಿಸಿತು. ಇತ್ತ ನಾಯಕನಾಗಿ ಮೊದಲ ಬಾರಿಗೆ ಮುಂಬೈ ತಂಡವನ್ನು ಸೇರಿಕೊಂಡ ಪಾಂಡ್ಯ, ಮೊದಲು ದೇವರಿಗೆ ಹಾರವನ್ನು ಹಾಕಿದರೆ, ತಂಡದ ಮುಖ್ಯ ಕೋಚ್ ಮಾರ್ಕ್ ಬೌಚರ್ ಕೂಡ ತೆಂಗಿನಕಾಯಿ ಒಡೆದು ದೇವರಿಗೆ ಪೂಜೆ ಸಲ್ಲಿಸಿದರು.

ಕೋಪಗೊಂಡ ರೋಹಿತ್ ಫ್ಯಾನ್ಸ್

ಮುಂಬೈ ಇಂಡಿಯನ್ಸ್ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಅವರ ಸ್ವಾಗತದ ಈ ವೀಡಿಯೊವನ್ನು ಹಂಚಿಕೊಂಡಿದೆ. ಮುಂಬೈ ಇಂಡಿಯನ್ಸ್ ಶಿಬಿರದಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಸ್ವಾಗತಿಸಿದ ರೀತಿಯನ್ನು ನೋಡಿದ ನಂತರ ರೋಹಿತ್ ಶರ್ಮಾ ಅಭಿಮಾನಿಗಳು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ವಿಭಿನ್ನ ಕಾಮೆಂಟ್ ಮಾಡುವ ಮೂಲಕ ಫ್ರಾಂಚೈಸಿಯ ಕಾಲೆಳೆದಿದ್ದಾರೆ.

ರೋಹಿತ್ ಶರ್ಮಾ ಅಭಿಮಾನಿಗಳು ಹಾರ್ದಿಕ್​ಗೆ ನೀಡಿದ ಸ್ವಾಗತವನ್ನು ನಾಟಕವೆಂದು ಕರೆದರೆ, ಇನ್ನು ಕೆಲವರು ಇದು ಮುಂಬೈನ ಗ್ರಾಫ್ ಕುಸಿತಕ್ಕೆ ನಾಂದಿಯಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಹಾಗೆಯೇ ಈ ಇಬ್ಬರನ್ನು ಅಂದರೆ ಮಾರ್ಕ್ ಬೌಚರ್ ಮತ್ತು ಹಾರ್ದಿಕ್ ಪಾಂಡ್ಯರನ್ನು ದೇವರು ಒಟ್ಟಿಗೆ ಸಂತೋಷವಾಗಿ ಇಡಬಾರದು ಎಂದು ಕೆಲವರು ಹೇಳಿದ್ದಾರೆ. ಅದೇ ಸಮಯದಲ್ಲಿ, ಹಾರ್ದಿಕ್ ಅವರ ಕೆಲವು ಅಭಿಮಾನಿಗಳು ಈ ಪೋಸ್ಟ್‌ಗೆ ಕಾಮೆಂಟ್ ಮಾಡುತ್ತಿರುವುದು ಕಂಡುಬಂದಿದೆ.

IPL 2024: ಇನ್ಸ್​ಟಾಗ್ರಾಮ್​ನಲ್ಲಿ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿದ್ರಾ ರೋಹಿತ್-ಹಾರ್ದಿಕ್?

ಮುಂಬೈ ಇಂಡಿಯನ್ಸ್ ವೇಳಾಪಟ್ಟಿ

ಮುಂಬೈ ಇಂಡಿಯನ್ಸ್ ತಂಡ ಮಾರ್ಚ್ 24 ರಿಂದ ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಮ್ಮ ಹಳೆಯ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದ್ದಾರೆ. ಉಳಿದಂತೆ ಮೊದಲಾರ್ಧದ ಐಪಿಎಲ್​ನಲ್ಲಿ ಮುಂಬೈ ತಂಡದ ಸಂಪೂರ್ಣ ವೇಳಾಪಟ್ಟಿ ಹೀಗಿದೆ.

  • ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟಾನ್ಸ್, ಮಾರ್ಚ್ 24 (ಅಹಮದಾಬಾದ್)
  • ಮುಂಬೈ ಇಂಡಿಯನ್ಸ್ vs ಸನ್ ರೈಸರ್ಸ್ ಹೈದರಾಬಾದ್, ಮಾರ್ಚ್ 27 (ಹೈದರಾಬಾದ್)
  • ಮುಂಬೈ ಇಂಡಿಯನ್ಸ್ vs ರಾಜಸ್ಥಾನ ರಾಯಲ್ಸ್, ಏಪ್ರಿಲ್ 1 (ಮುಂಬೈ)
  • ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್, ಏಪ್ರಿಲ್ 7 (ಮುಂಬೈ)

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೂವಿಸ್, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಜೇಸನ್ ಬೆಹ್ರೆಂಡಾರ್ಫ್, ರೊಮಾರಿಯೋ ಶೆಫರ್ಡ್, ಜೆರಾಲ್ಡ್ ಕೋಟ್ಜಿ, ದಿಲ್ಶನ್ ಮಧುಶಂಕ, ಶ್ರೇಯಸ್ ಗೋಪಾಲ್, ನುವಾನ್ ತುಷಾರ, ನಮನ್ ಧೀರ್, ಅನ್ಶುಲ್ ಕಾಂಬೋಜ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Mon, 11 March 24

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ