IPL 2024: ಸತತ ಸೋಲು; ದೇವರ ಮೊರೆ ಹೋದ ಹಾರ್ದಿಕ್ ಪಾಂಡ್ಯ; ವಿಡಿಯೋ ನೋಡಿ

IPL 2024: ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯ ದೇವರ ಮೊರೆ ಹೋಗಿದ್ದಾರೆ. ಇಂದು ಗುಜರಾತ್‌ನ ಪ್ರಭಾಸ್ ಪಟಾನ್‌ನಲ್ಲಿರುವ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಹಾರ್ದಿಕ್ ಪಾಂಡ್ಯ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

IPL 2024: ಸತತ ಸೋಲು; ದೇವರ ಮೊರೆ ಹೋದ ಹಾರ್ದಿಕ್ ಪಾಂಡ್ಯ; ವಿಡಿಯೋ ನೋಡಿ
ಹಾರ್ದಿಕ್ ಪಾಂಡ್ಯ
Follow us
ಪೃಥ್ವಿಶಂಕರ
|

Updated on:Apr 05, 2024 | 9:57 PM

ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ದೇವರ ಮೊರೆ ಹೋಗಿದ್ದಾರೆ. ಇಂದು ಗುಜರಾತ್‌ನ ಪ್ರಭಾಸ್ ಪಟಾನ್‌ನಲ್ಲಿರುವ ಸೋಮನಾಥ ದೇವಸ್ಥಾನಕ್ಕೆ (Somnath Temple) ಭೇಟಿ ನೀಡಿದ ಹಾರ್ದಿಕ್ ಪಾಂಡ್ಯ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಪಾಂಡ್ಯ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ವೀಡಿಯೊವನ್ನು ಸೋಮನಾಥ ದೇವಾಲಯದ ಟ್ರಸ್ಟ್ ಹಂಚಿಕೊಂಡಿದೆ. ಏಪ್ರಿಲ್ 1 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯವನ್ನಾಡಿದ್ದ ಮುಂಬೈ ಇಂಡಿಯನ್ಸ್ (Mumbai Indians) ತಂಡ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಮುಂದಿನ ಪಂದ್ಯಕ್ಕೆ ಸಾಕಷ್ಟು ಸಮಯವಿದ್ದು, ಪ್ರಸ್ತುತ ಮುಂಬೈ ತಂಡ ಮೋಜು ಮಸ್ತಿಯಲ್ಲಿ ತೊಡಗಿದೆ. ಈ ನಡುವೆ ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಏಕಾಂಗಿಯಾಗಿ ದೇವಾಲಯಕ್ಕೆ ಭೇಟಿ ನೀಡಿ ತಂಡದ ಗೆಲುವಿಗಾಗಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ವಾಸ್ತವವಾಗಿ ಐಪಿಎಲ್​ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ ಕಳೆದ ಕೆಲವು ಆವೃತ್ತಿಗಳಿಂದ ನಿರಸ ಪ್ರದರ್ಶನ ನೀಡುತ್ತಿದೆ. ಹೀಗಾಗಿ 17ನೇ ಆವೃತ್ತಿ ಆರಂಭಕ್ಕೂ ಮುನ್ನ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಿದ್ದ ಮುಂಬೈ, ಯಶಸ್ವಿ ನಾಯಕ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ ಗುಜರಾತ್ ತಂಡವನ್ನು ಸತತ ಎರಡು ಆವೃತ್ತಿಗಳಲ್ಲಿ ಫೈನಲ್​ಗೇರಿಸಿದ್ದ ಹಾರ್ದಿಕ್​ ಪಾಂಡ್ಯರನ್ನು ಟ್ರೇಡಿಂಗ್ ಮಾಡಿಕೊಂಡು ಅವರಿಗೆ ನಾಯಕತ್ವ ನೀಡಿತ್ತು. ಇದು ರೋಹಿತ್ ಅಭಿಮಾನಿಗಳನ್ನು ಕೆರಳಿಸಿತ್ತು. ಹೀಗಾಗಿ ಪಾಂಡ್ಯರನ್ನು ನಿರಂತರವಾಗಿ ನಿಂದಿಸಲಾಗುತ್ತಿತ್ತು, ಇದೆಲ್ಲ ಸಾಲದೆಂಬಂತೆ ಪಾಂಡ್ಯ ನಾಯಕತ್ವದಲ್ಲೂ ಮುಂಬೈ ತಂಡ ಇದುವರೆಗೆ ಒಂದೇ ಒಂದು ಗೆಲುವು ದಾಖಲಿಸಿಲ್ಲ. ಹೀಗಾಗಿ ಮುಂದಿನ ಪಂದ್ಯಕ್ಕೂ ಮುನ್ನ ಹಾರ್ದಿಕ್ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಗೆಲುವಿಗಾಗಿ ಪೂಜೆ ಸಲ್ಲಿಸಿದ್ದಾರೆ.

ಹಾರ್ದಿಕ್ ಪೂಜೆ ಸಲ್ಲಿಸುತ್ತಿರುವ ವಿಡಿಯೋ

ಮುಂಬೈ ನಿರಸ ಪ್ರದರ್ಶನ

ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ಇದುವರೆಗಿನ ಪ್ರದರ್ಶನ ಸಾಕಷ್ಟು ನಿರಾಶಾದಾಯಕವಾಗಿದೆ. ತಂಡ ಇಲ್ಲಿಯವರೆಗೆ 3 ಪಂದ್ಯಗಳನ್ನು ಆಡಿದ್ದು, ಎಲ್ಲದರಲ್ಲೂ ಸೋಲು ಕಂಡಿದೆ. ಐಪಿಎಲ್ 2024 ರ ತನ್ನ ಮೊದಲ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಎದುರು 6 ವಿಕೆಟ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಲೀಗ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 31 ರನ್‌ಗಳಿಂದ ಸೋಲಿಸಿತು. ಅಲ್ಲದೆ ಇದೇ ಪಂದ್ಯದಲ್ಲಿ ಮುಂಬೈ ವಿರುದ್ಧ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ದಾಖಲಾದ ದಾಖಲೆ ನಿರ್ಮಾಣಗೊಂಡಿತ್ತು. ಇನ್ನು ಆಡಿದ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಹಾರ್ದಿಕ್ ಪಡೆಯನ್ನು 6 ವಿಕೆಟ್‌ಗಳಿಂದ ಸೋಲಿಸಿತ್ತು.

ಹಾರ್ದಿಕ್ ಆಟವೂ ಸಪ್ಪೆಯಾಗಿದೆ

ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಹಾರ್ದಿಕ್ ಪಾಂಡ್ಯ ಅವರ ಪ್ರದರ್ಶನವೂ ಸಪ್ಪೆಯಾಗಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 4 ಎಸೆತಗಳಲ್ಲಿ 11 ರನ್ ಬಾರಿಸಿದ್ದ ಪಾಂಡ್ಯ, ಇದಲ್ಲದೇ 3 ಓವರ್ ಗಳಲ್ಲಿ 30 ರನ್ ವ್ಯಯಿಸಿದ್ದರು. ಈ ಅವಧಿಯಲ್ಲಿ ಅವರು ಯಾವುದೇ ಯಶಸ್ಸನ್ನು ಪಡೆಯಲಿಲ್ಲ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಾಂಡ್ಯ 4 ಓವರ್‌ಗಳಲ್ಲಿ 46 ರನ್ ನೀಡಿ ಬ್ಯಾಟಿಂಗ್​ನಲ್ಲಿ 20 ಎಸೆತಗಳಲ್ಲಿ 24 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು. ರಾಜಸ್ಥಾನ ರಾಯಲ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಬೌಲಿಂಗ್ ಮಾಡದ ಪಾಂಡ್ಯ ಬ್ಯಾಟಿಂಗ್​ನಲ್ಲಿ 21 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 34 ರನ್ ಬಾರಿಸಿದ್ದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Fri, 5 April 24

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ