ಅಧಿಕೃತವಾಗಿ ಮುಂಬೈ ಸೇರಿದ ಹಾರ್ದಿಕ್ ಪಾಂಡ್ಯ; ಆರ್​ಸಿಬಿಗೆ ಕಾಲಿಟ್ಟ ಆಸೀಸ್ ಆಲ್​ರೌಂಡರ್ ಗ್ರೀನ್..!

IPL 2024: ಎರಡು ವರ್ಷಗಳ ಕಾಲ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ 5 ಬಾರಿಯ ಚಾಂಪಿಯನ್ ಮುಂಬೈ ತಂಡಕ್ಕೆ ಮರಳಿದ್ದಾರೆ. ಹಾಗೆಯೇ ಮುಂಬೈ ತಂಡದಲ್ಲಿದ್ದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್​ರೌಂಡರ್ ಕ್ಯಾಮರೂನ್ ಗ್ರೀನ್ ಆರ್​ಸಿಬಿ ಪಾಲಾಗಿದ್ದಾರೆ.

ಅಧಿಕೃತವಾಗಿ ಮುಂಬೈ ಸೇರಿದ ಹಾರ್ದಿಕ್ ಪಾಂಡ್ಯ; ಆರ್​ಸಿಬಿಗೆ ಕಾಲಿಟ್ಟ ಆಸೀಸ್ ಆಲ್​ರೌಂಡರ್ ಗ್ರೀನ್..!
ಹಾರ್ದಿಕ್ ಪಾಂಡ್ಯ, ಕ್ಯಾಮರೂನ್ ಗ್ರೀನ್
Follow us
ಪೃಥ್ವಿಶಂಕರ
|

Updated on:Nov 27, 2023 | 2:32 PM

ಹಾರ್ದಿಕ್ ಪಾಂಡ್ಯ (Hardik Pandya) ವಿಚಾರದಲ್ಲಿ ಕೆಲವು ದಿನಗಳಿಂದ ಎದ್ದಿದ್ದ ಎಲ್ಲಾ ವದಂತಿಗಳಿಗೆ ಇಂದು ಅಂತಿಮ ತೆರೆ ಬಿದ್ದಿದೆ. ಎರಡು ವರ್ಷಗಳ ಕಾಲ ಗುಜರಾತ್ ಟೈಟಾನ್ಸ್ (Gujarat Titans) ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ,  ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ (Mumbai Indians) ತಂಡವನ್ನು ಮತ್ತೊಮ್ಮೆ ಸೇರಿಕೊಂಡಿದ್ದಾರೆ. ಹಾಗೆಯೇ ಮುಂಬೈ ತಂಡದಲ್ಲಿದ್ದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್​ರೌಂಡರ್ ಕ್ಯಾಮರೂನ್ ಗ್ರೀನ್ ಆರ್​ಸಿಬಿ (RCB) ಪಾಲಾಗಿದ್ದಾರೆ. ಈ ವಿಚಾರವನ್ನು ಸ್ವತಃ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯೇ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

2022 ರ ಐಪಿಎಲ್​ಗೂ ಮುನ್ನ ನಡೆದ ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡ ಹಾರ್ದಿಕ್ ಪಾಂಡ್ಯ ಅವರನ್ನು 15 ಕೋಟಿ ರೂ.ಗೆ ಖರೀದಿಸಿತ್ತು. ಆ ಬಳಿಕ ಗುಜರಾತ್ ತಂಡದ ನಾಯಕತ್ವವಹಿಸಿಕೊಂಡ ಹಾರ್ದಿಕ್ ತಮ್ಮ ನಾಯಕತ್ವದಲ್ಲಿ, ಗುಜರಾತ್ ಟೈಟಾನ್ಸ್ ತಂಡವನ್ನು ಸತತ ಎರಡು ಆವೃತ್ತಿಗಳಿಗೆ ಫೈನಲ್​ಗೆ ಕೊಂಡೊಯ್ದಿದ್ದರು. ಇದರಲ್ಲಿ ತಂಡವು 2022ರ ಐಪಿಎಲ್​ನಲ್ಲಿ ಪ್ರಶಸ್ತಿ ಕೂಡ ಗೆದ್ದಿತ್ತು.

ವಾಸ್ತವವಾಗಿ ಎಲ್ಲಾ 10 ಫ್ರಾಂಚೈಸಿಗಳಿಗೆ ತಮ್ಮ ಬಳಿ ಉಳಿಸಿಕೊಳ್ಳುವ ಹಾಗೂ ತಂಡದಿಂದ ಕೈಬಿಡುವ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಲು ನಿನ್ನೆ ಅಂದರೆ ನವೆಂಬರ್ 26 ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಸಲ್ಲಿಸಿದ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಗುಜರಾತ್ ತಂಡದಲ್ಲಿಯೇ ಉಳಿದುಕೊಂಡಿದ್ದರು. ಆದರೆ ಟ್ರೇಡಿಂಗ್ ವಿಂಡೋ ದಿನಾಂಕವನ್ನು ವಿಸ್ತರಿಸಿದ್ದರಿಂದ ಪಾಂಡ್ಯರನ್ನು ಮುಂಬೈ ಫ್ರಾಂಚೈಸಿ ಇಂದು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

2025 ರಲ್ಲಿ ‘ಮೆಗಾ ಹರಾಜು’ ನಡೆಯಲಿದ್ದು, ಪ್ರತಿ ಫ್ರಾಂಚೈಸಿಯು ಯುವ ಆಟಗಾರರೊಂದಿಗೆ ಹೊಸ ತಂಡವನ್ನು ನಿರ್ಮಿಸಲು ಪ್ರಯತ್ನಿಸುತ್ತಿರುವುದರಿಂದ ಭವಿಷ್ಯದ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಮುಂಬೈ ತಂಡದಲ್ಲಿ ಹಾರ್ದಿಕ್ ಜರ್ನಿ

ಹಾರ್ದಿಕ್ ಪಾಂಡ್ಯ ಅವರನ್ನು 2015 ರಲ್ಲಿ ಮುಂಬೈ ಇಂಡಿಯನ್ಸ್ ಖರೀದಿಸಿತ್ತು. ಇದರ ನಂತರ, ಅವರು ಮುಂಬೈ ಇಂಡಿಯನ್ಸ್‌ ತಂಡ ನಾಲ್ಕು ಐಪಿಎಲ್ ಪ್ರಶಸ್ತಿಗಳನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾರ್ದಿಕ್ ಅತ್ಯುತ್ತಮ ಆಲ್‌ರೌಂಡರ್‌ ಆಗಿದ್ದು, ಅತ್ಯುತ್ತಮ ಬೌಲಿಂಗ್‌ ಜೊತೆಗೆ ಬ್ಯಾಟಿಂಗ್‌ನಲ್ಲೂ ಅಬ್ಬರಿಸುವ ಸಾಮಥ್ಯ್ರ ಹೊಂದಿದ್ದಾರೆ. ಇದುವರೆಗೆ 123 ಐಪಿಎಲ್ ಪಂದ್ಯಗಳನ್ನಾಡಿರುವ ಹಾರ್ದಿಕ್, 2309 ರನ್ ಜೊತೆಗೆ 53 ವಿಕೆಟ್ ಕೂಡ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:09 pm, Mon, 27 November 23

ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ