AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇನ್ಸ್​ಟಾಗ್ರಾಮ್​ನಲ್ಲಿ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿದ್ರಾ ರೋಹಿತ್-ಹಾರ್ದಿಕ್?

IPL 2024: ಐಪಿಎಲ್ 2024 ರ ಮೊದಲು ಮುಂಬೈ ಇಂಡಿಯನ್ಸ್‌ ತಂಡದ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡಲಾರಂಭಿಸಿವೆ. ಈಗ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಇನ್​ಸ್​ಟ್ರಾಗ್ರಾಂನಿಂದ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಆರೋಪ ಕೇಳಿ ಬರುತ್ತಿದ್ದರೂ ಇದರ ಹಿಂದೆ ಎಷ್ಟು ಸತ್ಯಾಂಶವಿದೆ ಎಂಬುದು ಯಾರಿಗೂ ತಿಳಿದಿಲ್ಲ.

IPL 2024: ಇನ್ಸ್​ಟಾಗ್ರಾಮ್​ನಲ್ಲಿ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿದ್ರಾ ರೋಹಿತ್-ಹಾರ್ದಿಕ್?
ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ
ಪೃಥ್ವಿಶಂಕರ
| Edited By: |

Updated on:Feb 14, 2024 | 3:06 PM

Share

2024 ರ ಐಪಿಎಲ್ (IPL 2024) ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್ (Mumbai Indians) ಫ್ರಾಂಚೈಸ್ ತಂಡದಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. ಅದರಂತೆ ರೋಹಿತ್ ಶರ್ಮಾ (Rohit Sharma) ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಅವರಿಗೆ ಜವಾಬ್ದಾರಿ ನೀಡಲಾಗಿದೆ. ವಾಸ್ತವವಾಗಿ ಕಳೆದೆರಡು ಆವೃತ್ತಿಗಳಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವವಹಿಸಿಕೊಂಡಿದ್ದ ಪಾಂಡ್ಯರನ್ನು ಮುಂಬೈ ತಂಡಕ್ಕೆ ಟ್ರೇಡ್ ಮಾಡಿಕೊಳ್ಳಲಾಗಿತ್ತು. ಆ ಬಳಿಕ ಅವರಿಗೆ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಗಿತ್ತು. ತಂಡದ ಆಡಳಿತ ಮಂಡಳಿಯ ಈ ನಿರ್ಧಾರಕ್ಕೆ ರೋಹಿತ್ ಶರ್ಮಾ ಅಭಿಮಾನಿಗಳು ಕೆಂಡಕಾರಿದ್ದರು. ಇದಾದ ನಂತರ ಹಾರ್ದಿಕ್ ಪಾಂಡ್ಯ ಹಾಗೂ ರೋಹಿತ್ ಶರ್ಮಾ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಯೂ ಹರಿದಾಡಿತ್ತು. ಇದೀಗ ಹೊಸ ಗಾಳಿ ಸುದ್ದಿಯೊಂದು ಹರಿದಾಡುತ್ತಿದ್ದು, ರೋಹಿತ್ ಮತ್ತು ಹಾರ್ದಿಕ್ ಪಾಂಡ್ಯ ತಮ್ಮ ಇನ್‌ಸ್ಟಾಗ್ರಾಮ್‌ನಿಂದ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ವಾಸ್ತವವಾಗಿ, ಹಾರ್ದಿಕ್ ಮತ್ತು ರೋಹಿತ್ ಇನ್‌ಸ್ಟಾಗ್ರಾಮ್‌ನಿಂದ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಳ್ಳಲಾಗುತ್ತಿದೆ. ಈ ಹೇಳಿಕೆಯ ಸತ್ಯಾಸತ್ಯತೆ ತಿಳಿಯಲು, ನಾವು ಅವರಿಬ್ಬರ ಪ್ರೊಫೈಲ್‌ಗಳನ್ನು ಪರಿಶೀಲಿಸಿದ್ದೇವು. ಅದರಲ್ಲಿ ತಿಳಿದುಬಂದಂತೆ ರೋಹಿತ್ ಮತ್ತು ಹಾರ್ದಿಕ್ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಆದರೆ ಈ ಹಿಂದೆ ಇಬ್ಬರೂ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿದ್ದರೋ, ಇಲ್ಲವೋ ಗೊತ್ತಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಈ ಬಗ್ಗೆ ಭಾರಿ ಚರ್ಚೆ ಆರಂಭವಾಗಿದೆ.

ಮುಂಬೈ ತೊರೆಯುತ್ತಾರಾ ರೋಹಿತ್?

ಇದಲ್ಲದೆ ಕಳೆದ ಹಲವಾರು ದಿನಗಳಿಂದ ರೋಹಿತ್ ಶರ್ಮಾ ಐಪಿಎಲ್ 2024 ರ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ವರದಿಯಾಗಿದೆ. ವಾಸ್ತವವಾಗಿ, ಮುಂಬೈ ಇಂಡಿಯನ್ಸ್‌ನ ನಾಯಕತ್ವ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಿದ್ದಕ್ಕಾಗಿ ಅವರ ಪತ್ನಿ ರಿತಿಕಾ ಸಜ್ದೆ ಕೂಡ ತುಂಬಾ ನಿರಾಶೆಗೊಂಡಿದ್ದಾರೆ. ಇದೀಗ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಇನ್‌ಸ್ಟಾಗ್ರಾಮ್‌ನಿಂದ ಅನ್‌ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಆದರೆ ಈ ವಿಷಯಗಳಲ್ಲಿ ಎಷ್ಟು ಸತ್ಯವಿದೆ ಎಂಬುದು ಯಾರಿಗೂ ತಿಳಿದಿಲ್ಲ.

ಹಾರ್ದಿಕ್ ಐಪಿಎಲ್ ವೃತ್ತಿ ಬದುಕು

ರೋಹಿತ್ ಸುದೀರ್ಘ ಸಮಯದವರೆಗೆ ಮುಂಬೈ ತಂಡದ ನಾಯಕತ್ವ ನಿರ್ವಹಿಸಿ ತಂಡವನ್ನು ಪ್ರಶಸ್ತಿಯತ್ತ ಮುನ್ನಡೆಸಿದ್ದರು ಎಂಬುದು ಗಮನಾರ್ಹ. ಆದರೆ ತಂಡದ ಮ್ಯಾನೇಜ್‌ಮೆಂಟ್ ಈಗ ಪಾಂಡ್ಯಗೆ ನಾಯಕನ ಸ್ಥಾನ ನೀಡಿದೆ. ಈ ಹಿಂದೆ ಹಾರ್ದಿಕ್ ಗುಜರಾತ್ ಟೈಟಾನ್ಸ್ ಪರ ಆಡಿದ್ದು, ಅಲ್ಲಿಯೂ ನಾಯಕತ್ವಹಿಸುತ್ತಿದ್ದರು. ಹಾರ್ದಿಕ್ ನಾಯಕತ್ವದಲ್ಲಿ ಗುಜರಾತ್ ಅದ್ಭುತ ಪ್ರದರ್ಶನ ನೀಡಿದಲ್ಲದೆ ಒಮ್ಮೆ ಐಪಿಎಲ್ ಪ್ರಶಸ್ತಿಯನ್ನೂ ಗೆದ್ದಿತ್ತು.ಅಲ್ಲದೆ ಈ ವೇಳೆ ಹಾರ್ದಿಕ್ ಅವರ ವೈಯಕ್ತಿಕ ಪ್ರದರ್ಶನವೂ ಉತ್ತಮವಾಗಿತ್ತು. ಐಪಿಎಲ್‌ನಲ್ಲಿ ಇದುವರೆಗೆ 123 ಪಂದ್ಯಗಳನ್ನು ಆಡಿರುವ ಪಾಂಡ್ಯ 2309 ರನ್ ಕಲೆಹಾಕುವುದರೊಂದಿಗೆ 53 ವಿಕೆಟ್ ಸಹ ಕಬಳಿಸಿದ್ದಾರೆ.

ರೋಹಿತ್ ಐಪಿಎಲ್ ವೃತ್ತಿ ಜೀವನ

ರೋಹಿತ್ ಶರ್ಮಾ ಬಗ್ಗೆ ಮಾತನಾಡುವುದಾದರೆ, ಅವರು ಐಪಿಎಲ್‌ನಲ್ಲಿ ಇದುವರೆಗೆ 243 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 42 ಅರ್ಧಶತಕಗಳನ್ನೊಳಗೊಂಡಂತೆ 6211 ರನ್ ಗಳಿಸಿದ್ದಾರೆ. ಇದರಲ್ಲಿ ಅವರ ಅತ್ಯುತ್ತಮ ಐಪಿಎಲ್ ಸ್ಕೋರ್ 109 ರನ್. ಬೌಲಿಂಗ್‌ನಲ್ಲೂ ಕೈಚೆಳಕ ತೋರಿರುವ ರೋಹಿತ್ ಐಪಿಎಲ್‌ನಲ್ಲಿ 15 ವಿಕೆಟ್ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Thu, 8 February 24