IPL 2024: ಮೈದಾನಕ್ಕೆ ನುಗ್ಗಿದ ನಾಯಿ: ಹಾರ್ದಿಕ್ ಹೆಸರು ಕೂಗಿದ ಅಭಿಮಾನಿಗಳು: ವಿಡಿಯೋ ವೈರಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) 5ನೇ ಪಂದ್ಯದ ವೇಳೆ ನಾಯಿಯೊಂದು ಮೈದಾನಕ್ಕೆ ನುಗ್ಗಿದೆ. ಇದರಿಂದ ಕೆಲ ಕ್ಷಣಗಳ ಕಾಲ ಪಂದ್ಯಕ್ಕೆ ಅಡಚಣೆಯುಂಟಾಯಿತು. ಇತ್ತ ನಾಯಿ ಮೈದಾನದ ಸುತ್ತಲೂ ಓಡುತ್ತಿದ್ದರೆ, ಅತ್ತ ಸ್ಟೇಡಿಯಂನಲ್ಲಿ ಹಾರ್ದಿಕ್ ಹೆಸರು ಮೊಳಗಲಾರಂಭಿಸಿತು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

IPL 2024: ಮೈದಾನಕ್ಕೆ ನುಗ್ಗಿದ ನಾಯಿ: ಹಾರ್ದಿಕ್ ಹೆಸರು ಕೂಗಿದ ಅಭಿಮಾನಿಗಳು: ವಿಡಿಯೋ ವೈರಲ್
Hardik Pandya
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 25, 2024 | 2:03 PM

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 5ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ (Hardik Pandya) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಇದರ ನಡುವೆ  ಮೈದಾನಕ್ಕೆ ನುಗ್ಗಿದ ನಾಯಿಯೊಂದನ್ನು ನೋಡಿದ ಪ್ರೇಕ್ಷಕರಲ್ಲಿ ಕೆಲವರು ಹಾರ್ದಿಕ್ ಪಾಂಡ್ಯರ ಹೆಸರನ್ನು ಕೂಗಲಾರಂಭಿಸಿದರು.

ನಾಯಿ ಮೈದಾನಕ್ಕೆ ಓಡಿ ಬರುತ್ತಿದ್ದಂತೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಕೆಲವರು ಹಾರ್ದಿಕ್…ಹಾರ್ದಿಕ್…ಹಾರ್ದಿಕ್ ಎಂದು ಕೂಗಿದರು. ಇದೀಗ ಅಹಮದಾಬಾದ್​ ಸ್ಟೇಡಿಯಂಗೆ ನುಗ್ಗಿದ ನಾಯಿಯ ವಿಡಿಯೋ ವೈರಲ್ ಆಗಿದ್ದು, ಪಾಂಡ್ಯ ಹಾಗೂ ರೋಹಿತ್ ಶರ್ಮಾ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ ಏರ್ಪಟ್ಟಿದೆ.

ಮೈದಾನಕ್ಕೆ ನುಗ್ಗಿದ ನಾಯಿಯ ವಿಡಿಯೋ:

ರೋಹಿತ್ ಶರ್ಮಾ ಫ್ಯಾನ್ಸ್ ಆಕ್ರೋಶ:

ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಪಾದಾರ್ಪಣೆ ಮಾಡಿದ್ದಾರೆ. ಆದರೆ ಇತ್ತ ರೋಹಿತ್ ಶರ್ಮಾ ಅಭಿಮಾನಿಗಳು ಪಾಂಡ್ಯರನ್ನು ತನ್ನ ನೆಚ್ಚಿನ ತಂಡದ ನಾಯಕನಾಗಿ ಒಪ್ಪಿಕೊಳ್ಳಲು ಸಿದ್ಧರಿಲ್ಲ. ಇದೇ ಕಾರಣದಿಂದಾಗಿ ಪಂದ್ಯದ ಆರಂಭದಿಂದಲೇ ಹಾರ್ದಿಕ್ ಪಾಂಡ್ಯರನ್ನು ಅಪಹಾಸ್ಯ ಮಾಡುತ್ತಿದ್ದರು.

ಇನ್ನು ನಾಯಿ ಮೈದಾನಕ್ಕೆ ನುಗ್ಗಿದ ಸಂದರ್ಭವನ್ನು ಬಳಸಿಕೊಂಡ ಕೆಲ ಕಿಡಿಗೇಡಿಗಳು ಹಾರ್ದಿಕ್ ಪಾಂಡ್ಯರ ಹೆಸರನ್ನು ಕೂಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಿಗೆ ಮುಜುಗರ ಉಂಟು ಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ಇದ್ಯಾವುದನ್ನೂ ಲೆಕ್ಕಿಸದೇ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದರು.

ದಕ್ಕದ ಗೆಲುವು:

ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿರುವ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲೇ ಸೋಲುಂಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು.

ಇದನ್ನೂ ಓದಿ: IPL 2024: ಈ 4 ತಂಡಗಳು ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದ ರಾಬಿನ್ ಉತ್ತಪ್ಪ

ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್​ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 6 ರನ್​ಗಳ ಜಯ ಸಾಧಿಸಿ ಗುಜರಾತ್ ಟೈಟಾನ್ಸ್ ತಂಡವು ಶುಭಾರಂಭ ಮಾಡಿದೆ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?