IPL 2024: ಈ ಬಾರಿಯಾದರೂ RCB ಕಪ್ ಗೆಲ್ಲಲಿ: ಸುರೇಶ್ ರೈನಾ

| Updated By: ಝಾಹಿರ್ ಯೂಸುಫ್

Updated on: Feb 28, 2024 | 11:34 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಸದ್ಯ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದ್ದು, ಲೋಕಸಭಾ ಚುನಾವಣಾ ದಿನಾಂಕ ನಿಗದಿಯಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಘೋಷಿಸಲಾಗುತ್ತದೆ.

IPL 2024: ಈ ಬಾರಿಯಾದರೂ RCB ಕಪ್ ಗೆಲ್ಲಲಿ: ಸುರೇಶ್ ರೈನಾ
Virat Kohli- Suresh Raina
Follow us on

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಂದು ಶುರುವಾಗಲಿರುವ ಐಪಿಎಲ್ ಸೀಸನ್-17 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಇತ್ತ ಐಪಿಎಲ್ ವೇಳಾಫಟ್ಟಿ ಪ್ರಕಟವಾದ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಸಲ ಕಪ್ ಗೆಲ್ಲುವುದನ್ನು ಎದುರು ನೋಡುತ್ತಿದ್ದೇನೆ ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಆರ್‌ಸಿಬಿ ಟ್ರೋಫಿಯನ್ನು ಗೆಲ್ಲಬೇಕೆಂದು ನಾನು ಬಯಸುತ್ತೇನೆ. ಈ ಕಾಯುವಿಕೆಯ ಸಮಯ ಮೀರಿದೆ ಎಂದೇ ಹೇಳಬಹುದು. ಕಳೆದ ಸೀಸನ್‌ನಲ್ಲಿ ಸಿಎಸ್‌ಕೆ ಗೆದ್ದಿದೆ. ಆದರೆ ಈ ವರ್ಷ ಇದುವರೆಗೆ ಕಪ್ ಗೆಲ್ಲದ ತಂಡ ಚಾಂಪಿಯನ್ ಪಟ್ಟಕ್ಕೇರಬೇಕು ಎಂದು ನಾನು ಬಯಸುತ್ತೇನೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಕಳೆದ 16 ಸೀಸನ್​ಗಳಿಂದಲೂ ಕಠಿಣ ಪರಿಶ್ರಮಪಟ್ಟಿದ್ದಾರೆ. ಹೀಗಾಗಿ ಈ ಬಾರಿ ಕೊಹ್ಲಿ ಮತ್ತು ಆರ್​ಸಿಬಿ ತಂಡ ಕಪ್ ಗೆಲ್ಲಲು ಅರ್ಹರು ಎಂದು ನಾನು ಭಾವಿಸುತ್ತೇನೆ. ಅದರಂತೆ ಈ ಸಲವಾದರೂ ಆರ್​ಸಿಬಿ ಚಾಂಪಿಯನ್ ಪಟ್ಟಕ್ಕೇರಲಿ ಎಂದು ಸುರೇಶ್ ರೈನಾ ಹೇಳಿದರು.

ಮೂರು ಬಾರಿ ಎಡವಿದ ಆರ್​ಸಿಬಿ:

  • ಐಪಿಎಲ್​​ನಲ್ಲಿ ಟ್ರೋಫಿ ಗೆಲ್ಲುವ ಆರ್​ಸಿಬಿ ತಂಡದ ಕನಸು ಮುಂದುವರೆದಿದೆ. ಕಳೆದ 16 ವರ್ಷಗಳಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಅಂತಿಮ ಹಂತದಲ್ಲಿ ಎಡವಿತ್ತು.

 

  • 2009 ರಲ್ಲಿ ಆರ್​ಸಿಬಿ ತಂಡವು ಅನಿಲ್ ಕುಂಬ್ಳೆ ನಾಯಕತ್ವದಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 6 ರನ್​ಗಳಿಂದ ಸೋತು ಟ್ರೋಫಿಗೆ ಮುತ್ತಿಕ್ಕುವ ಅವಕಾಶ ಕಳೆದುಕೊಂಡಿತು.

 

  • ಇದಾದ ಬಳಿಕ ಆರ್​ಸಿಬಿ ಡೇನಿಯಲ್ ವೆಟ್ಟೋರಿ ನಾಯಕತ್ವದಲ್ಲಿ 2011ರಲ್ಲಿ ಫೈನಲ್ ಆಡಿತ್ತು. ಅಂದು ಸಿಎಸ್​ಕೆ ವಿರುದ್ಧ 58 ರನ್​ಗಳಿಂದ ಸೋತು ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟಕ್ಕೇರುವ ಅವಕಾಶವನ್ನು ಆರ್​ಸಿಬಿ ಕೈಚೆಲ್ಲಿಕೊಂಡಿತು.

 

  • ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಫೈನಲ್ ಪ್ರವೇಶಿಸಿತು. ಎಸ್​ಆರ್​ಹೆಚ್​ ವಿರುದ್ಧದ ಫೈನಲ್ ಪಂದ್ಯದಲ್ಲಿ ಕೇವಲ 8 ರನ್​ಗಳಿಂದ ಪರಾಜಯಗೊಳ್ಳುವ ಮೂಲಕ ಆರ್​ಸಿಬಿ ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶ ಕಳೆದುಕೊಂಡಿತು.

ಇದೀಗ ಆರ್​ಸಿಬಿ 17ನೇ ಸೀಸನ್​ ಆರಂಭಕ್ಕೆ ಸಜ್ಜಾಗಿ ನಿಂತಿದೆ. ಈ ಬಾರಿಯಾದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವ ಮೂಲಕ 16 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಅಂತ್ಯಗೊಳಿಸುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಅಭಿಮಾನಿಗಳು.

ಇದನ್ನೂ ಓದಿ: IPL 2024: RCB ಗೆದ್ದರೆ ಹೊಸ ಇತಿಹಾಸ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ:

ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.